ಬಿಜೆಪಿಯಲ್ಲಿ ಸದ್ದಿಲ್ಲದ ಬದಲಾವಣೆ


Team Udayavani, Mar 26, 2019, 6:00 AM IST

q-21

ಎರಡನೇ ಬಾರಿಗೆ ಅಧಿಕಾರವನ್ನೇರಬೇಕು ಎಂಬ ಯೋಚನೆಯಲ್ಲಿರುವ ಬಿಜೆಪಿ ಇದುವರೆಗೆ (ಮಾ.25) 306 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದರೆ ಈ ಬಾರಿ ಅದು ಅನೇಕ ಹಳೆಯ ಮುಖಗಳನ್ನು ಉಳಿಸಿಕೊಂಡಿಲ್ಲ ಎನ್ನುವುದೇ ವಿಶೇಷ. ಪಕ್ಷದ ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿಯವರು ವಯಸ್ಸಿನ ಕಾರಣ ನೀಡಿ ಚುನಾವಣಾ ಸ್ಪರ್ಧೆಯಿಂದ ಹಿಂದಕ್ಕೆ ಸರಿದಿದ್ದಾರೆ ಎನ್ನಲಾಗಿದೆ. ಉಳಿದಂತೆ ಸುಮಾರು 50 ಮಂದಿ ಹಾಲಿ ಲೋಕಸಭಾ ಸದಸ್ಯರಿಗೆ

ಟಿಕೆಟ್‌ ನಿರಾಕರಿಸಲಾಗಿದೆ. ಆಡಳಿತ ವಿರೋಧಿ ಅಲೆ, ಕೆಲವು ಕ್ಷೇತ್ರಗಳಲ್ಲಿ ಸಂಸದರಿಗೆ ಇರುವ ವೈಯಕ್ತಿಕ ವರ್ಚಸ್ಸು ಸೇರಿ ಹಲವು ಕಾರಣಗಳಿಂದ ಹಾಲಿ ಸಂಸದರಿಗೆ ಟಿಕೆಟ್‌ ನಿರಾಕರಿಸಲಾಗಿದೆ.

ಕಲ್‌ರಾಜ್‌ ಮಿಶ್ರಾ, ಶಾಂತಕುಮಾರ್‌, ಬಿ.ಸಿ.ಖಂಡೂರಿ, ಭಗತ್‌ ಸಿಂಗ್‌ ಕೋಶಿಯಾರಿ ಅವರಿಗೆ ಪ್ರಸಕ್ತ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಲಾಗಿಲ್ಲ.
ಈ ಬದಲಾವಣೆ 2014ರಲ್ಲಿ ನರೇಂದ್ರ ಮೋದಿ ಮತ್ತು ಅಮಿತ್‌ ಶಾ ನೇತೃತ್ವದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಸಮಯದಿಂದಲೇ ಶುರುವಾಗಿತ್ತು. ಕೇಂದ್ರ ಸಂಪುಟದಲ್ಲಿ 75 ವರ್ಷ ಮೀರಿದ ನಾಯಕರಿಗೆ ಸಚಿವ ಸ್ಥಾನ ನೀಡಲಾಗುವುದಿಲ್ಲ ಎಂದು ನಿರ್ಧಾರ ಕೈಗೊಳ್ಳಲಾಗಿತ್ತು. 2014ರ ಬಳಿಕ ಬಿಜೆಪಿಯ ಹಿರಿಯ ನಾಯಕರು ಯಾರೂ ಕೂಡ ಪ್ರಮುಖ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಿಲ್ಲ. ಅವರೆಲ್ಲರನ್ನೂ ಹೊರಗಿಡಲಾಗಿದೆ ಎನ್ನುವುದು ಗಮನಾರ್ಹ. ಉತ್ತರ ಪ್ರದೇಶದ ಬಿಜೆಪಿ ನಾಯಕ ಕಲ್‌ರಾಜ್‌ ಮಿಶ್ರಾ ಮತ್ತು ಜಾರ್ಖಂಡ್‌ ಬಿಜೆಪಿಯ ಹಿರಿಯ ನಾಯಕ ಖರಿಯಾ ಮುಂಡಾ ಪಕ್ಷದ ಹಾಲಿ ವರಿಷ್ಠರ ನಿರ್ಧಾರವನ್ನು ಒಪ್ಪಿಕೊಳ್ಳುವುದಾಗಿಯೇ ಹೇಳಿಕೊಂಡಿದ್ದಾರೆ.

ಗುಜರಾತ್‌ನ ಗಾಂಧಿನಗರ ಕ್ಷೇತ್ರದ ಸಂಸದರಾಗಿರುವ ಎಲ್‌.ಕೆ.ಅಡ್ವಾಣಿ ಪ್ರಸಕ್ತ ಚುನಾವಣೆಯಲ್ಲಿ ಅವಕಾಶ ನಿರಾಕರಿಸಲಾಗಿರುವ ಬಗ್ಗೆ ಸಾರ್ವಜನಿಕವಾಗಿ ಏನನ್ನೂ ಹೇಳಿಲ್ಲ. ಈ ಬಗ್ಗೆ ಪರ-ವಿರೋಧದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದೆ. ಹೆಸರು ಬಹಿರಂಗಪಡಿಸಲಿಚ್ಛಿಸದ ಬಿಜೆಪಿ ನಾಯಕರ ಪ್ರಕಾರ ಹಿರಿಯ ನಾಯಕರ ಬಗ್ಗೆ ಪಕ್ಷ ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳುತ್ತದೆ.

ಇನ್ನು ಛತ್ತೀಸ್‌ಗಢದಲ್ಲಿ ಎಲ್ಲಾ 10 ಕ್ಷೇತ್ರಗಳಿಗೆ ಹೊಸಬರನ್ನೇ ಆಯ್ಕೆ ಮಾಡಿದೆ. ಮಧ್ಯಪ್ರದೇಶಕ್ಕೆ ಘೋಷಣೆ ಮಾಡಲಾಗಿರುವ 15 ಹೆಸರಿನ ಪೈಕಿ ಐವರು ಹೊಸಮುಖಗಳು. 2018ರ ಡಿಸೆಂಬರ್‌ನಲ್ಲಿ ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಂಡಿತ್ತು.

ಬಿಹಾರಕ್ಕೆ ಸಂಬಂಧಿಸಿದಂತೆ 17 ಕ್ಷೇತ್ರಗಳಲ್ಲಿ ಮೂರರಲ್ಲಿ ಹೊಸಬರನ್ನು ಆಯ್ಕೆ ಮಾಡಲಾಗಿದೆ. ಐದು ಕ್ಷೇತ್ರಗಳನ್ನು ಜೆಡಿಯುಗೆ ಬಿಟ್ಟುಕೊಟ್ಟಿದೆ. ಬಿಜೆಪಿಯ ಈ ಕ್ರಮ ಮುಕ್ತವಾಗಿರುವುದನ್ನು ತೋರಿಸುತ್ತದೆ ಮತ್ತು ಹೊಸಬರಿಗೆ ಅವಕಾಶ ಕೊಟ್ಟಿರುವುದನ್ನು ತೋರಿಸುತ್ತದೆ ಎಂದು ನಿತೀಶ್‌ ಕುಮಾರ್‌ ಸರ್ಕಾರದ ಹಿರಿಯ ಸಚಿವರೊಬ್ಬರು ಹೇಳಿದ್ದಾರೆ. ರಾಜಕೀಯ ಕ್ಷೇತ್ರದ ವಿಶ್ಲೇಷಕರ ಪ್ರಕಾರ ಕೆಲವೊಂದು ರಾಜ್ಯಗಳಲ್ಲಿ ಬಿಜೆಪಿ ವಿರುದ್ಧ ಪ್ರತಿಪಕ್ಷಗಳು ಮೈತ್ರಿ ಮಾಡಿಕೊಂಡಿವೆ. ಹೊಸ ಗುರಿಯನ್ನು ಪಕ್ಷ ಹಾಕಿಕೊಂಡಿದೆ. ಅದನ್ನು ಮುಟ್ಟುವ ನಿಟ್ಟಿನಲ್ಲಿ ಈ ಬದಲಾವಣೆ ಮಾಡಿಕೊಳ್ಳಲಾಗಿದೆ. ಬಿಜೆಪಿಯನ್ನು ಸ್ಥಾಪಿಸಿ ಬಲಪಡಿಸಿದ ನಾಯಕರನ್ನು ಅವಗಣಿಸಲಾಗಿದೆ, ಇದು ಸರಿಯಾದ ಕ್ರಮವಲ್ಲ ಎನ್ನುವುದು ಕಾಂಗ್ರೆಸ್‌ನ ವಾದ.

ಉ.ಪ್ರದಲ್ಲೂ ಲೆಕ್ಕಾಚಾರ ಬದಲು
ಉತ್ತರ ಪ್ರದೇಶದಲ್ಲಿ ಗೆಲ್ಲುವ ಛಾತಿ ಇರುವ ವ್ಯಕ್ತಿಗಳನ್ನು ಆಯ್ಕೆ ಮಾಡುವುದು ಸವಾಲಿನ ಕೆಲಸವೇ. ಬಿಎಸ್‌ಪಿ ಮತ್ತು ಎಸ್‌ಪಿ ಮಾಡಿಕೊಂಡಿರುವ ಮೈತ್ರಿಕೂಟ ನಿಜಕ್ಕೂ ಪಕ್ಷಕ್ಕೆ ಸವಾಲಾಗಿಯೇ ಇದೆ ಎಂದು ಹಿರಿಯ ನಾಯಕರೊಬ್ಬರು ಅಭಿಪ್ರಾಯಪಡುತ್ತಾರೆ. ಉತ್ತರ ಪ್ರದೇಶಕ್ಕೆ ಸಂಬಂಧಿಸಿದಂತೆ ಪ್ರಕಟವಾಗಿರುವ 31 ಅಭ್ಯರ್ಥಿಗಳ ಪಟ್ಟಿಯ ಪೈಕಿ ಆರು ಮಂದಿಯನ್ನು ಕೈಬಿಡಲಾಗಿದೆ. ಹಿಂದಿನ ಚುನಾವಣೆಯಲ್ಲಿ ಬಿಜೆಪಿ 78ರ ಪೈಕಿ 71ನ್ನು ಗೆದ್ದಿತ್ತು. ಹೊಸ ಮುಖಗಳನ್ನು ಆಯ್ಕೆ ಮಾಡುವ ಮೂಲಕ ಆಡಳಿತ ವಿರೋಧಿ ಅಲೆಯ ಪ್ರಭಾವ ತಗ್ಗಿಸಲು ಕ್ರಮ ಕೈಗೊಂಡಿದೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.