ಧ್ರುವನಾರಾಯಣ ಶಕ್ತಿ ಪ್ರದರ್ಶನ

Team Udayavani, Mar 26, 2019, 1:05 PM IST

druvanara

ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ, ಸಂಸದ ಆರ್‌.ಧ್ರುವನಾರಾಯಣ ಸೋಮವಾರ ತಮ್ಮ ನಾಮಪತ್ರ ಸಲ್ಲಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ, ಶಾಸಕರಾದ ಆರ್‌. ನರೇಂದ್ರ, ಎಸ್‌. ಯತೀಂದ್ರ, ಅನಿಲ್‌ಚಿಕ್ಕಮಾದು ಅವರೊಂದಿಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ. ಕಾವೇರಿಗೆ ನಾಮಪತ್ರ ಸಲ್ಲಿಸಿದರು.

ಸೋಮವಾರ ಬೆಳಗ್ಗೆ ತಮ್ಮ ಮನೆದೇವರು ಬಿಳಿಗಿರಿರಂಗನಬೆಟ್ಟದ ಬಿಳಿಗಿರಿರಂಗನಾಥಸ್ವಾಮಿ, ಚಾಮರಾಜನಗರದ ಸಾರನಾಥ ಬುದ್ದ ವಿಹಾರ, ಕೊಳದ ಗಣಪತಿ ಹಾಗೂ ಚಾಮರಾಜೇಶ್ವರ ದೇವಸ್ಥಾನದಲ್ಲಿ ಧ್ರುವ ವಿಶೇಷಪೂಜೆ ಸಲ್ಲಿಸಿದರು.

ನಗರದ ಚಾಮರಾಜೇಶ್ವರ ದೇವಸ್ಥಾನದ ಆವರಣದಿಂದ ತೆರೆದ ವಾಹನದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರೊಡನೆ ಮೆರವಣಿಗೆಯಲ್ಲಿ ತೆರಳಿದರು. ಭುವನೇಶ್ವರಿ ವೃತ್ತ, ಬಿ. ರಾಚಯ್ಯ ಜೋಡಿ ರಸ್ತೆ ಮೂಲಕ ಸಾಗಿ ಜಿಲ್ಲಾಡಳಿತ ಭವನದ ಗೇಟ್‌ ಬಳಿ ಮೆರವಣಿಗೆ ಅಂತ್ಯಗೊಂಡಿತು.

ಅಲ್ಲಿಂದ ಜಿಲ್ಲಾ ಉಸ್ತುವಾರಿ ಸಚಿವ‌ ಸಿ.ಪುಟ್ಟರಂಗಶೆಟ್ಟಿ, ಶಾಸಕ ಡಾ.ಯತೀಂದ್ರ, ನರೇಂದ್ರ, ಅನಿಲ್‌ಚಿಕ್ಕಮಾದು ಅವರ ಜೊತೆ ಕಾಲ್ನಡಿಗೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ತಮ್ಮ ನಾಮಪತ್ರ ಸಲ್ಲಿಸಿದರು. ನಂತರ ರಾಮಸಮುದ್ರದಲ್ಲಿರುವ ಡಾ. ಬಿ.ಆರ್‌.ಅಂಬೇಡ್ಕರ್‌ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಮೆರವಣಿಗೆಯಲ್ಲಿ ಮಾಜಿ ಶಾಸಕರಾದ ಎ.ಆರ್‌.ಕೃಷ್ಣಮೂರ್ತಿ, ಎಸ್‌. ಬಾಲರಾಜು, ಎಸ್‌. ಜಯಣ್ಣ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಪಿ. ಮರಿಸ್ವಾಮಿ, ಉಪಾಧ್ಯಕ್ಷ ಬಿ.ಕೆ.ರವಿಕುಮಾರ್‌, ಎಸ್‌.ಸಿ. ಬಸವರಾಜು, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಲತಾಜಯಣ್ಣ, ಜಿಪಂ ಅಧ್ಯಕ್ಷೆ ಶಿವಮ್ಮ, ಸದಸ್ಯರಾದ ಕೆ.ಪಿ. ಸದಾಶಿವಮೂರ್ತಿ, ಕೆರೆಹಳ್ಳಿ ನವೀನ್‌,

ಬ್ಲಾಕ್‌ ಅಧ್ಯಕ್ಷರಾದ ಎ.ಎಸ್‌.ಗುರುಸ್ವಾಮಿ, ಮಹಮದ್‌ ಅಸರ್‌, ಮುಖಂಡರಾದ ಡಿ.ಎನ್‌.ನಟರಾಜು, ತೋಟೇಶ್‌, ಜಿಪಂ ಮಾಜಿ ಸದಸ್ಯ ಅರಕಲವಾಡಿ ಸೋಮನಾಯಕ, ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಗಳಾದ ಆರ್‌.ಮಹದೇವು, ಚಿಕ್ಕಮಹದೇವು, ಕಾಗಲವಾಡಿಚಂದ್ರು ಹಾಗೂ ಜಾ.ದಳ ಜಿಲ್ಲಾಧ್ಯಕ್ಷ ಕಾಮರಾಜ್‌, ಮುಖಂಡರಾದ ಮಹೇಶಗೌಡ, ಪಾಲ್ಗೊಂಡಿದ್ದರು.

ಜೆಡಿಎಸ್‌ ಸಾಥ್‌: ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಮಟ್ಟದಲ್ಲಿ ಜೆಡಿಎಸ್‌, ಕಾಂಗ್ರೆಸ್‌ ಕಾರ್ಯಕರ್ತರು ಹೊಂದಾಣಿಕೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಜೆಡಿಎಸ್‌ ಮುಖಂಡರು, ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿ ಧ್ರುವನಾರಾಯಣ್‌ ಅವರಿಗೆ ಬೆಂಬಲ ಸೂಚಿಸಿದರು. ಮೆರವಣಿಗೆಯಲ್ಲಿ ಚೆಂಡೆ ಕುಣಿತ, ಡೊಳ್ಳು ಕುಣಿತ ತಂಡ ಭಾಗವಹಿಸಿ ಮೆರಗು ನೀಡಿತು.

ಮತದಾರರ ಆಶೀರ್ವಾದ: ಕಳೆದ 10 ವರ್ಷಗಳಿಂದ ತಾವು ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ತಂದಿರುವ ಯೋಜನೆಗಳನ್ನು ಮತದಾರರು ಗುರುತಿಸಿದ್ದು, ಈ ಚುನಾವಣೆಯಲ್ಲೂ ತನ್ನನ್ನು ಆಶೀರ್ವದಿಸಲಿದ್ದಾರೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ಆರ್‌. ಧ್ರುವನಾರಾಯಣ ವಿಶ್ವಾಸ ವ್ಯಕ್ತಪಡಿಸಿದರು. ಸಂಸದನಾಗಿ ಜನರ ನಡುವೆ ಇದ್ದೂ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕ್ಷೇತ್ರದಲ್ಲಿ ಕೈಗೊಂಡಿದ್ದೇನೆ.

ಹೀಗಾಗಿ ಕಳೆದ ಬಾರಿಯಂತೆ ಹೆಚ್ಚು ಅಂತರದಿಂದ ಜಯಗಳಿಸಲಿದ್ದೇನೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. ನಾಳೆಯಿಂದ ಚುನಾವಣಾ ಪ್ರಚಾರ ಆರಂಭವಾಗಲಿದೆ. ಮಂಡ್ಯದಲ್ಲಿ ಜೆಡಿಎಸ್‌ ಅಭ್ಯರ್ಥಿ ನಿಖೀಲ್‌ ಅವರ ನಾಮಪತ್ರ ಸಲ್ಲಿಕೆಯಿಂದ ಸಚಿವರಾದ ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್‌, ಪುಟ್ಟರಾಜು ಅವರು ತಮ್ಮ ನಾಮಪತ್ರ ಸಲ್ಲಿಕೆಗೆ ಭಾಗವಹಿಸಲು ಆಗಲಿಲ್ಲ.

ಕ್ಷೇತ್ರದಲ್ಲಿ ಮುಂದಿನ ದಿನಗಳಲ್ಲಿ ನಡೆಯುವ ಪ್ರಚಾರ ಸಭೆಗಳಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸಹಿತ ಸಚಿವರು ಬಂದು ಸಂಪೂರ್ಣ ಬೆಂಬಲ ನೀಡಲಿದ್ದಾರೆ. ಈಗಾಗಲೇ ಜೆಡಿಎಸ್‌ ಜಿಲ್ಲಾ ಪದಾಧಿಕಾರಿಗಳು ಮೆರವಣಿಗೆಯಲ್ಲಿ ಭಾಗವಹಿಸಿ ಬೆಂಬಲ ನೀಡಿದ್ದಾರೆ ಎಂದು ತಿಳಿಸಿದರು.

ಸಂಚಾರ ಅಸ್ತ ವ್ಯಸ್ತ: ಧ್ರುವನಾರಾಯಣ ನಾಮಪತ್ರ ಸಲ್ಲಿಸುವ ಕಾರ್ಯಕ್ರಮ ಇದ್ದ ಕಾರಣ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಸೇರಿದ್ದು, ಬಿ. ರಾಚಯ್ಯ ಜೋಡಿರಸ್ತೆಯಲ್ಲಿನ ಸಂಚಾರ ಕೆಲಕಾಲ ಅಸ್ತವ್ಯಸ್ತಗೊಂಡಿತು.

ಒಂದು ಬದಿಯಲ್ಲಿ ಭಾರಿ ಸಂಖ್ಯೆಯಲ್ಲಿ ಜನ, ವಾಹನ ಇದ್ದ ಕಾರಣ ಮತ್ತೂಂದು ಬದಿ ರಸ್ತೆಯಲ್ಲೇ ಎರಡು ಕಡೆ ವಾಹನಗಳೂ ಸಂಚರಿಸಿದವು. ಇನ್ನು ಈ ವೇಳೆ ಜಿಲ್ಲಾಡಳಿತ ಭವನಕ್ಕೂ ಸಾರ್ವಜನಿಕರ ಪ್ರವೇಶವನು ನಿರ್ಬಂಧಿಸಲಾಗಿತ್ತು. ತಮ್ಮ ಕೆಲಸ, ಕಾರ್ಯಗಳಿಗೆ ಆಗಮಿಸಿದ್ದ ಸಾಕಷ್ಟು ಮಂದಿ ಒಂದು ತಾಸಿಗೂ ಹೆಚ್ಚು ಕಾಲ ಕಾಯಬೇಕಾಯಿತು. ಜಿಲ್ಲಾಡಳಿತ ಭವನದ 200 ಮೀಟರ್‌ ವ್ಯಾಪ್ತಿಯಲ್ಲಿ ಪತ್ರಕರ್ತರಿಗೂ ಪ್ರವೇಶ ನಿರ್ಬಂಧಿಸಲಾಗಿತ್ತು.

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.