ಕಡೂರು: ಎಪಿಎಂಸಿ ಆವರಣದಲ್ಲಿ ಧಾರ್ಮಿಕ ಪ್ರವಚನ

Team Udayavani, Mar 28, 2019, 2:40 PM IST

chikk-1
ಕಡೂರು: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಮುಸ್ಲಿಂ ಬಾಂಧವರ ಇಸ್ತೇಮಾ ಕೆಲಿಯೇ ಎಂಬ ಎರಡು ದಿನಗಳ ಧರ್ಮ ಪ್ರವಚನ ಕಾರ್ಯಕ್ರಮ ಬುಧವಾರ ಆರಂಭವಾಯಿತು.
ಚಿಕ್ಕಮಗಳೂರು ಜಿಲ್ಲೆ ಮತ್ತು ಸುತ್ತಮುತ್ತಲ ಇತರ ತಾಲೂಕು ಕೇಂದ್ರಗಳ ಸುಮಾರು 20 ಸಾವಿರಕ್ಕೂ ಹೆಚ್ಚು ಮುಸ್ಲಿಂ ಬಾಂಧವರು ಪ್ರವಚನದಲ್ಲಿ ಭಾಗಿಯಾಗಿದ್ದು, ಬೆಂಗಳೂರಿನಿಂದ ಬಂದಿರುವ 12 ಮಂದಿ ಧರ್ಮ ಗುರುಗಳು ಬುಧವಾರ ಮತ್ತು ಗುರುವಾರ ಬದುಕಿನ ಸಾರವನ್ನು ಅರಿತುಕೊಳ್ಳುವ ಪ್ರವಚನ ನೀಡಲಿದ್ದಾರೆ.
ಬುಧವಾರ ಮಧ್ಯಾಹ್ನ 2 ಗಂಟೆಗೆ ಆರಂಭವಾದ ಪ್ರವಚನ ಕಾರ್ಯಕ್ರಮ ರಾತ್ರಿ 10 ಗಂಟೆಗೆ ಮುಗಿಯಲಿದ್ದು, ಗುರುವಾರ ಬೆಳಗ್ಗೆ 5 ಗಂಟೆಗೆ ಪ್ರವಚನ ಕಾರ್ಯಕ್ರಮ ಪ್ರಾರಂಭವಾಗಿ ರಾತ್ರಿ 10 ಗಂಟೆಗೆ ಮುಕ್ತಾಯವಾಗಲಿದೆ. ಪ್ರವಚನದ ಮಧ್ಯೆ 5 ಬಾರಿ ನಮಾಜ್‌ ಕಾರ್ಯಕ್ರಮವೂ ಅಲ್ಲಿಯೇ ನಡೆಯಲಿದೆ ಎಂದು ಸಂಘಟಕರು ತಿಳಿಸಿದರು.
ಕಾರ್ಯಕ್ರಮಕ್ಕಾಗಿ ಅಚ್ಚುಕಟ್ಟಾದ ವ್ಯವಸ್ಥೆ ಕಲ್ಪಿಸಲಾಗಿದ್ದು, ಕಡೂರು ಮುಸ್ಲಿಂ ಬಾಂಧವರು ಸ್ವತ್ಛತೆ, ನೀರು ಮತ್ತಿತರ ಮೂಲ ಸೌಕರ್ಯ ಕಲ್ಪಿಸುವ ಕಾರ್ಯವನ್ನು ಕೈಗೆತ್ತಿಕೊಂಡಿದ್ದಾರೆ. ಬೀರೂರು ಮತ್ತು ತರೀಕೆರೆ ಬಾಂಧವರು ರಿಯಾಯಿತಿ ದರದಲ್ಲಿ ಊಟದ ವ್ಯವಸ್ಥೆ ಕಲ್ಪಿಸಿದ್ದಾರೆ. ಬಾಣವಾರ ಮತ್ತು ಚಿಕ್ಕಮಗಳೂರು ಮುಸ್ಲಿಂ ಬಾಂಧವರು ಟೀ ಮತ್ತು ಬಿಸ್ಕತ್‌ ವ್ಯವಸ್ಥೆ ಮಾಡಿದ್ದಾರೆ.
ಬಿಸಿಲಿನ ಬೇಗೆ ಹೆಚ್ಚಾಗಿರುವುದರಿಂದ ಆಗಮಿಸುವ ಎಲ್ಲಾ ಬಾಂಧವರಿಗೆ ಕಲ್ಲಂಗಡಿ, ತಂಪು ಪಾನೀಯ, ಮಜ್ಜಿಗೆ ಉಚಿತವಾಗಿ ನೀಡಲಾಗುತ್ತಿದೆ. ಸಮಾರಂಭ ಸ್ಥಳದಲ್ಲಿ ಅಲ್ಲಲ್ಲಿ ನೂರಕ್ಕೂ ಹೆಚ್ಚು ಕುಡಿಯುವ ನೀರಿನ ಕ್ಯಾನ್‌ಗಳನ್ನು ಇರಿಸಲಾಗಿದೆ. ಪ್ರವಚನ ಮುಗಿದ ಬಳಿಕ ಊಟ ಸೇವಿಸಿ ಕಾರ್ಯಕ್ರಮದ ಸ್ಥಳದಲ್ಲಿಯೇ ಮಲಗುವ ವ್ಯವಸ್ಥೆ ಮಾಡಲಾಗಿದೆ.
ಸುಮಾರು 150ಕ್ಕೂ ಹೆಚ್ಚು ಪೇದೆಗಳು, 6 ಪಿಎಸ್‌ಐ, 2 ಸಿಪಿಐ ಹಾಗೂ ಓರ್ವ ಡಿವೈಎಸ್‌ಪಿ ನೇತೃತ್ವದಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ. ವಾಹನಗಳ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಎಪಿಎಂಸಿ ಆವರಣದ ಎರಡೂ ಬದಿಯ ಗೇಟ್‌ ತೆರೆದು ವಾಹನಗಳ ಓಡಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಕಡೂರು ಪಿಎಸ್‌ಐ ವಿಶ್ವನಾಥ್‌ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.