ಪಡುಬಿದ್ರಿ: ಮತದಾನ ಜಾಗೃತಿ ಜಾಥಾ; ಮತಯಂತ್ರ ಪ್ರಾತ್ಯಕ್ಷಿಕೆ

Team Udayavani, Mar 29, 2019, 6:00 AM IST

Voting-awareness

ಪಡುಬಿದ್ರಿ: ಮತದಾನವು ನಮಗೆ ನೀಡಲ್ಪಟ್ಟ ಸಂವಿಧಾನದತ್ತ ಹಕ್ಕು. ಅದನ್ನು ಮರೆಯದೇ ಚಲಾಯಿಸಬೇಕು ಎಂದು ಉಡುಪಿ ಜಿಲ್ಲಾ ಮಹಿಳಾ ಮತ್ತು ಶಿಶು ಕಲ್ಯಾಣ ಇಲಾಖಾ ಉಪ ನಿರ್ದೇಶಕಿ ಗ್ರೇಸಿ ಗೋನ್ಸಾಲ್ವಿಸ್‌ ಹೇಳಿದರು.

ಅವರು ಪಡುಬಿದ್ರಿಯ ಮಾರುಕಟ್ಟೆ ಪ್ರದೇಶದಲ್ಲಿ ಮಾ. 28ರಂದು ಭಾರತದ ಚುನಾವಣಾ ಆಯೋಗ ಮತ್ತು ಉಡುಪಿ ಜಿಲ್ಲಾ ಸ್ವೀಪ್‌ ಸಮಿತಿಯ ವತಿಯಿಂದ ಆಯೋಜಿಸಲಾಗಿದ್ದ ಮತದಾನ ಜಾಗೃತಿಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿದ್ದ ಉಡುಪಿ ತಾ| ಸಿಡಿಪಿಒ ವೀಣಾ ಮಾತನಾಡಿದರು. ಅಂಗನವಾಡಿ ಮೇಲ್ವಿಚಾರಕಿ ಶಕುಂತಳಾ, ಪಡುಬಿದ್ರಿ ಪಿಡಿಒ ಪಂಚಾಕ್ಷರಿ ಸ್ವಾಮಿ ಉಪಸ್ಥಿತರಿದ್ದರು. ಪಡುಬಿದ್ರಿ ಭಾಗದ ಅಂಗನವಾಡಿ ಸಹಾಯಕಿಯರು ಮದುವೆ ಮನೆಯ ಮದುವಣಗಿತ್ತಿಯರಾದರೂ ಮತದಾನ ಮಾಡಲು ಮರೆಯದಿರಿ ಎಂದು ಬಿಂಬಿಸುವಂತಹ ಬೀದಿ ನಾಟಕ ಪ್ರದರ್ಶಿಸಿ ಮತದಾನದ ಜಾಗೃತಿ ಮೂಡಿಸಿದರು. ನೆರೆದಿದ್ದ ಸಾರ್ವಜನಿಕರಿಗೆ, ಮಹಿಳೆಯರಿಗೆ ಮತದಾನ ಜಾಗೃತಿ ಕುರಿತಾದ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು.

ತೋಟಗಾರಿಕೆ ಇಲಾಖಾಧಿಕಾರಿ ಹಾಗೂ ಸ್ವೀಪ್‌ ಸಮಿತಿಯ ಸೆಕ್ಟರ್‌ ಅಫೀಸರ್‌ ನಿಧೀಶ್‌ ವಿದ್ಯುನ್ಮಾನ ಮಂತಯಂತ್ರ ಕುರಿತ ಪ್ರಾತ್ಯಕ್ಷಿಕೆ, ಸಾರ್ವಜನಿಕರಿಗೆ ಮತದಾನ ಮಾಡುವ ಮತ್ತು ಮತಯಂತ್ರದಲ್ಲಿ ನಾವು ಯಾರಿಗೆ ಮತದಾನ ಮಾಡಿರುವುದಾಗಿನ ಮಾಹಿತಿಯನ್ನು ನೀಡುವ ವಿವಿ ಪ್ಯಾಟ್‌ ಯಂತ್ರದ ಪ್ರಾತ್ಯಕ್ಷಿಕೆಯೊಂದಿಗೆ ವಿವರಿಸಿದರು. ಪಡುಬಿದ್ರಿ ಪೇಟೆಯಿಂದ ಪಡುಬಿದ್ರಿ, ಮುದರಂಗಡಿ, ಶಿರ್ವ, ಕಾಪು ಹಾಗೂ ಮೂಡಬೆಟ್ಟುಗಳ ಅಂಗನವಾಡಿ, ಆಶಾ ಕಾಯಕರ್ತೆಯರು, ಶಿಶು ಅಭಿವೃದ್ಧಿ ಇಲಾಖಾ ಸಹಾಯಕಿಯರಿಂದ ಮತದಾನದ ಮಹತ್ವದ ಜಾಗೃತಿ ಮೂಡಿಸುವ ಜಾಥಾವನ್ನು ಪಡುಬಿದ್ರಿ ಮಾರುಕಟ್ಟೆಯವರೆಗೆ ನಡೆಸಿದರು.ಪಡುಬಿದ್ರಿ ಪಿಡಿಒ ಪಂಚಾಕ್ಷರಿ ಸ್ವಾಮಿ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.