ವಿದೇಶ ರತ್ನ ಚಿತ್ರಮಂಜರಿ

Team Udayavani, Mar 29, 2019, 6:00 AM IST

30

ಸಿನಿಮಾಸಕ್ತ ಅನಿವಾಸಿ ಕನ್ನಡಿಗರ ಪರಿಶ್ರಮದಿಂದ ಮೂಡಿಬರುತ್ತಿರುವ “ರತ್ನಮಂಜರಿ’ ಚಿತ್ರ ತೆರೆಗೆ ಬರೋದಕ್ಕೆ ಸಿದ್ಧವಾಗಿದೆ. ಸದ್ಯ ತನ್ನೆಲ್ಲಾ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳನ್ನು ಪೂರ್ಣಗೊಳಿಸಿರುವ “ರತ್ನಮಂಜರಿ’ ಚಿತ್ರತಂಡ ಇತ್ತೀಚೆಗೆ ತನ್ನ ಟ್ರೇಲರ್‌ನ್ನು ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿದೆ. ಇದೇ ವೇಳೆ ಮಾಧ್ಯಮಗಳ ಮುಂದೆ ಬಂದಿದ್ದ ಚಿತ್ರತಂಡ, “ರತ್ನಮಂಜರಿ’ ಚಿತ್ರದ ವಿಶೇಷತೆಗಳು ಮತ್ತು ಚಿತ್ರ ಸಾಗಿ ಬಂದ ರೀತಿಯನ್ನು ತೆರೆದಿಟ್ಟಿತು. ಕೆಲ ವರ್ಷಗಳ ಹಿಂದೆ ವಿದೇಶದಲ್ಲಿ ನಡೆದ ಭಾರತೀಯ ವ್ಯಕ್ತಿಯ ಕೊಲೆ ಮತ್ತು ಅದರ ಸುತ್ತ ನಡೆಯುವ ಕೆಲವು ಘಟನೆಗಳನ್ನು ಆಧರಿಸಿ ಈ ಚಿತ್ರವನ್ನು ತೆರೆಗೆ ತರಲಾಗುತ್ತಿದೆಯಂತೆ. ಚಿತ್ರದ ಬಹುಭಾಗ ವಿದೇಶದಲ್ಲಿ ನಡೆದರೆ, ಉಳಿದ ಕೆಲ ಭಾಗ ಮಡಿಕೇರಿ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯಲಿದೆ.

ಚಿತ್ರದಲ್ಲಿ ಯಾರು “”ರತ್ನ ಮಂಜರಿ’ ಅನ್ನುವುದೇ ಒಂದು ಸಸ್ಪೆನ್ಸ್‌. ಇದು ದೆವ್ವ, ದೇವರು, ಬುದ್ಧಿವಂತಿಕೆಯ ಸುತ್ತ ನಡೆಯುತ್ತದೆ. ನಾಯಕ ತನ್ನ ಪೋಟೋಗ್ರಾಫಿಕ್‌ ಮೆಮೋರಿಯ ಮೂಲಕ ಹೇಗೆಲ್ಲ ಸಮಸ್ಯೆಯನ್ನು ಭೇದಿಸುತ್ತಾನೆ ಎನ್ನುವುದೇ ಈ ಚಿತ್ರ’ ಎನ್ನುತ್ತಾರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ನಿರ್ದೇಶಕ ಪ್ರಸಿದ್ಧ್.

ಈ ಹಿಂದೆ “ಪುನರಪಿ’, “ಮನೋರಥ’ ಮೊದಲಾದ ಚಿತ್ರಗಳಲ್ಲಿ ಅಭಿನಯಿಸಿದ್ದ ರಾಜ್‌ ಚರಣ್‌ ಈ ಚಿತ್ರದಲ್ಲಿ ನಾಯಕ ನಟನಾಗಿ ಕಾಣಿಸಿಕೊಂಡಿದ್ದಾರೆ. ತಮ್ಮ ಪಾತ್ರದ ಬಗ್ಗೆ ಮಾತನಾಡಿದ ರಾಜ್‌ ಚರಣ್‌, “ಇದು ಪ್ರೇಕ್ಷಕರಿಗೆ ವಿಭಿನ್ನ ಅನುಭವ ಕೊಡುವ ಚಿತ್ರ. ತಾಂತ್ರಿಕವಾಗಿ ಚಿತ್ರ ಅದ್ಭುತವಾಗಿ ಮೂಡಿಬಂದಿದೆ. ಅವೆಂಜರ್, ಸ್ಪೈಡರ್‌ ಮ್ಯಾನ್‌ ಚಿತ್ರಗಳಿಗೆ ಮಾಸ್ಕ್ ವಿನ್ಯಾಸ ಮಾಡಿದ್ದ ತಂಡವೇ ಈ ಚಿತ್ರಕ್ಕೂ ಮಾಸ್ಕ್ಗಳನ್ನು ವಿನ್ಯಾಸ ಮಾಡಿ ಕೊಟ್ಟಿದೆ. ಈ ಚಿತ್ರದಲ್ಲಿ ಮಾಸ್ಕ್ ಕೂಡ ಒಂದು ಪ್ರಮುಖ ಪಾತ್ರ ವಹಿಸಿದೆ’ ಎಂದು ಹೇಳಿಕೊಂಡರು.

ಇನ್ನು ಚಿತ್ರದಲ್ಲಿ ನಾಯಕಿ ಅಖೀಲ ಪ್ರಕಾಶ್‌, ಎನ್‌ಆರ್‌ಐ ಇಂಡೋ ವೆಸ್ಟರ್ನ್ ಫ್ಯಾಷನ್‌ ಡಿಸೈನರ್‌ ಆಗಿ ಪಾತ್ರ ನಿರ್ವಹಿಸಿರುವುದಾಗಿ ಹಾಗೂ ಇನ್ನೊಬ್ಬ ನಟಿ ಪಲ್ಲವಿ ರಾಜು, ಮನೆ ಕೆಲಸದ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಂಡಿರುವುದಾಗಿ ತಮ್ಮ ಪಾತ್ರ ಪರಿಚಯ ಮಾಡಿಕೊಟ್ಟರು.

ಸದ್ಯ “ರತ್ನಮಂಜರಿ’ ಚಿತ್ರದ ಎರಡು ಹಾಡುಗಳು ಬಿಡುಗಡೆ­ಯಾಗಿದ್ದು, ಹರ್ಷವರ್ಧನ್‌ ರಾಜ್‌ ಹಾಡುಗಳಿಗೆ ಸಂಗೀತ ಸಂಯೋಜಿಸಿ­ದ್ದಾರೆ. ಪ್ರೀತಮ್‌ ತೆಗ್ಗಿನಮನೆ ಚಿತ್ರಕ್ಕೆ ಛಾಯಾಗ್ರಹಣ ಕಾರ್ಯ ನಿರ್ವಹಿ­ಸಿದ್ದಾರೆ. ಅನಿವಾಸಿ ಕನ್ನಡಿ­ಗರಾದ ಸಂದೀಪ್‌ ಕುಮಾರ್‌.ಎಸ್‌, ನಟರಾಜ್‌ ಹಳೇಬೀಡು ಮತ್ತಿತರರು ಜಂಟಿಯಾಗಿ “ರತ್ನಮಂಜರಿ’ ಚಿತ್ರವನ್ನು ನಿರ್ಮಿಸಿದ್ದಾರೆ. ಸದ್ಯ ಸೆನ್ಸಾರ್‌ ಮುಂದಿರುವ “ರತ್ನಮಂಜರಿ’ ಚಿತ್ರದ ಆಡಿಯೋ ಏಪ್ರಿಲ್‌ ಅಂತ್ಯಕ್ಕೆ ಬಿಡುಗಡೆಯಾಗಲಿದ್ದು, ಮೇ ತಿಂಗಳ ಅಂತ್ಯಕ್ಕೆ ಚಿತ್ರವನ್ನು ತೆರೆಗೆ ತರುವ ಯೋಜನೆಯಲ್ಲಿದೆ ಚಿತ್ರತಂಡ.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.