ಐಟಿ ದಾಳಿ: ಮುಗಿಬಿದ್ದ ಮೈತ್ರಿ ನಾಯಕರು


Team Udayavani, Mar 29, 2019, 6:10 AM IST

20-a

ಬೆಂಗಳೂರು: ರಾಜಕೀಯ ಮುಖಂಡರು ಹಾಗೂ ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಆದಾಯ ತೆರಿಗೆ ದಾಳಿ ರಾಜಕೀಯ ಪ್ರೇರಿತವಾಗಿದೆ ಎಂದು ರಾಜ್ಯದ ಮೈತ್ರಿಪಕಗಳ ಮುಖಂಡರು ಬೀದಿಗಿಳಿದು ಕೇಂದ್ರ ಸರ್ಕಾರದ ವಿರುದ್ದ ನೇರ ವಾಗ್ಧಾಳಿ ನಡೆಸಿದರು.

ಕೇಂದ್ರ ಸರ್ಕಾರ ಚುನಾವಣೆ ಸಂದರ್ಭದಲ್ಲಿಯೇ ಪ್ರತಿಪಕ್ಷಗಳ ನಾಯಕರನ್ನು ಗುರಿಯಾಗಿಟ್ಟು ದಾಳಿ ಮಾಡುತ್ತಿದ್ದು, ಲೋಕಸಭೆ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಐಟಿ ದಾಳಿ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಸೇರಿ ಎರಡೂ ಪಕ್ಷಗಳ ನಾಯಕರೂ ಕೇಂದ್ರದ ವಿರುದಟಛಿ ಹರಿಹಾಯ್ದರು.

ಮೋದಿ, ಶಾ ಕುಮ್ಮಕ್ಕಿನಿಂದ ದಾಳಿ: “ಬಿಜೆಪಿಯವರು ಹರಿಶ್ಚಂದ್ರನಮೊಮ್ಮಕ್ಕಳಾ? ಚುನಾವಣೆ ಸಂದರ್ಭದಲ್ಲಿಯೇ ಪ್ರತಿಪಕ್ಷಗಳ ನಾಯಕರಿಗೆ ಭಯ ಹುಟ್ಟಿಸಲು ಐಟಿ ದಾಳಿ ನಡೆಸಲಾಗುತ್ತಿದೆ. ಸೋಲಿನ ಭಯದಿಂದ ಬಿಜೆಪಿಯವರು ಐಟಿ ದಾಳಿ ನಡೆಸುತ್ತಿದ್ದಾರೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ಹಾಗೂ ಅರುಣ್‌ ಜೇಟ್ಲಿ ಅವರ  ಮ್ಮಕ್ಕಿನಿಂದಲೇ ಈ ದಾಳಿ ನಡೆದಿದೆ. ಅವರು ಹೇಳದೇ ಈ ರೀತಿಯ ದಾಳಿ ನಡೆಯಲು ಸಾಧ್ಯವಿಲ್ಲ. ತೆರಿಗೆ ವಂಚನೆ ಮಾಡಿ ಅಕ್ರಮ ಆಸ್ತಿ ಸಂಪಾದನೆ ಮಾಡಿದವರ ವಿರುದಟಛಿ ಕಾನೂನು ಕ್ರಮ ಕೈಗೊಳ್ಳಲಿ. ಆದರೆ, ವಿರೋಧ ಪಕ್ಷದ ಮೇಲೆ ರಾಜಕೀಯ ಸೇಡು ತೀರಿಸಿಕೊಳ್ಳಲು ಈ ರೀತಿಯ ದಾಳಿ ನಡೆಸುತ್ತಿರುವುದು ಇದು ಪ್ರಜಾಪ್ರಭುತ್ವ ಹಾಗೂ
ಸಂವಿಧಾನದ ಕಗ್ಗೊಲೆ ಎಂದರು.

ಎಪ್ಪತ್ತು ವರ್ಷದ ಆಡಳಿತದಲ್ಲಿ ಕಾಂಗ್ರೆಸ್‌ ಚುನಾವಣೆ ಸಮಯದಲ್ಲಿ ರಾಜಕೀಯ ವಿರೋಧಿಗಳ ಮೇಲೆ ಯಾವತ್ತೂ ದಾಳಿ ಮಾಡಿಲ್ಲ. ಬಿಜೆಪಿಯವರು ಶಾಶ್ವತವಾಗಿ ಅಧಿಕಾರದಲ್ಲಿ ಗೂಟ ಹೊಡೆದುಕೊಂಡು ಕೂಡುವುದಿಲ್ಲ. ಈ ಬಾರಿ ಚುನಾವಣೆಯಲ್ಲಿ ಕೇಂದ್ರದಲ್ಲಿ ಬಿಜೆಪಿಯೇತರ ಸರ್ಕಾರ ರಚನೆಯಾಗಲಿದೆ. ಅದೇ ಭಯದಿಂದ ದಾಳಿ ನಡೆಸಲಾಗುತ್ತಿದೆ. ಬಿಜೆಪಿಯವರು ರಾಜಕೀಯ ಪ್ರೇರಿತ ದಾಳಿಯನ್ನು ನಿಲ್ಲಿಸಬೇಕು.
ಇಲ್ಲದಿದ್ದರೆ, ರಸ್ತೆಗಿಳಿದು ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ಐಟಿ ಮುಖ್ಯಸ್ಥರು ಬಿಜೆಪಿ ಏಜೆಂಟ್‌

ರಾಜ್ಯದ ಆದಾಯ ತೆರಿಗೆ ಇಲಾಖೆ ಮುಖ್ಯಸ್ಥರು ಬಿಜೆಪಿಯ ಏಜೆಂಟ್‌ ರೀತಿ
ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರು ನಿವೃತ್ತಿಯ ನಂತರ ರಾಜ್ಯಪಾಲರನ್ನಾಗಿ
ಮಾಡುವ ಭರವಸೆ ನೀಡಿದ್ದಾರೆ. ಹೀಗಾಗಿಪ್ರತಿಪಕ್ಷ ಗಳ ನಾಯಕರ ಮನೆಗಳ ಮೇಲೆ
ದಾಳಿ ನಡೆಸುತ್ತಿದ್ದಾರೆ ಎಂದು ಸಿಎಂ ಕುಮಾರಸ್ವಾಮಿ ಆರೋಪಿಸಿದರು.
ಐಟಿ ದಾಳಿ ವಿರೋಧಿಸಿ ನಡೆದ ಪ್ರತಿ ಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ
ಅವರು, ರಾಜಕೀಯ ಪ್ರೇರಿತ ಐಟಿ ದಾಳಿಯಿಂದ ಕಾಂಗ್ರೆಸ್‌ ಜೆಡಿಎಸ್‌
ಕಾರ್ಯಕರ್ತರು ಧೃತಿಗೆಡಬೇಕಿಲ್ಲ.

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಪ್ರತಿಪಕ್ಷಗಳನ್ನು ಟಾರ್ಗೆಟ್‌ ಮಾಡಿದೆ. ಸಂವಿಧಾನ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಪ್ರಧಾನಿ ಮೋದಿ ಹೊರಟಿದ್ದಾರೆ ಎಂದರು.

ಗುರುವಾರ ನಡೆಯುವ ಐಟಿ ದಾಳಿಯ ಬಗ್ಗೆ ಬುಧವಾರವೇ ಹೇಳಿದ್ದೆ. ಬಿಜೆಪಿ
ಏಜೆಂಟರಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರು ಮುಂಬೈನಲ್ಲಿ ಎಷ್ಟು ಫ್ಲಾಟ್‌
ಖರೀದಿ ಮಾಡಿದ್ದಾರೆ ಎನ್ನುವುದು ನನಗೆ ಗೊತ್ತಿದೆ. ಅವರು ಅಕ್ರಮವಾಗಿ ಸಂಪಾದನೆ
ಮಾಡಿರುವ ದಾಖಲೆಗಳು ನನ್ನ ಬಳಿ ಇವೆ ಎಂದು ಕರ್ನಾಟಕ ಹಾಗೂ ಗೋವಾ
ಆದಾಯ ತೆರಿಗೆ ಇಲಾಖೆ ಮುಖ್ಯ ಆಯುಕ್ತ ಬಾಲಕೃಷ್ಣನ್‌ ಅವರ ವಿರುದ್ಧ
ವಾಗ್ಧಾಳಿ ನಡೆಸಿದರು.

ಬಿಜೆಪಿಯವರು ಶಾಸಕರಿಗೆ 20-30 ಕೋಟಿ ರೂ. ನೀಡಿ ಖರೀದಿಗೆ ಮುಂದಾಗಿ
ದ್ದಾಗ ಐಟಿ ಅಧಿಕಾರಿಗಳು ಮಲಗಿದ್ರಾ ? ಬಿಜೆಪಿ ನಾಯಕರ ಮೇಲೆ ಬಂದ ಎಷ್ಟು
ದೂರುಗಳನ್ನು ಆಧರಿಸಿ ದಾಳಿ ನಡೆಸಿದ್ದಾರೆ? ಸ್ಥಳೀಯ ನಾಯಕರಿಗೆ ಅಮಿತ್‌ ಶಾ ಪಟ್ಟಿ
ಕಳುಹಿಸುತ್ತಾರೆ. ಅದನ್ನು ಐಟಿ ಇಲಾಖೆಗೆ ಕಳುಹಿಸಿ ದಾಳಿ ನಡೆಸುತ್ತಾರೆ. ಬುಧವಾರ
ನಮ್ಮ ಪ್ರತಿಸ್ಪರ್ಧಿ ಐಟಿ ದಾಳಿಯ ಬಗ್ಗೆ ಭಾಷಣ ಮಾಡಿದ್ದರು ಎಂದು ಸುಮಲತಾ
ಅವರ ವಿರುದ್ಧ ಆರೋಪ ಮಾಡಿದರು.

ರಾಜ್ಯದ ರಾಜಕೀಯ ಕರಾಳದಿನ: ಡಿಸಿಎಂ ಪರಮೇಶ್ವರ್‌
ರಾಜ್ಯದಲ್ಲಿ ಮುಖ್ಯಮಂತ್ರಿ ಕೇಂದ್ರ ಸರ್ಕಾರದ ವಿರುದ್ಧ ಬೀದಿಗಿಳಿದು ಪ್ರತಿಭಟನೆ ಮಾಡಿರುವುದು ರಾಜ್ಯ ರಾಜಕೀಯದಲ್ಲಿ ಕರಾಳ ದಿನ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

ಕೇಂದ್ರದಲ್ಲಿ ನರೇಂದ್ರ ಮೋದಿ ಪ್ರಧಾನಿಯಾದ ಮೇಲೆ ಐದು ವರ್ಷದಿಂದ ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕೆಲಸ ಮಾಡಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೊಂದಿಕೊಂಡು ಆಡಳಿತ ನಡೆಸಬೇಕು. ನರೇಂದ್ರ ಮೋದಿ ರಾಜ್ಯಗಳ ಅಭಿವೃದಿಗೆ ಧಕ್ಕೆಯುಂಟು ಮಾಡುತ್ತಿದ್ದಾರೆ. ಕಳೆದ 72 ವರ್ಷಗಳಲ್ಲಿ ಒಕ್ಕೂಟ ವ್ಯವಸ್ಥೆ
ಸರಿಯಾಗಿ ನಡೆದುಕೊಂಡು ಬಂದಿದೆ. ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ಮೇಲೆ ಐಟಿ, ಸಿಬಿಐ, ಇಡಿಗಳನ್ನು ರಾಜಕೀಯ ಅಸ್ತ್ರ ಉವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.

ಒಗ್ಗಟ್ಟಿನ ಪ್ರತಿಭಟನೆ

ಮೊದಲು ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರು. ಕಾಂಗ್ರೆಸ್‌ ಕಾರ್ಯಕರ್ತರು ಪಕ್ಷದ ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಲು ಉದ್ದೇಶಿಸಿದ್ದರು. ನಂತರ ಎರಡೂ ಪಕ್ಷಗಳ ನಾಯಕರು ಒಗ್ಗಟ್ಟಿನಿಂದ ವಿರೋಧಿಸಿದರೆ, ದೇಶಕ್ಕೂ ಸಂದೇಶ ರವಾನೆಯಾಗುತ್ತದೆ ಎಂದು ತೀರ್ಮಾನಿಸಿ ಆದಾಯ ತೆರಿಗೆ ಇಲಾಖೆಯ ಕಚೇರಿ ಎದುರು ಪ್ರತಿಭಟನೆಗೆ
ನಿರ್ಧರಿಸಿದರು.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.