ಎಲ್ಲಿಂದಲೋ ಬಂದವರು; ಈಗಲ್ಲೋ ಇರುವವರು!

Team Udayavani, Apr 1, 2019, 10:00 AM IST

defetion

ಕುಂದಾಪುರ: ರಾಜಕಾರಣಿಗಳ ಪಕ್ಷಾಂತರ ಪರ್ವ ಅವರು ಗಳಿಸುವ ಮತಗಳ ಮೇಲೂ ಪರಿಣಾಮ ಬೀರಬಲ್ಲುದೇ ಎನ್ನುವುದು ಪ್ರತೀ ಚುನಾವಣಾ ಸಂದರ್ಭದಲ್ಲಿ ಚರ್ಚೆಗೆ ಬರುತ್ತದೆ. ಈ ಬಾರಿ ಲೋಕಸಭೆಗೆ ಸ್ಪರ್ಧಿಸಿದವರಲ್ಲಿ ಉಡುಪಿಯ ಪ್ರಮೋದ್‌ ಮಧ್ವರಾಜ್‌ ಕಾಂಗ್ರೆಸಿಗರು, ಆದರೆ ಜೆಡಿಎಸ್‌ ಚಿಹ್ನೆಯಿಂದ ಸ್ಪರ್ಧಿಸುತ್ತಿದ್ದಾರೆ. ಲೋಕಸಭಾ ಅಭ್ಯರ್ಥಿಗಳಿಗೆ ಮತ ಯಾಚಿಸುವ ಶಾಸಕ, ಮಾಜಿ ಶಾಸಕರು ಕೂಡ ಬೇರೆ ಬೇರೆ ಪಕ್ಷದಲ್ಲಿ ಇದ್ದು ಬಂದವರು. ಹಾಗಾಗಿ ಪಕ್ಷಾಂತರ, ಇತರ ಪಕ್ಷಗಳನ್ನು ದೂರುವ ಸಂದರ್ಭಗಳನ್ನು ತಾವಾಗಿ ದೂರ ಮಾಡಿಕೊಂಡಿದ್ದಾರೆ.

ಕುಂದಾಪುರದಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಬಿಜೆಪಿಯಲ್ಲಿದ್ದು, ರಾಜೀನಾಮೆ ನೀಡಿ ಸ್ವತಂತ್ರರಾಗಿ ಸ್ಪರ್ಧಿಸಿ ಅಭೂತಪೂರ್ವ ಜಯ ಗಳಿಸಿ ಮತ್ತೆ ಬಿಜೆಪಿಗೆ ಸೇರಿ ಅಲ್ಲೂ ದಾಖಲೆಯ ಮತಗಳನ್ನು ಪಡೆದು ಶಾಸಕರಾದವರು. ಐದು ಬಾರಿ ಆಯ್ಕೆಯಾದ ಇವರಿಗೆ ರಾಜ್ಯದಲ್ಲಿ ಅತಿ ಹೆಚ್ಚು ಮತ ಪಡೆದವರ ಪೈಕಿ ಐದನೇ ಸ್ಥಾನ. ಲೋಕಸಭಾ ಟಿಕೆಟ್‌ಗೆ ಪ್ರಬಲ ಪೈಪೋಟಿ ನೀಡಿದ ಜಯಪ್ರಕಾಶ್‌ ಹೆಗ್ಡೆ ಅವರು ಜನತಾದಳ ಮೂಲಕ ರಾಜಕೀಯ ರಂಗ ಪ್ರವೇಶಿಸಿ ಸಚಿವರಾಗಿ, ಸ್ವತಂತ್ರ ಅಭ್ಯರ್ಥಿಯಾಗಿ ಶಾಸಕರಾಗಿ, ಕಾಂಗ್ರೆಸ್‌ನಲ್ಲಿ ಸಂಸದರಾಗಿ ಈಗ ಬಿಜೆಪಿಯಲ್ಲಿದ್ದಾರೆ.

ಬೆಳ್ತಂಗಡಿ ಕ್ಷೇತ್ರದಲ್ಲಿ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ಮೊದಲ ಬಾರಿ ಬಿಜೆಪಿಯಲ್ಲಿ ಶಾಸಕರಾಗಿ, ಜನತಾದಳದಲ್ಲಿ ಶಾಸಕರಾಗಿ, ಮುಖ್ಯಸಚೇತಕರಾಗಿ, ಕಾಂಗ್ರೆಸ್‌ನಲ್ಲಿ ಶಾಸಕರಾಗಿದ್ದವರು. ಅಲ್ಲಿನ ಮಾಜಿ ಸಚಿವ ಕೆ. ಗಂಗಾಧರ ಗೌಡ ಕಾಂಗ್ರೆಸ್‌ನಲ್ಲಿ ಸಚಿವರಾಗಿ, ಜೆಡಿಎಸ್‌ನಲ್ಲಿ ಸ್ಪರ್ಧಿಸಿ, ಬಿಜೆಪಿಯಲ್ಲಿದ್ದು ಈಗ ಪುನಃ ಕಾಂಗ್ರೆಸ್‌ ಸೇರಿದ್ದಾರೆ. ಪುತ್ತೂರಿನಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಬಿಜೆಪಿಯಲ್ಲಿ ಶಾಸಕರಾಗಿದ್ದು, ಪಕ್ಷೇತರರಾಗಿ ಸ್ಪರ್ಧಿಸಿ ಕಾಂಗ್ರೆಸ್‌ನಲ್ಲಿ ಶಾಸಕಿಯಾಗಿದ್ದರು. ಬೈಂದೂರು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರದೂ ಇಂಥದೇ ಕತೆ. ಬಂಗಾರಪ್ಪನವರ ಕೆಸಿಪಿಯಲ್ಲಿ ಸ್ಪರ್ಧಿಸಿ ಅನಂತರ ಕಾಂಗ್ರೆಸ್‌ನಲ್ಲಿ ಶಾಸಕರಾಗಿದ್ದವರು.

ವಿಧಾನಸಭೆ ಚುನಾವಣೆ ಸಂದರ್ಭ ಜೆಡಿಎಸ್‌ ವಿರುದ್ಧ ಮತ ಚಲಾಯಿಸಲು ಹೇಳಿದ ನಾಯಕರೇ ಈಗ ಜೆಡಿಎಸ್‌ ಪರವಾಗಿ ಮತ ಕೇಳಬೇಕಾದ ಸಂದರ್ಭ ಉಡುಪಿ ಕ್ಷೇತ್ರದಲ್ಲಿ ಉಂಟಾಗಿದ್ದರೆ ಜೆಡಿಎಸ್‌ನವರು ಕಾಂಗ್ರೆಸ್‌ ಪರವಾಗಿ ಮತ ಕೇಳಬೇಕಾದ ಸ್ಥಿತಿ ದಕ್ಷಿಣ ಕನ್ನಡದಲ್ಲಿದೆ. ನಾಯಕರಂತೂ ವೇದಿಕೆಯಲ್ಲಿ ಭಾಷಣ ಮಾಡಿ ತೆರಳುತ್ತಾರೆ. ಮತ ಕೇಳುವ ಕಾರ್ಯಕರ್ತರು ಕೊನೆಗೂ ಹೈರಾಣು.

ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಸ್ವಾತಂತ್ರ್ಯ ಅಮೃತಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಅಮೃತ ಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

MUST WATCH

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

ಹೊಸ ಸೇರ್ಪಡೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.