ಪಕ್ಷೇತರ ಸ್ಪರ್ಧೆ ನನಗೆ ಹೊಸದಲ್ಲ: ವಿನಯ


Team Udayavani, Apr 3, 2019, 6:00 AM IST

b-4

ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌
ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಯಾವ ಕಾರಣಕ್ಕಾಗಿ ಪಕ್ಷ
ವಿಳಂಬ ಮಾಡುತ್ತಿದೆ ಎಂಬುದು ಗೊತ್ತಾಗುತ್ತಿಲ್ಲ.
ಇದರಿಂದ ಪಕ್ಷದ ಕಾರ್ಯಕರ್ತರಿಗೆ ಹಿಂಸೆಯಾಗಿದೆ. ಪಕ್ಷೇತರ ಸ್ಪರ್ಧೆ ನನಗೆ ಅಸಾಧ್ಯ ಅಂತೇನಿಲ್ಲ. ಹಿಂದೆ ವಿಧಾನಸಭೆಗೆ ಪಕ್ಷೇತರನಾಗಿ ಗೆಲುವು ಸಾಧಿಸಿದ ಉದಾಹರಣೆಯಿದೆ ಎಂದು ಮಾಜಿ ಸಚಿವ ಹಾಗೂ ಟಿಕೆಟ್‌ ಆಕಾಂಕ್ಷಿ ವಿನಯ ಕುಲಕರ್ಣಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಪಕ್ಷ ಹಾಗೂ ಪಕ್ಷದ
ಮುಖಂಡರನ್ನು ನಂಬಿದ್ದೇನೆ. ಅವರು ಯಾವ ನಿರ್ದೇಶನ
ನೀಡುತ್ತಾರೋ ಅಂದರಂತೆ ನಡೆದುಕೊಳ್ಳುತ್ತೇನೆ. ನಾಮಪತ್ರ ಸಲ್ಲಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದೇನೆ. ಸಾಕಷ್ಟು ದಾಖಲೆಗಳು ಬೇಕಾಗಿರುವ ಕಾರಣಕ್ಕೆ ಈಗಾಗಲೇ ತಯಾರಿ ಮಾಡಿಕೊಳ್ಳುತ್ತಿದ್ದೇನೆ. ಬಿ
ಫಾರಂಗಾಗಿ ಕಾಯುತ್ತಿದ್ದೇನೆ ಎಂದರು.

ಟಿಕೆಟ್‌ ಘೋಷಣೆ ಇಷ್ಟೊಂದು ವಿಳಂಬ ಆಗಬಾರದಿತ್ತು. ಇದರಿಂದ ಪಕ್ಷದ ಕಾರ್ಯಕರ್ತರು ನೊಂದುಕೊಂಡಿದ್ದು, ಸಾಕಷ್ಟು ಟೀಕೆಗಳನ್ನು
ಅನುಭವಿಸುವಂತಾಗಿದೆ. ಇಷ್ಟೆಲ್ಲ ಆದ ನಂತರ ಟಿಕೆಟ್‌ ಕೊಡುವುದು ಸೂಕ್ತವಲ್ಲ ಎನ್ನಿಸುತ್ತಿದೆ. ನಿತ್ಯವೂ ಪಕ್ಷದ ಕಾರ್ಯಕರ್ತರಿಗೆ ಉತ್ತರ ನೀಡಿ ಬೇಸರ ಮೂಡಿದೆ ಎಂದರು.

ಶಾಕೀರ್‌ ಸನದಿ ಸ್ಪರ್ಧೆ ವಿರುದ್ಧ ವೈರಲ್‌
ಬೆಂಗಳೂರು: ಶಾಕೀರ್‌ ಸನದಿ ಧಾರವಾಡ ಲೋಕಸಭಾ ಅಭ್ಯರ್ಥಿ ಎಂದು ಸುಳ್ಳು ಪಟ್ಟಿ ಬಿಡುಗಡೆಯಾಗಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗಿದ್ದು, ಶಾಕೀರ್‌ ಸನದಿ ಅವರಿಗೆ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಅನೇಕರು ಸಲಹೆ ನೀಡಿದ್ದಾರೆ.
ಶಾಕೀರ್‌ ಸನದಿ ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ಕೆಪಿಸಿಸಿ ಅಧಿಕೃತ ಫೇಸ್‌ಬುಕ್‌ ಹಾಗೂ ಮಾಧ್ಯಮ ವಿಭಾಗದ ವಾಟ್ಸ್‌ಅಪ್‌ ಗ್ರೂಪ್‌ನಲ್ಲಿ ಪ್ರಕಟಿಸಲಾಯಿತು. ತಕ್ಷಣ ಅದು ಫೇಕ್‌ ಪಟ್ಟಿ ಎಂದು ಅರಿತ ಕೆಪಿಸಿಸಿ ಮಾಧ್ಯಮ ವಿಭಾಗ ಪ್ರಕಟಿಸಿರುವ ಪಟ್ಟಿಯನ್ನು ಅಳಿಸಿ ಹಾಕಿ, ಅದು ನಕಲಿ ಆಯ್ಕೆ ಪಟ್ಟಿ ಎಂದು ಸ್ಪಷ್ಟೀಕರಣ ನೀಡಲಾಯಿತು. ಅಭ್ಯರ್ಥಿ ಆಯ್ಕೆಯಾಗಿದೆ ಎಂಬ ಫೇಕ್‌ ಪಟ್ಟಿ ಬಿಡುಗಡೆಯಾಗಿರುವ ಬಗ್ಗೆ ಶಾಕೀರ್‌ ಸನದಿ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಈ ರೀತಿ ಸುಳ್ಳು ಸುದ್ದಿ ಪ್ರಕಟಿಸದಂತೆ ಮನವಿ ಮಾಡಿದ್ದಾರೆ. ಕೆಲವರು ಅವರಿಗೆ ಟಿಕೆಟ್‌ ಸಿಕ್ಕಿದೆ ಎಂಬ ಭಾವನೆಯಲ್ಲಿ ಅಭಿನಂದನೆ ಸಲ್ಲಿಸಿದ್ದರೆ, ಕೆಲವು ಕಾಂಗ್ರೆಸ್‌ ಕಾರ್ಯಕರ್ತರು. ಶಾಕೀರ್‌ ಸನದಿಗೆ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಸಲಹೆ ನೀಡಿದ್ದಾರೆ.

ಅನಂತಕುಮಾರ ಋಣ ತೀರಿಸದ ಜೋಶಿ
ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಏಳ್ಗೆಯಲ್ಲಿ ಕೇಂದ್ರದ ಮಾಜಿ ಸಚಿವ ದಿ| ಅನಂತಕುಮಾರ ಅವರ ಆಶೀರ್ವಾದ ದೊಡ್ಡದು. ಆದರೆ, ಸಹೋದರಿ ತೇಜಸ್ವಿನಿ ಅನಂತಕುಮಾರ ಅವರಿಗೆ ಟಿಕೆಟ್‌ ತಪ್ಪಿದಾಗ ಪ್ರಹ್ಲಾದ ಜೋಶಿ ತುಟಿ ಬಿಚ್ಚಲಿಲ್ಲ. ಅನಂತಕುಮಾರ ಅವರ ಋಣ ತೀರಿಸುವ ನಿಟ್ಟಿನಲ್ಲಿ
ತೇಜಸ್ವಿನಿ ಅವರಿಗೆ ಟಿಕೆಟ್‌ ಕೊಡಿಸುವ ಪ್ರಯತ್ನ ಕೂಡ ಮಾಡಲಿಲ್ಲ. ಹಿಂದೆ ಈ ಭಾಗದ ಪ್ರಭಾವಿ ನಾಯಕ ರಾಜೇಂದ್ರ ಗೋಖಲೆ ಅವರ ಟಿಕೆಟ್‌ ತಪ್ಪಿಸಿ ರಾಜಕಾರಣ ಮಾಡಿದ್ದ ಜೋಶಿಯವರು ಕಾರ್ಯರ್ತರನ್ನು ಬೆಳೆಸುವುದು ಹಾಗೂ ತೇಜಸ್ವಿನಿ ಅವರ ಪರವಾಗಿ ನಿಲ್ಲುವುದು ದೂರದ ಮಾತು ಎಂದು ವಿನಯ ಹೇಳಿದರು.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.