ಸಂಗಣ್ಣ ಕರಡಿ ಕುಣಿತ ಶುರು

Team Udayavani, Apr 4, 2019, 5:42 PM IST

kopp

ಕೊಪ್ಪಳ: ಲೋಕಸಭೆ ಚುನಾವಣೆ ಸಮರದ ಕಾವು ಬಿಸಿಲಿನ ಮಧ್ಯೆಯೂ ಜೋರಾಗುತ್ತಿದೆ. ಬುಧವಾರ ಸಂಸದ ಹಾಗೂ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ನಾಮಪತ್ರ ಸಲ್ಲಿಸಿ, ನಗರದಲ್ಲಿ ಬೃ‌ಹತ್‌ ರೋಡ್‌ ಶೋ ನಡೆಸಿದರು.

ನಗರದ ಜಿಲ್ಲಾ ಚುನಾವಣಾಧಿಕಾರಿ ಕಚೇರಿಗೆ ಬೆಳಗ್ಗೆ 11 ಗಂಟೆಗೆ ಆಗಮಿಸಿದ ಸಂಗಣ್ಣ ಕರಡಿ ಅವರು ಬೆಂಬಲಿಗರೊಂದಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಬಳಿಕ ಗವಿಮಠಕ್ಕೆ ತೆರಳಿ ಮಠದ ಮುಂಭಾಗದಲ್ಲಿ ನಮಸ್ಕರಿಸಿ ಪ್ರಚಾರ ಕಾರ್ಯಕ್ಕೆ ಅಣಿಯಾದರು. ಮಧ್ಯಾಹ್ನ 1:40ರಿಂದ ಆರಂಭವಾದ ರೋಡ್‌ ಶೋನಲ್ಲಿ ಸಾವಿರಾರು ಜನ ಪಾಲ್ಗೊಂಡಿದ್ದರು.

ಮೆರವಣಿಗೆ ಸಾಗಿದ ರಸ್ತೆಗಳು ಕೇಸರಿಮಯವಾಗಿದ್ದವು. ಬಿಜೆಪಿ ಕಾರ್ಯಕರ್ತರು ಭಾವುಟ ಹಿಡಿದು ಮೋದಿ.. ಮೋದಿ .. ಎಂದು ಘೋಷಣೆ ಕೂಗುತ್ತ ಎಲ್ಲರ ಗಮನ ಸೆಳೆದರು. ಸಂಗಣ್ಣ ಕರಡಿಗೆ ಮತ ನೀಡಿ ಎನ್ನುವ ಘೋಷಣೆಯೂ ಅಲ್ಲಲ್ಲಿ ಕೇಳಿ ಬಂದಿತು. ಆರಂಭದಲ್ಲಿ ಪಾಲ್ಗೊಂಡ ಶಾಸಕ ಬಿ. ಶ್ರೀರಾಮುಲು ಅವರು ಗಡಿಯಾರ ಕಂಬದ ಮಾರ್ಗದತ್ತ ಮೆರವಣಿಗೆ ಸಾಗುತ್ತಿದ್ದಂತೆ ಅಲ್ಲಿಂದ ಬೇರೆಡೆ ತೆರಳಿದರು.
ಆದರೆ ಮುರಗೇಶ ನಿರಾಣಿ, ಹಾಲಪ್ಪ ಆಚಾರ್‌, ಪರಣ್ಣ ಸೇರಿ ಇತರೆ ನಾಯಕರು ಸಂಗಣ್ಣ ಕರಡಿಗೆ ಸಾಥ್‌ ನೀಡಿದರು.

ಬಿಸಿಲಿನ ತಾಪಕ್ಕೆ ಬೆಚ್ಚಿದ ಜನ: ಬಿರು ಬಿಸಿಲಿನ ಮಧ್ಯೆ ಮರವಣಿಗೆ ಸಾಗುತ್ತಿದ್ದಂತೆ ಬಿಸಿಲಿನ ಪ್ರಖರತೆಗೆ ಬೆಚ್ಚಿದ ಜನರು ಟೋಪಿ ಹಾಕಿಕೊಂಡೇ ಮೆರವಣಿಗೆಯ ಉದ್ದಕ್ಕೂ ಸಾಗಿದರು. ಹಲವರಂತೂ ನೆರಳು ಸಿಕ್ಕದ್ದಲ್ಲಿ ನಿಂತುಕೊಂಡರು. ತೆರೆದ ವಾಹನದಲ್ಲಿ ನಿಂತಿದ್ದ ಮುಖಂಡರ ಬೆವರಿಳಿಯುತ್ತಿತ್ತು. ಅದರ ಮಧ್ಯೆಯೂ ಮುಖಂಡರು ಇರುವ ಕಡೆ ಕೈ ಮಾಡುತ್ತಾ ಜೈಕಾರ ಕೂಗುತ್ತಿದ್ದರು.

ಅಶೋಕ ವೃತ್ತದತ್ತ ಸಾಗಿದ ಮೆರವಣಿಗೆ ಜೋರಾಗಿ ನಡೆಯಿತು. ಮೆರವಣಿಗೆ ಬಳಿಕ ಮಧ್ಯಾಹ್ನ 3 ಗಂಟೆ ವೇಳೆ ಸಂಗಣ್ಣ ಕರಡಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮತ್ತೂಮ್ಮೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಇನ್ನೂ ಮೆರವಣಿಗೆಯಲ್ಲಿ ಲಂಭಾಣಿ ಮಹಿಳೆಯರು ಬಿಜೆಪಿ ಭಾವುಟ ಹಿಡಿದು ಜೈಕಾರ ಕೂಗುತ್ತಲೇ ಮೆರವಣಿಗೆಯಲ್ಲಿ ಸಾಗಿದರು. ವೇಷಧಾರಿಗಳು, ಮಜಲು ಗೊಂಬೆಗಳು ಗಮನ ಸೆಳೆದವು. ಯುವಕರು ನರೇಂದ್ರ ಮೋದಿ ಅವರ ಮುಖವಾಡ ಧರಿಸಿ ಜೈಕಾರ ಹಾಕಿದರು.

ನಾಮಪತ್ರ ಹಾಗೂ ರೋಡ್‌ ಶೋನಲ್ಲಿ ಮಾಜಿ ಸಚಿವ ಲಕ್ಷ್ಮಣ್ಣ ಸವದಿ, ಮುರಗೇಶ ನಿರಾಣಿ, ಗೋವಿಂದ ಕಾರಜೋಳ, ಶಾಸಕರಾದ ಪರಣ್ಣ ಮುನವಳ್ಳಿ, ಬಸವರಾಜ ದಢೇಸುಗೂರ, ಹಾಲಪ್ಪ ಆಚಾರ್‌, ಪಕ್ಷದ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಸಿಂಗನಾಳ, ರಾಷ್ಟ್ರೀಯ ಪರಿಷತ್‌ ಸದಸ್ಯ ಸಿ.ವಿ. ಚಂದ್ರಶೇಖರ್‌ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಪ್ರಧಾನಿ ನರೇಂದ್ರ ಮೋದಿ ದೇಶದ ಅಭಿವೃದ್ಧಿಗೆ ಹಗಲಿರುಳು ಕೆಲಸ ಮಾಡುತ್ತಿದ್ದಾರೆ. ಅದರಂತೆ ಸಂಗಣ್ಣ ಕರಡಿ ಅವರು ಕ್ಷೇತ್ರದಲ್ಲಿ ಕಳೆದ 5 ವರ್ಷಗಳಲ್ಲಿ ಹಲವು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಅವರ ಮಾಡಿದ ಅಭಿವೃದ್ಧಿಯೇ ಅವರ ಗೆಲವಿಗೆ ಶ್ರೀರಕ್ಷೆಯಾಗಲಿದೆ. ಮೋದಿ ಮತ್ತೂಮ್ಮೆ ಪ್ರಧಾನಿಯಾಗಲು ಸಂಗಣ್ಣ ಕರಡಿಗೆ ಮತ ನೀಡಿ ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲಿಸಬೇಕು.
ಬಿ. ಶ್ರೀರಾಮುಲು, ಶಾಸಕ

ನನ್ನ ಅಭಿವೃದ್ಧಿ ಕಾರ್ಯಗಳೇ ನನ್ನ ಗೆಲುವಿಗೆ ಶ್ರೀರಕ್ಷೆಯಾಗಲಿವೆ. ಇಂದು ಜನತೆ ಮೋದಿ ಅವರು ಮತ್ತೂಮ್ಮೆ ಪ್ರಧಾನಿಯಾಗಲು ಬಯಸಿದ್ದಾರೆ. ನನ್ನ ಅಧಿಕಾರವಧಿಯಲ್ಲಿ ರೈಲ್ವೆ ಸೇರಿ ಹೆದ್ದಾರಿ ರಸ್ತೆಗಳ ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಸಾವಿರಾರು ಕೋಟಿ ಅನುದಾನವನ್ನು ಕ್ಷೇತ್ರಕ್ಕೆ ತಂದಿದ್ದೇನೆ. ಎಂಟೂ ಕ್ಷೇತ್ರಗಳಲ್ಲೂ ನನಗೆ ಅಭೂತಪೂರ್ವ ಮತಗಳನ್ನು ಜನರು ನೀಡಲಿದ್ದಾರೆ ಎನ್ನುವ ವಿಶ್ವಾಸವನ್ನಿಟ್ಟಿದ್ದೇನೆ.
ಸಂಗಣ್ಣ ಕರಡಿ, ಬಿಜೆಪಿ ಅಭ್ಯರ್ಥಿ

ಟಾಪ್ ನ್ಯೂಸ್

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

13

Tollywood: ʼಫ್ಯಾಮಿಲಿ ಸ್ಟಾರ್‌ʼ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದೇವರಕೊಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

1-wqqwqw

Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

1-wewqewq

Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.