ಭ್ರಷ್ಟಾಚಾರ ರಹಿತ ಆಡಳಿತಕ್ಕಾಗಿ ಬೆಂಬಲಿಸಿ


Team Udayavani, Apr 5, 2019, 10:44 AM IST

blore-

ಬೆಂಗಳೂರು: ಭ್ರಷ್ಟಾಚಾರ ರಹಿತ ಆಡಳಿತ ನಡೆಸಿರುವ, ದೇಶದ ರಕ್ಷಣೆಗೆ ಒತ್ತು ನೀಡಿರುವ ಬಿಜೆಪಿಯನನ್ನು ಪುನಃ ಅಧಿಕಾರಕ್ಕೆ ತರಲು ಮತದಾರರು ತಮ್ಮನ್ನು ಬೆಂಬಲಿಸಬೇಕು ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ.ಸದಾನಂದಗೌಡ ಮನವಿ ಮಾಡಿದರು. ಕೆ.ಆರ್‌.ಪುರ ವಿಧಾನಸಭೆ ಕ್ಷೇತ್ರದ ಭಟ್ಟರಹಳ್ಳಿಯ ಆಂಜನೇಯಸ್ವಾಮಿ ದೇವಸ್ಥಾನದ ಸಮೀಪ ಗುರುವಾರ ಬೆಳಗ್ಗೆ ಏರ್ಪಡಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಪಾಕಿಸ್ತಾನ ಕಾಲು ಕೆರೆದುಕೊಂಡು ಗಡಿಯಲ್ಲಿ ತಂಟೆ ಮಾಡಿದರೆ ಹಿಂದಿದ್ದ ಸರಕಾರಗಳು ಕಠಿಣ ಕ್ರಮ ಕೈಗೊಳ್ಳುತ್ತಿರಲಿಲ್ಲ. ಆದರೆ ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ, ಪಾಕ್‌ಗೆ ನಡುಕ ಹುಟ್ಟಿಸಿದ್ದಾರೆ. ಸೈನಿಕರಿಗೆ ಬೆಂಬಲ ನೀಡಿ, ವೈರಿಗೆ ತಕ್ಕ ತಿರುಗೇಟು ನೀಡಿದ್ದಾರೆರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಪುಲ್ವಾಮ ದಾಳಿ ನಂತರ ಪ್ರಧಾನಿ, ಸೈನಿಕರ ಬೆಂಬಲಕ್ಕೆ ನಿಂತರು. ಪರಿಣಾಮ, ಪಾಕಿಸ್ತಾನದ ಬಾಲಾಕೋಟ್‌ನ ಉಗ್ರರ ಶಿಬಿರಗಳ ಮೇಲೆ ದಾಳಿ ಮಾಡಿ ಉಗ್ರರನ್ನು ಮಟ್ಟ ಹಾಕಲಾಯಿತು. ಇದು ದೇಶದ ರಕ್ಷಣೆ ವಿಷಯದಲ್ಲಿ ಮೋದಿಯವರು ಕೈಗೊಂಡ ದಿಟ್ಟ ಕ್ರಮಕ್ಕೆ ಸಾಕ್ಷಿ ಎಂದು ಬಣ್ಣಿಸಿದರು.

ರಕ್ಷಣೆಯಲ್ಲಿ ರಾಜಿ ಇಲ್ಲ: ಮಾಜಿ ಶಾಸಕ ನಂದೀಶ್‌ ರೆಡ್ಡಿ ಮಾತನಾಡಿ, ದೇಶದ ರಕ್ಷಣೆ ವಿಷಯದಲ್ಲಿ ಬಿಜೆಪಿ ಎಂದಿಗೂ ರಾಜಿಯಾಗುವುದಿಲ್ಲ. ಐದು ವರ್ಷಗಳ ಬಿಜೆಪಿ ಆಡಳಿತ ಇದಕ್ಕೆ ಸಾಕ್ಷಿಯಾಗಿದೆ. ಕಳೆದ ಬಾರಿ ಬೆಂಬಲಿಸಿದಂತೆ ಈ ಬಾರಿಯೂ ಸದಾನಂದಗೌಡರನ್ನು ಕ್ಷೇತ್ರದ ಜನ ಬೆಂಬಲಿಸಬೇಕು. ಸರಳ ಸಜ್ಜನಿಕೆಯ ಸದಾನಂದಗೌಡರು, ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಕೈಗೊಂಡಿದ್ದಾರೆ. ಆದ್ದರಿಂದ ಅವರನ್ನು ಪುನರಾಯ್ಕೆ ಮಾಡಬೇಕು ಎಂದು ಮನವಿ ಮಾಡಿದರು.ಶಾಸಕಿ ಪೂರ್ಣಿಮಾ ಶ್ರೀನಿವಾಸ್‌, ಚಿದಾನಂದ್‌, ಕೇಶವಮೂರ್ತಿ, ವೀರಣ್ಣ ಮತ್ತಿತರರು ಹಾಜರಿದ್ದರು.

ಬೃಹತ್‌ ಬೈಕ್‌ ರ್ಯಾಲಿ: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ.ಸದಾನಂದಗೌಡ ಅವರು ಗುರುವಾರ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಕೆ.ಆರ್‌ .ಪುರ ವಿಧಾನಸಭೆ ಕ್ಷೇತ್ರದಲ್ಲಿ ಬೈಕ್‌ ರ್ಯಾಲಿ ಮೂಲಕ ಬಿರುಸಿನ ಪ್ರಚಾರ ಕೈಗೊಂಡರು. ಭಟ್ಟರಹಳ್ಳಿಯ ಆಂಜನೇಯ ಸ್ವಾಮಿ ದೇವಾಲಯದಿಂದ ಆರಂಭವಾದ ರ್ಯಾಲಿ, ಮೇಡಹಳ್ಳಿ, ರಾಮನ್‌ ದೇವಸ್ಥಾನ, ವೈಟ್‌ ಸಿಟಿ ಲೇಔಟ್‌, ಸೀಗೇಹಳ್ಳಿ, ಸೆಲ್ವರಾಜ್‌ ಲೇಔಟ್‌, ಬಸವನಪುರ, ದೇವಸಂದ್ರ, ವಿಜಿನಾಪುರ, ಕಲ್ಕೆರೆ, ಭೋವಿ ಕಾಲೋನಿ, ಜಯಂತಿ ಗ್ರಾಮ ಜಂಕ್ಷನ್‌, ಆನೆಪ್ಪ ಸರ್ಕಲ…, ಕೆ.ಚನ್ನಸಂದ್ರ ಮತ್ತಿತರ ಕಡೆ ಸಾಗಿತು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.