ಕುಡುಕರ ತಾಣವಾದ ಬೈಪಾಸ್‌ ರಸ್ತೆ

ಜೇವರ್ಗಿ: ಡಾಬಾಗಳಲ್ಲಿ ಕದ್ದು ಮುಚ್ಚಿ ಮದ್ಯ ವ್ಯಾಪಾರ

Team Udayavani, Apr 14, 2019, 11:00 AM IST

Udayavani Kannada Newspaper

ಜೇವರ್ಗಿ: ಮದ್ಯದ ಅಂಗಡಿಗಳಲ್ಲಿ ಮದ್ಯಪಾನ ಮಾಡಬಾರದು ಎನ್ನುವ ಆದೇಶವನ್ನು ಚುನಾವಣೆ ಸಂದರ್ಭದಲ್ಲಿ ಅಬಕಾರಿ ಇಲಾಖೆ ಕಟ್ಟುನಿಟ್ಟಾಗಿ
ಜಾರಿ ಮಾಡುತ್ತಿದೆ. ಹೀಗಾಗಿ ಮದ್ಯಪ್ರಿಯರು ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲೆಂದರಲ್ಲಿ ಮದ್ಯಪಾನ ಮಾಡುತ್ತಿದ್ದಾರೆ. ಇದು ಸಾರ್ವಜನಿಕರು, ಮಹಿಳೆಯರಿಗೆ ಕಿರಿಕಿರಿ ಉಂಟುಮಾಡುತ್ತಿದೆ.

ಪಟ್ಟಣದಲ್ಲಿ ಇರುವ ಮದ್ಯದ ಅಂಗಡಿಗಳ ಪೈಕಿ ಸಿಎಲ್‌ ಒಂಭತ್ತು ಪರವಾನಗಿ ಹೊಂದಿರುವ ನಾಲ್ಕು ಸಿಎಲ್‌, ಏಳು ಪರವಾನಗಿ ಪಡೆದಿರುವ ಎರಡು ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ಗಳಿವೆ. ಇಲ್ಲಿ ಮಾತ್ರ ಕುಳಿತು ಮದ್ಯಪಾನ ಮಾಡಲು ಅವಕಾಶವಿದೆ. ಉಳಿದ ಅಂದರೆ ಸಿಎಲ್‌ ಎರಡು ಪರವಾನಿಗೆ ಪಡೆದಿರುವ ಅಂಗಡಿಗಳಲ್ಲಿ ಮದ್ಯಪಾನ ಮಾಡಲು ಅವಕಾಶವಿಲ್ಲ. ಚುನಾವಣೆ ಸಂದರ್ಭದಲ್ಲಿ ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲಾಗುತ್ತದೆ. ಹೀಗಾಗಿ ಮದ್ಯ ಖರೀದಿಸಿದವರು ಅಕ್ಕಪಕ್ಕದ ಸಾರ್ವಜನಿಕ ಸ್ಥಳದ ಸಂದುಗೊಂದುಗಳನ್ನು ಹುಡುಕುತ್ತಾರೆ. ಜನಸಂಚಾರ ಕಡಿಮೆ ಇರುವ ಅಥವಾ ಸಂದಿಗೊಂದಿಗಳಲ್ಲಿ ಕುಳಿತು ಮದ್ಯಪಾನ ಮಾಡುತ್ತಾರೆ. ಕೆಲವೊಮ್ಮೆ ರಸ್ತೆ ಪಕ್ಕದಲ್ಲೇ ಮದ್ಯಪಾನ ಮಾಡುತ್ತಿರುವ ದೃಶ್ಯಗಳು ಕಂಡುಬರುತ್ತವೆ.

ಕೆಲವರು ಪಟ್ಟಣದ ಹೊರ ಪ್ರದೇಶಗಳಲ್ಲಿರುವ ಜಮೀನುಗಳಲ್ಲಿ, ಅದರಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ವಿಜಯಪುರ-ಕಲಬುರಗಿ ಬೈಪಾಸ್‌ಗೆ ತೆರಳಿ ಮದ್ಯಪಾನ ಮಾಡುತ್ತಿದ್ದಾರೆ. ಬೈಪಾಸ್‌ ರಸ್ತೆಯುದ್ದಕ್ಕೂ ಎಲ್ಲಿ ನೋಡಿದರಲ್ಲೂ ಮದ್ಯದ
ಬಾಟಲ್‌ಗ‌ಳು ಕಾಣಸಿಗುತ್ತವೆ. ಸಂಜೆಯಾಗುವುದೇ ತಡ ಬೈಕ್‌, ಕಾರುಗಳಲ್ಲಿ ಮದ್ಯದ ಬಾಟಲ್‌ ಗಳೊಂದಿಗೆ ತೆರಳಿ ಕುಡಿದು ರಸ್ತೆ ಮೇಲೆ ಬಾಟಲ್‌ ಒಡೆದು ಹಾಕಲಾಗುತ್ತಿದೆ.

ಒಟ್ಟಾರೆಯಾಗಿ ಬೈಪಾಸ್‌ ರಸ್ತೆ ಕುಡುಕರ ತಾಣವಾಗಿ ಮಾರ್ಪಟ್ಟಿದೆ. ಇದರಿಂದ ಸಂಜೆ ವಾಯು ವಿಹಾರಕ್ಕೆ ಹೋಗುವವರು ತೀವ್ರ ಕಿರಿಕಿರಿ ಅನುಭವಿಸುತ್ತಿದ್ದಾರೆ. ಮಹಿಳೆಯರು ಸಂಜೆ ಸಮಯದಲ್ಲಿ ಅಡ್ಡಾಡಲು ಹಿಂಜರಿಯುತ್ತಿದ್ದಾರೆ. ರಸ್ತೆ ಪಕ್ಕದಲ್ಲಿ ಮತ್ತು ಜಮೀನುಗಳ ಅಂಚಿನಲ್ಲಿ ಮದ್ಯದ ಬಾಟಲ್‌ಗ‌ಳು ಕಂಡುಬರುತ್ತದೆ. ಚುನಾವಣೆ ಇರುವುದರಿಂದ ಮದ್ಯದಂಗಡಿಗಳ ಮುಂದೆ ನಿಂತುಕೊಂಡು ಮದ್ಯ ಸೇವನೆ ಮಾಡಬೇಡಿ. ಅಬಕಾರಿ ಇಲಾಖೆ ಅ ಧಿಕಾರಿಗಳು ಬಂದು ಬೈಯುತ್ತಾರೆ. ಹೀಗಾಗಿ ಬೇರೆಡೆ ಕೊಂಡೊಯ್ಯಿರಿ ಎಂದು ಮದ್ಯದಂಗಡಿ ಮಾಲೀಕರು ಹೇಳುತ್ತಾರೆ.

ಇದರಿಂದ ಕೆಲವು ಗ್ರಾಹಕರು ಅಂಗಡಿ ಮಾಲೀಕರ ಜತೆ ವಾಗ್ವಾದಕ್ಕೂ ಇಳಿಯುತ್ತಿದ್ದಾರೆ. ಕದ್ದುಮುಚ್ಚಿ ವ್ಯಾಪಾರ: ಪಟ್ಟಣದ ಕೆಲವು ಮಾಂಸಹಾರಿ ಹೋಟೆಲ್‌, ಡಾಬಾಗಳಲ್ಲಿ ಕದ್ದುಮುಚ್ಚಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಇಲ್ಲಿ ಹೆಚ್ಚಿನ ಬೆಲೆಗೆ ಮದ್ಯ ಮಾರಾಟ ಮಾಡಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಪ್ರಜ್ಞಾವಂತ ನಾಗರಿಕರು ಆಗ್ರಹಿಸಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲೂ ಮದ್ಯ ಸೇವನೆಗೆ ಕಡಿವಾಣ ಹಾಕಬೇಕು. ಅಬಕಾರಿ ಹಾಗೂ ಪೊಲೀಸ್‌ ಇಲಾಖೆ ಅ ಧಿಕಾರಿಗಳು ಗಸ್ತು ನಡೆಸಿ ಈ ಕುರಿತು ನಿಗಾ ಇಡಬೇಕು ಎನ್ನುವುದು ಸಾರ್ವಜನಿಕರ ಬೇಡಿಕೆಯಾಗಿದೆ. ಜೇವರ್ಗಿ: ಪಟ್ಟಣದ ವಿಜಯಪುರ- ಕಲಬುರಗಿ ಬೈಪಾಸ್‌ ರಸ್ತೆ ಅಕ್ಕ ಪಕ್ಕದಲ್ಲಿ ಬಿದ್ದಿರುವ ಮದ್ಯದ ಬಾಟಲ್‌ಗ‌ಳು.

ವಿಜಯಕುಮಾರ ಎಸ್‌.ಕಲಾ

ಟಾಪ್ ನ್ಯೂಸ್

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.