ಕ್ಷೇತ್ರದ ನೀರಾವರಿ ಯೋಜನೆಗೆ 250 ಕೋಟಿ ಬಿಡುಗಡೆ: ರಾಜೇಗೌಡ


Team Udayavani, Apr 16, 2019, 3:51 PM IST

chikk-1
ಎನ್‌.ಆರ್‌.ಪುರ: ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕ್ಷೇತ್ರದ ವಿವಿಧ ನೀರಾವರಿ ಯೋಜನೆಗಳಿಗೆ 250ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಟಿ.ಡಿ.ರಾಜೇಗೌಡ ತಿಳಿಸಿದರು.
ಇಲ್ಲಿನ ಸಂತೆ ಮಾರುಕಟ್ಟೆಯ ಸಮೀಪ ಭಾನುವಾರ ಸಂಜೆ ನಡೆದ ಮೈತ್ರಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ
ಮಾತನಾಡಿದರು. ಕ್ಷೇತ್ರದ ರಸ್ತೆ ಅಭಿವೃದ್ಧಿ 150ಕೋಟಿ ರೂ. ಅನುದಾನ ಮಂಜೂರಾಗಿದೆ. ಕ್ಷೇತ್ರದ ಮೂರು ಪಟ್ಟಣ ಪಂಚಾಯತ್‌ಗಳ ನಗರದ ಅಭಿವೃದ್ಧಿಗೆ ಒಟ್ಟು 6ಕೋಟಿ ರೂ. ಬಿಡುಗಡೆಯಾಗಿದೆ. ಕುಡಿಯುವ ನೀರಿಗೆ ಪ್ರತಿ ತಾಲೂಕಿಗೆ 75ಲಕ್ಷ ರೂ. ಮೀಸಲಿಡಲಾಗಿದೆ.
ಅಕ್ರಮ ಸಕ್ರಮ ಸಮಿತಿ ರದ್ದಾಗಿದ್ದು, ಇದನ್ನು ಮುಂದುವರಿಸಲು ಹೊಸದಾಗಿ ಸರ್ಕಾರ ಆದೇಶ ನೀಡಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸಭೆ ಕರೆಯಲು ಸಾಧ್ಯವಾಗಿಲ್ಲ. ಹಕ್ಕು ಪತ್ರ ವಿತರಿಸಲು ಸಾಧ್ಯವಾಗುತ್ತಿಲ್ಲ. ಇದರ ಕನಿಷ್ಠ ಜ್ಞಾನವಿಲ್ಲದ ಬಿಜೆಪಿ ಮಾಜಿ ಶಾಸಕರು ಹಕ್ಕು ಪತ್ರಕೊಡುತ್ತಿಲ್ಲ ಎಂದು ದೂರುತ್ತಿರುವುದು ಸರಿಯಲ್ಲ. ಕ್ಷೇತ್ರಕ್ಕೆ ಬಿಡುಗಡೆಯಾಗಿರುವ ಅನುದಾನ ಬಗ್ಗೆ ದಾಖಲೆ ಕೇಳುತ್ತಿರುವ ಬಿಜೆಪಿ ಜಿಲ್ಲಾಘಟಕದ ಅಧ್ಯಕ್ಷರಿಗೆ ದಾಖಲೆ ಬೇಕಾದಲ್ಲಿ ಮಾಹಿತಿ ಹಕ್ಕಿನಿಂದ ಪಡೆದುಕೊಳ್ಳಲಿ ಎಂದು ತಿರುಗೇಟು ನೀಡಿದರು.
ಮೈತ್ರಿ ಪಕ್ಷದ ಅಭ್ಯರ್ಥಿ ಜನಪರ ಕಾಳಜಿಯುಳ್ಳ ಪ್ರಮೋದ್‌ ಮಧ್ವರಾಜ್‌ ಅವರಿಗೆ ಮತ ನೀಡಬೇಕೆಂದು ಮನವಿ ಮಾಡಿದರು.  ಜೆಡಿಎಸ್‌ ರಾಜ್ಯ ಘಟಕದ ಉಪಾಧ್ಯಕ್ಷ ಎಚ್‌.ಟಿ.ರಾಜೇಂದ್ರ ಮಾತನಾಡಿ, ಕೇಂದ್ರ ಸರ್ಕಾರ ಸೈನ್ಯದ ಸಾಧನೆಯನ್ನು ತನ್ನ ಸಾಧನೆ ಎಂದು ಬಿಂಬಿಸುತ್ತಿರುವುದು ದುರದೃಷ್ಟಕರ. ಅಧಿಕ ಮುಖ ಬೆಲೆಯ ನೋಟು ಅಮಾನ್ಯಿಕರಣದಿಂದ ಆದ ಅನುಕೂಲ ಮತ್ತು ಅನಾನುಕೂಲಗಳ ಬಗ್ಗೆ ಪ್ರಧಾನಿ ಒಮ್ಮೆಯೂ ಸಂಸತ್ತಿನಲ್ಲಿ ಚರ್ಚಿಸಿಲ್ಲ ಎಂದು ದೂರಿದರು.
 ಸ್ವಾಭಿಮಾನಿ ಕರ್ನಾಟಕವನ್ನು ನಿರ್ಮಾಣ ಮಾಡುತ್ತೇವೆಂದು ಹೇಳಿದ ಬಿಜೆಪಿ ಅನಿಲ್‌ ಅಂಬಾನಿ, ಆದಾನಿಗೆ ಅನುಕೂಲ ಮಾಡಿಕೊಡಲು ರಾಜ್ಯದ ಹೆಮ್ಮೆಯ ಸ್ಟೇಟ್‌ ಬ್ಯಾಂಕ್‌ ಆಫ್‌ ಮೈಸೂರನ್ನು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ವಿಲೀನಗೊಳಿಸಿದರು. ವಿಜಯ ಬ್ಯಾಂಕ್‌ ನ್ನು ಬ್ಯಾಂಕ್‌ ಆಫ್‌ ಬರೋಡದೊಂದಿಗೆ ವಿಲೀನಗೊಳಿಸಿದರು ಎಂದರು.
ಸಂವಿಧಾನವನ್ನು ಬದಲಾಯಿಸುವ ಬಗ್ಗೆ ಹೇಳಿಕೆ ನೀಡುವ, ಸಂವಿಧಾನದ ಬಗ್ಗೆ ನಂಬಿಕೆ ಇಲ್ಲದಿರುವ ಮೋದಿ ಹಿಂಬಾಲಕರಿಗೆ ಮತಹಾಕಬಾರದು ಎಂದರು.
ಜಿಪಂ ಸದಸ್ಯ ಪಿ.ಆರ್‌.ಸದಾಶಿವ ಮಾತನಾಡಿ, ಕ್ಷೇತ್ರದಲ್ಲಿ ಡಿ.ಬಿ.ಚಂದ್ರೇಗೌಡರು ಶಾಸಕರಾಗಿದ್ದ 2 ಸಾವಿರ ಮನೆ ನೀಡಲಾಗಿತ್ತು. 15ವರ್ಷ ಆಡಳಿತ ನಡೆಸಿದ ಬಿಜೆಪಿ ಶಾಸಕರು ಬಡವರಿಗೆ ಒಂದೇ ಒಂದು ಮನೆ ನೀಡಿಲ್ಲ. ಹಿಂದೂಗಳ ಹೆಸರಿನಲ್ಲಿ ಮತ ಪಡೆದು ಹಿಂದೂ ದೇವಾಲಯ ಅಭಿವೃದ್ಧಿ ಪಡಿಸಿಲ್ಲ. 640 ಕಿ.ಮೀ ಗ್ರಾಮೀಣ ರಸ್ತೆ ಅಭಿವೃದ್ಧಿಪಡಿಸದೆ ನಿರ್ಲಕ್ಷ್ಯ ಮಾಡಿದರು ಎಂದು ದೂರಿದರು.
ಕೊಪ್ಪ ತಾಲೂಕು ಕಾಂಗ್ರೆಸ್‌ ಘಟಕದ ಅಧ್ಯಕ್ಷ ಸುಧೀರ್‌ ಕುಮಾರ್‌ ಮುರೊಳ್ಳಿ ಮಾತನಾಡಿ, ಸಜ್ಜನ ರಾಜಕಾರಣಿ ಜಯಪ್ರಕಾಶ್‌ ಹೆಗ್ಡೆಗೆ ಟಿಕೆಟ್‌ ತಪ್ಪಿಸುವಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಜೀವರಾಜ್‌ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ದೂರಿದರು.
ಪುಲ್ವಾಮ ದಾಳಿಯಲ್ಲಿ ಮೃತಪಟ್ಟ ಸೈನಿಕರ ಕುಟುಂಬಕ್ಕೆ ತಮ್ಮ ಕುಟುಂಬದ ಟ್ರಸ್ಟ್‌ ಮೂಲಕ 1ಕೋಟಿ ಸಹಾಯ ಹಸ್ತ ಚಾಚಿದ ಶಾಸಕ ಟಿ.ಡಿ.ರಾಜೇಗೌಡರಿಗೆ ಬಿಜೆಪಿಯವರು ದೇಶ ಪ್ರೇಮದ ಪಾಠ ಹೇಳಿಕೊಡಬೇಕಾಗಿಲ್ಲ ಎಂದರು. ತಾಲೂಕು ಕಾಂಗ್ರೆಸ್‌ ಘಟಕದ ಅಧ್ಯಕ್ಷ ಡಾ| ಕೆ.ಪಿ.ಅಂಶುಮಂತ್‌, ಕಾಂಗ್ರೆಸ್‌ ಕಿಸಾನ್‌ ಸೆಲ್‌ನ ಸಚ್ಚಿನ್‌ ಮೀಗಾ ಮಾತನಾಡಿದರು. ಮುಖಂಡರಾದ ಸುಂದರೇಶ್‌, ಎಲೊಸ್‌, ಚಂದ್ರಶೇಖರ್‌, ಶಾಂತಕುಮಾರ್‌, ಅಬೂಬಕರ್‌ ಮತ್ತಿತರಿದ್ದರು.
ಎನ್‌ಡಿಎ ಸರ್ಕಾರ ಜನರ ವಿಶ್ವಾಸ ಕಳೆದುಕೊಂಡಿದೆ
ಶೃಂಗೇರಿ: ದೇಶದಲ್ಲಿ ಎನ್‌ಡಿಎ ಸರಕಾರ ಜನರ ವಿಶ್ವಾಸ ಕಳೆದುಕೊಂಡಿದ್ದು, ಈ ಬಾರಿ ಮಹಾಘಟಬಂಧನ್‌ ಪೂರ್ಣ
ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಹಾಗೂ ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಟಿ.ಡಿ.ರಾಜೇಗೌಡ ಹೇಳಿದರು. ತಾಲೂಕಿನ ಮೆಣಸೆ ಗ್ರಾಪಂನ ಹಾಲಂದೂರು ಗ್ರಾಮದ ಬೆಣ್ಣೆಗುಡ್ಡೆಯಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಪರ ಮತ ಯಾಚಿಸಿ ಮಾತನಾಡಿದರು.
ಪ್ರಧಾನಿ ನರೇಂದ್ರಮೋದಿ ಶ್ರೀಮಂತರ ಪರವಾಗಿದ್ದು, ಬಡವರ ಕಾಳಜಿಯೇ ಇಲ್ಲವಾಗಿದೆ. ಅಂಬಾನಿ ಮುಂತಾದ
ಶ್ರೀಮಂತ ಉದ್ಯಮಿಗಳ ಸಾಲ ಮನ್ನಾ ಮಾಡಿರುವ ಕೇಂದ್ರ ಸರಕಾರ ರೈತರಿಗೆ ಕೇವಲ ತಿಂಗಳಿಗೆ 500 ರೂ.ನೀಡಿ ರೈತರ ಮೂಗಿಗೆ ತುಪ್ಪ ಸವರಿದೆ.
ರೈತರ ಸಂಕಷ್ಟವನ್ನು ಅರಿತು ರೈತರ ನೆರವಿಗೆ ನಿಂತಿರುವ ರಾಜ್ಯ ಸರಕಾರ ರೈತರ ಸಾಲಮನ್ನಾ ಮಾಡಿದೆ. ಪ್ರಮೋದ್‌
ಮಧ್ವರಾಜ್‌ ದಕ್ಷ ಹಾಗೂ ಜನರ ಹಿತ ಚಿಂತಿಸುವ ರಾಜಕಾರಣಿಯಾಗಿದ್ದು, ಎರಡು ಜಿಲ್ಲೆಯ ಸಮಸ್ಯೆ ಅರಿತಿದ್ದಾರೆ. ಅವರಿಗೆ ಮತ ನೀಡುವ ಮೂಲಕ ಅವರನ್ನು ಸಂಸತ್ತಿಗೆ ಕಳುಹಿಸಬೇಕು ಎಂದು ಮನವಿ ಮಾಡಿದರು.
ಕಾಂಗ್ರೆಸ್‌ ಮುಖಂಡರಾದ ಎಂ.ಪಿ.ಚಂದ್ರಹಾಸ, ತಿಮ್ಮಪ್ಪ, ಜೆಡಿಎಸ್‌ ಮುಖಂಡರಾದ ಕೆ.ಎಸ್‌.ರಮೇಶ್‌, ಪುಷ್ಪಾ ಲಕ್ಷ್ಮೀನಾರಾಯಣ, ರಾಜಲಕ್ಷ್ಮೀ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-wwwqewq

RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.