ಮೋದಿ ಟೀಕೆ: ಆಳ್ವಾಗೆ ನೋಟಿಸ್
Team Udayavani, Apr 17, 2019, 3:00 AM IST
ಧಾರವಾಡ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ವೈಯಕ್ತಿಕವಾಗಿ ಟೀಕೆ ಮಾಡಿ ಭಾಷಣ ಮಾಡಿದ ಮಾಜಿ ರಾಜ್ಯಪಾಲೆ ಹಾಗೂ ಕಾಂಗ್ರೆಸ್ ನಾಯಕಿ ಮಾರ್ಗರೇಟ್ ಆಳ್ವಾ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ.
ಮಾರ್ಗರೇಟ್ ಆಳ್ವಾ ಅವರು ಹುಬ್ಬಳ್ಳಿಯಲ್ಲಿ ನಡೆದಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಪ್ರಧಾನಿ ಮೋದಿ ಅವರ ವೈಯಕ್ತಿಕ ವಿಷಯಗಳನ್ನು ತೆಗೆದುಕೊಂಡು ಭಾಷಣ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಸೂಚನೆ ಮೇರೆಗೆ ಜಿಲ್ಲಾ ಚುನಾವಣಾ ಧಿಕಾರಿಯೂ ಆಗಿರುವ ಡೀಸಿ ದೀಪಾ ಚೋಳನ್ ನೋಟಿಸ್ ನೀಡಿದ್ದಾರೆ.