ಐಟಿ ಇಲಾಖೆ ಕೇಂದ್ರದ ಕೈಗೊಂಬೆ ಅಲ್ಲ


Team Udayavani, Apr 18, 2019, 3:00 AM IST

it-ilakhe

ಹಾಸನ: ಆದಾಯ ತೆರಿಗೆ ಇಲಾಖೆ ಕೇಂದ್ರ ಸರ್ಕಾರದ ಕೈಗೊಂಬೆ ಅಲ್ಲ. ಸಚಿವರಾಗಿರುವ ಎಚ್‌.ಡಿ.ರೇವಣ್ಣ ಅವರು ಸ್ವಾಯತ್ತ ಸಂಸ್ಥೆ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದು ಬಿಜೆಪಿ ಅಭ್ಯರ್ಥಿ ಎ.ಮಂಜು ತಿರುಗೇಟು ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆದಾಯ ಕುರಿತು ಸರಿಯಾದ ಮಾಹಿತಿ ನೀಡದವರ ಖಚಿತ ವಿವರ ಪಡೆದ ನಂತರ ಸಂಬಂಧಪಟ್ಟವರ ಮನೆ, ಕಚೇರಿ ಮೇಲೆ ದಾಳಿ ಮಾಡುವುದು ಸಹಜ. ಇದು ಕೇವಲ ಒಂದು ದಿನ ಪ್ರಕ್ರಿಯೆ ಅಲ್ಲ. ಹಲವು ದಿನಗಳಿಂದ ಮಾಹಿತಿ ಸಂಗ್ರಸಿ ಕಾರ್ಯಾಚರಣೆ ನಡೆಸಲಾಗುತ್ತದೆ.

ಆಳುವ ಸರ್ಕಾರ ಒಂದು ವೇಳೆ ಐಟಿ ದುರುಪಯೋಗಪಡಿಸಿಕೊಂಡಿದ್ದರೆ ಸಿಬಿಐ ತನಿಖೆ ನಡೆಸುವಂತೆ ರಾಜ್ಯಪಾಲರಿಗೆ ಪತ್ರ ಬರೆಯಲಿ. ಅದನ್ನು ಬಿಟ್ಟು ಸ್ವಾಯತ್ತ ಸಂಸ್ಥೆಯ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುವುದು ಸಚಿವರಾದವರಿಗೆ ಶೋಭೆ ತರುವುದಿಲ್ಲ ಎಂದರು.

ಅಕ್ರಮ ಹಣದ ಬಗ್ಗೆ ರೇವಣ್ಣ ಉತ್ತರಿಸಲಿ: ಸಚಿವ ರೇವಣ್ಣ ಅವರ ಬೆಂಗಾವಲು ವಾಹನದಲ್ಲಿ 1.20 ಲಕ್ಷ ರೂ. ದಾಖಲೆ ಇಲ್ಲದೇ ಹಣ ಹೊಳೆನರಸೀಪುರದಲ್ಲಿ ಪತ್ತೆಯಾಗಿದೆ. ಇದಕ್ಕೆ ಅವರು ಉತ್ತರಿಸಬೇಕು. ಅಧಿಕಾರಿಗಳನ್ನು ಬಳಸಿಕೊಂಡು ಚುನಾವಣೆ ಗೆಲ್ಲುತ್ತೇವೆ ಎನ್ನುವುದು ಒಳ್ಳೆಯ ಸಂಪ್ರದಾಯ ಅಲ್ಲ. ಈ ಹಿಂದೆ ಡೇರಿ ಸಿಬ್ಬಂದಿ ಬಳಸಿಕೊಂಡು ಹಣ ಹಂಚುತ್ತಿರುವುದನ್ನು ನೋಡಿದ್ದೇವೆ ಎಂದು ಆರೋಪಿಸಿದರು.

ಪ್ರಕರಣ ದಾಖಲಿಸಲಿ: ಹಾಸನದ ರಿಂಗ್‌ ರಸ್ತೆ ಮೂಲಕ ಬಿಜೆಪಿಯವರು ಹಣ ಸಾಗಿಸಿದ್ದಾರೆ ಎಂದು ರೇವಣ್ಣ ಅವರು ಆರೋಪಿಸಿದ್ದಾರೆ. ಐಟಿ ಅಧಿಕಾರಿಗಳು ಮಂಗಳವಾರ ನನ್ನ ಮನೆಗೂ ಬಂದು ವಿಚಾರಿಸಿಕೊಂಡು ಹೋಗಿದ್ದಾರೆ. ಚನ್ನರಾಯಪಟ್ಟಣದಲ್ಲಿ ಸಿಕ್ಕಿರುವ ಹಣ ಯಾರದ್ದೇ ಆಗಿದ್ದರೂ ಪ್ರಕರಣ ದಾಖಲಿಸಲಿ ಎಂದು ಹೇಳಿದರು.

ಗೌಡರ ಕುಟುಂಬದ ಆಂತರಿಕ ಕಚ್ಚಾಟ: ದೇವೇಗೌಡರ ಕುಟುಂಬದ ಆಂತರಿಕ ಕಚ್ಚಾಟದ ವೀಡಿಯೊ ಬಿಡುಗಡೆ ಮಾಡಿದರೆ, ರೇವಣ್ಣ ಅವರನ್ನು ಮನೆ ಬಿಡಿಸುತ್ತಾರೆ. ಈಗ ಬೇಡ, ಸಮಯ ಬಂದಾಗ ಬಿಡುಗಡೆ ಮಾಡುವೆ ಎಂದರು.

1999ರ ಇತಿಹಾಸ ಹಾಸನ ಲೋಕಸಭಾ ಕಷೇತ್ರದಲ್ಲಿ ಮರುಕಳಿಸುತ್ತದೆ. ಹೊಳೆನರಸೀಪುರ ಮತ್ತು ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್‌ ಮುಖಂಡರು ಅಧಿಕ ಮತಗಳ ಮುನ್ನಡೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಈಗಾಗಲೇ ಆ ಭಾಗದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಸಂಚರಿಸಿದ್ದೇನೆ. ಬಿಜೆಪಿಗೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ ಎಂದರು. ಶಾಸಕ ಪ್ರೀತಂ ಜೆ.ಗೌಡ, ಜಿಲ್ಲಾ ಬಿಜೆಪಿ ಅಧ್ಯಕ್ಷ ನವಿಲೆ ಅಣ್ಣಪ್ಪ ಮತ್ತಿತರರು ಸುದ್ದಿಗೋಷ್ಠಿಯಲ್ಲ ಹಾಜರಿದ್ದರು.

ಟಾಪ್ ನ್ಯೂಸ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Choosing the Best Gambling Enterprise Online Payment Method

Best Online Slots For Best Casino Game

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-wwwqewq

RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.