ಜಿಲ್ಲೆಯ 75 ಗ್ರಾಮಗಳಿಗೆ ಟ್ಯಾಂಕರ್‌ನಿಂದ ನೀರು ಪೂರೈಕೆ: ಅಶ್ವತಿ

ಕುಡಿವ ನೀರಿಗಾಗಿ ಕಡೂರಲ್ಲಿ 58, ಚಿಕ್ಕಮಗಳೂರಿಲ್ಲಿ 36 ಬೋರ್ವೆಲ್ ಕೊರೆಸಲಾಗಿದೆ

Team Udayavani, Apr 22, 2019, 12:32 PM IST

Udayavani Kannada Newspaper

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿರುವ 75 ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್‌.ಅಶ್ವತಿ ತಿಳಿಸಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಕಡೂರು ಮತ್ತು ಚಿಕ್ಕಮಗಳೂರು ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಈ ಪೈಕಿ ಕಡೂರು ತಾಲೂಕಿನ 38 ಹಾಗೂ ಚಿಕ್ಕಮಗಳೂರು ತಾಲೂಕಿನ 37 ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದರು.

ಕಡೂರು ತಾಲೂಕಿನ ಮತಿಘಟ್ಟ ಗ್ರಾಮ ಪಂಚಾಯತ್‌ನ 1, ಹುಲಿಕೆರೆ ಪಂಚಾಯತ್‌ನ 3, ವಿ.ಯರದಕೆರೆ ಪಂಚಾಯತ್‌ನ 3, ಚೀಲನಹಳ್ಳಿ ಪಂಚಾಯತ್‌ನ 4, ಬಾಣೂರು ಪಂಚಾಯತ್‌ನ 2, ನಾಗೇನಹಳ್ಳಿ ಪಂಚಾಯತ್‌ನ 2, ದೇವನೂರು ಪಂಚಾಯತ್‌ನ 5, ಚಿಕ್ಕದೇವನೂರು ಪಂಚಾಯತ್‌ನ 2, ಸಿಂಗಟಗೆರೆಯ 3, ಆಣೇಗೆರೆಯ 1, ನಾಗರಾಳುವಿನ 2, ಕುಂಕನಾಡುವಿನ 1, ಎಸ್‌.ಬಿದರೆಯ 3, ನಿಡಘಟ್ಟದ 1, ಜೋಡಿಹೋಚಿಹಳ್ಳಿಯ 3, ಅಣ್ಣೇಗೆರೆಯ 1, ಜಿಗಣೇಹಳ್ಳಿ ಗ್ರಾಮ ಪಂಚಾಯತ್‌ನ 1 ಗ್ರಾಮಕ್ಕೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಈ ಪೈಕಿ ಜಿ.ಮಾದಾಪುರ ಹಾಗೂ ಹನುಮಂತಪುರ ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿಯನ್ನು ಬಾಡಿಗೆ ಆಧಾರದ ಮೇಲೆ ಪಡೆದು ನೀರು ಸರಬರಾಜು ಮಾಡಲಾಗುತ್ತಿದೆ ಎಂದು ತಿಳಿಸಿದರು.

ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಗ್ರಾಮ ಪಂಚಾಯತ್‌ನ 9, ಲಕ್ಯಾ ಪಂಚಾಯತ್‌ನ 9, ಲಕ್ಕಮ್ಮನಹಳ್ಳಿ ಪಂಚಾಯತ್‌ನ 3, ಕರ್ತಿಕೆರೆ ಪಂಚಾಯತ್‌ನ 5, ತೇಗೂರು ಪಂಚಾಯತ್‌ನ 2, ಮಳಲೂರು ಪಂಚಾಯತ್‌ನ 1, ಬೀಕನಹಳ್ಳಿ ಪಂಚಾಯತ್‌ನ 1, ಈಶ್ವರಹಳ್ಳಿಯ 2, ಕಳಸಾಪುರದ 2, ಹರಿಹರದಹಳ್ಳಿಯ 2, ಬಿದರೆ ಗ್ರಾಮ ಪಂಚಾಯತ್‌ನ 1 ಗ್ರಾಮಕ್ಕೆ ಟ್ಯಾಂಕರ್‌ ನೀರು ಸರಬರಾಜು ಮಾಡಲಾಗುತ್ತಿದೆ. ಅದರಲ್ಲಿ ಈಶ್ವರಹಳ್ಳಿ ಹಾಗೂ ಮುಗುಳವಳ್ಳಿ ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿಯಿಂದ ನೀರು ಒದಗಿಸಲಾಗುತ್ತಿದೆ ಎಂದರು.

ಜಿಪಿಎಸ್‌ ಅಳವಡಿಸಿರುವ ವಾಹನಗಳಲ್ಲಿಯೇ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ನಿಗದಿತ ಸಮಯದೊಳಗೆ ನೀರು ಸರಬರಾಜು ಮಾಡಿದ ಬಾಬ್ತು ಬಿಲ್ಗಳನ್ನು ಪಾವತಿಸಲಾಗುತ್ತಿದೆ ಎಂದು ಹೇಳಿದರು.

ಟಾಸ್ಕ್ಪೋರ್ಸ್‌ನಡಿ ಕುಡಿಯುವ ನೀರಿನ ಕಾಮಗಾರಿಗಳನ್ನು ನಿರ್ವಹಿಸಲಾಗುತ್ತಿದೆ. ಮೊದಲ ಹಂತದಲ್ಲಿ ಕಡೂರು ತಾಲೂಕಿನಲ್ಲಿ 1 ಕೋಟಿ ರೂ.ಗಳ ಅನುದಾನದಲ್ಲಿ 58 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. 2ನೇ ಹಂತದಲ್ಲಿ 50 ಲಕ್ಷ ರೂ.ಗಳ ಅನುದಾನದಲ್ಲಿ ಕಾಮಗಾರಿ ನಡೆಯುತ್ತಿವೆ. ಅದೇ ರೀತಿ ಚಿಕ್ಕಮಗಳೂರು ತಾಲೂಕಿನಲ್ಲಿ ಮೊದಲ ಹಂತದಲ್ಲಿ 50 ಲಕ್ಷ ರೂ.ಗಳಲ್ಲಿ 36 ಕಾಮಗಾರಿ ಪೂರ್ಣಗೊಂಡಿದ್ದು, 2ನೇ ಹಂತದಲ್ಲಿ 25 ಲಕ್ಷ ರೂ.ಗಳಲ್ಲಿ ಕಾಮಗಾರಿ ನಡೆಯುತ್ತಿವೆ ಎಂದರು.

ಮುಂದಿನ ದಿನಗಳಲ್ಲಿ ಕಡೂರು ತಾಲೂಕಿನ 60 ಮತ್ತು ತರೀಕೆರೆ ತಾಲೂಕಿನ 6 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಬಹುದು ಎಂದು ನಿರೀಕ್ಷಿಸಲಾಗಿದೆ. ಸಮಸ್ಯಾತ್ಮಕ ಗ್ರಾಮಗಳಿಗೆ ಆಗಾಗ್ಗೆ ಭೇಟಿ ನೀಡಿ ಪರಿಶೀಲಿಸುವಂತೆ ಪಿ.ಡಿ.ಒ.ಗಳು ಹಾಗೂ ಎಇಇಗಳಿಗೆ ಸೂಚನೆ ನೀಡಲಾಗಿದೆ. ತಾವೂ ಸಹ ವಾರದಲ್ಲಿ 3 ದಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತಿರುವುದಾಗಿ ಹೇಳಿದರು.

ಕಡೂರು ತಾಲೂಕಿನಲ್ಲಿ ಹೊಸದಾಗಿ 58 ಬೋರ್‌ವೆಲ್ ಕೊರೆಸಲಾಗಿದೆ. ಈ ಪೈಕಿ 6 ಬೋರ್‌ವೆಲ್ನಲ್ಲಿ ನೀರು ಬಂದಿಲ್ಲ. ಚಿಕ್ಕಮಗಳೂರು ತಾಲೂಕಿನಲ್ಲಿ 36 ಬೋರ್‌ವೆಲ್ ಕೊರೆಸಲಾಗಿದ್ದು, 2ರಲ್ಲಿ ನೀರು ಬಂದಿಲ್ಲ. ನೀರು ಬಂದಿರುವ ಬೋರ್‌ವೆಲ್ಗಳಲ್ಲಿಯೂ ಕಡಿಮೆ ಪ್ರಮಾಣದಲ್ಲಿ ನೀರು ದೊರೆತಿದೆ. ಅದು ಕೇವಲ 15-20 ದಿನಗಳಿಗೆ ಮಾತ್ರ ಸಾಕಾಗುತ್ತಿದೆ ಎಂದು ವಿವರಿಸಿದರು.

ಕುಡಿಯುವ ನೀರಿನ ಕಾಮಗಾರಿಗೆ ಅನುದಾನದ ಕೊರತೆ ಇಲ್ಲ. ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಕಾಮಗಾರಿ ಆಗಬೇಕಿದ್ದರೂ ಆದ್ಯತೆಯ ಮೇರೆಗೆ ಶೀಘ್ರದಲ್ಲಿಯೇ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಯಾವುದೇ ಗ್ರಾಮಕ್ಕೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಬೇಕಿದ್ದರೂ ಕಾನೂನು ರೀತ್ಯಾ ಅನುಮತಿ ಪಡೆದು ಕೂಡಲೆ ಸರಬರಾಜು ಮಾಡುವಂತೆಯೂ ಗ್ರಾಮ ಪಂಚಾಯತ್‌ಗಳಿಗೆ ಆದೇಶಿಸಲಾಗಿದೆ ಎಂದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.