3ಲಕ್ಷ ಮತಗಳ ಅಂತರದ ಗೆಲುವು: ಪ್ರಜ್ವಲ್ ವಿಶ್ವಾಸ

ಚುನಾವಣೆಯಲ್ಲಿ ಶೇ.90 ರಷ್ಟು ಕಾಂಗ್ರೆಸ್ಸಿಗರಿಂದ ಸಿಕ್ಕಿದೆ ಬೆಂಬಲ

Team Udayavani, Apr 23, 2019, 2:59 PM IST

hasan 3

ಹಾಸನ: ಚುನಾವಣೆಯಲ್ಲಿ ನಾನು ಗೆಲ್ಲುವ ಖಚಿತ ವಿಶ್ವಾಸವಿದೆ. 2 ರಿಂದ 3 ಲಕ್ಷ ಬಹುಮತಗಳ ಅಂತರದಲ್ಲಿ ಗೆಲುವು ಸಾಧಿಸುವೆ. ಜೆಡಿಎಸ್‌ ಮುಖಂಡರು, ಕಾರ್ಯಕರ್ತರೊಂದಿಗೆ ಶೇ.90 ರಷ್ಟು ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರೂ ನನ್ನ ಪರವಾಗಿ ಕೆಲಸ ಮಾಡಿದ್ದಾರೆ ಎಂದು ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್‌ – ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್‌ನ ಶಾಸಕರು, ಮಾಜಿ ಶಾಸಕರು ನನ್ನ ತಂದೆಯ ಸ್ಥಾನದಲ್ಲಿ ನಿಂತು ನನ್ನ ಪರವಾಗಿ ಚುನಾವಣೆಯಲ್ಲಿ ಪ್ರಚಾರ ಮಾಡಿ, ಮತ ಹಾಕಿಸಿದ್ದಾರೆ. ನನ್ನ ಪರ ಕೆಲಸ ಮಾಡಿರುವ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವೆ. ವಿಶೇಷವಾಗಿ ಎಲ್ಲಾ ಕಾಂಗ್ರೆಸ್‌ ಮುಖಂಡರ ನಿವಾಸಗಳಿಗೆ ಒಂದೆರೆಡು ದಿನಗಳಲ್ಲಿ ಭೇಟಿ ನೀಡಿ ಧನ್ಯವಾದ ಹೇಳುವೆ ಎಂದು ತಿಳಿಸಿದರು.

ಜಿಲ್ಲಾ ರಾಜಕಾರಣಕ್ಕೆ ಹೊಸ ಮುಖವಾಗಿರುವ ನಾನು ಎಲ್ಲಾ ಗ್ರಾಮಗಳಿಗೂ ಭೇಟಿ ಕೊಡಬೇಕೆಂದು ಜನರು ಬಯಸುತ್ತಾರೆ. ಚುನಾವಣೆಯ ಸಂದರ್ಭದಲ್ಲಿ ಭೇಟಿ ನೀಡಲು ಸಾಧ್ಯವಾಗದಿರುವ ಹಳ್ಳಿಗಳಿಗೆ ಭೇಟಿ ನೀಡುವೆ ಎಂದರು.

ಜಿಲ್ಲೆಯ ಮಗನಾಗಿ ಕೆಲಸ ಮಾಡುವೆ: ನಾನು ಚುನಾವಣೆಯಲ್ಲಿ ಗೆಲ್ಲಲಿ, ಬಿಡಲಿ. ಹಾಸನ ಜಿಲ್ಲೆಯ ಮಗನಾಗಿ ಕೆಲಸ ಮಾಡುವೆ. ಜಿಲ್ಲೆಯಲ್ಲಿ ಎಚ್.ಡಿ.ದೇವೇಗೌಡರು, ಎಚ್.ಡಿ.ರೇವಣ್ಣನವರು ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಆದರೂ ಕೆಲವು ಹಳ್ಳಿಗಳಲ್ಲಿ ಕೆಲವು ಸಮಸ್ಯೆಗಳಿವೆ. ಮುಂದಿನ 5 ವರ್ಷದಲ್ಲಿ ಏನೇನು ಮಾಡಬೇಕು ಎಂದು ಕಾರ್ಯಯೋಜನೆ ಸಿದ್ಧಪಡಿಸಿ ಕಾರ್ಯೋನ್ಮುಖ ನಾಗುವೆ ಎಂದ ಅವರು ಚುನಾವಣಾ ಫ‌ಲಿತಾಂಶ ಘೋಷಣೆಯಾದ ನಂತರ ಎಲ್ಲಾ ಸಮುದಾ ಯದವರ ಪ್ರತ್ಯೇಕ ಸಭೆಗಳನ್ನು ನಡೆಸಿ ಅಹವಾಲು ಆಲಿಸುವೆ. ಚುನಾವಣೆಯ ಸಂದರ್ಭದಲ್ಲಿ ನೀಡಿರುವ ಭರವಸೆಗಳನ್ನು ಅನುಷ್ಠಾನಗಳೊಳಿಸುವ ನಿಟ್ಟಿನಲ್ಲಿ ಪ್ರತಿ ತಾಲೂಕಿಲ್ಲೂ ಸಭೆ ನಡೆಸಿ ಕುಂದು- ಕೊರತೆಯ ಮಾಹಿತಿ ಪಡೆಯುವೆ ಎಂದು ಪ್ರಜ್ವಲ್ ರೇವಣ್ಣ ಹೇಳಿದರು.

ಎಚ್‌ಡಿಸಿಸಿ ಉಪಾಧ್ಯಕ್ಷ ಎಚ್.ವಿ.ಗೀರೀಶ್‌, ನಿರ್ದೇಶಕ ಬಿದರಿಕೆರೆ ಜಯರಾಂ, ನಗರಸಭೆ ಮಾಜಿ ಸದಸ್ಯ ಎಂ.ಕೆ.ಕಮಲ್ಕುಮಾರ್‌, ಹಾಸನ ನಗರಸಭೆ ಮಾಜಿ ಉಪಾಧ್ಯಕ್ಷ ಇರ್ಷಾದ್‌ ಅವರೂ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಅವಿವೇಕಿಯ ಆರೋಪ: ಮಂಜುಗೆ ಟಾಂಗ್‌

ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆಂದು ಬಿಜೆಪಿ ಅಭ್ಯರ್ಥಿ ದೂರಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಪ್ರಜ್ವಲ್ ರೇವಣ್ಣ ಅವರು, ಪ್ರಮಾಣ ಪತ್ರದಲ್ಲಿ ಸಮರ್ಪಕ ಮಾಹಿತಿ ನೀಡಿದ್ದೇನೆ. ಯಾವುದೋ ಒಂದು ಕಂಪನಿಯಲ್ಲಿ ಹೊಂದಿ ರುವ ಷೇರುಗಳ ಬಗ್ಗೆ ಪ್ರಮಾಣ ಪತ್ರದಲ್ಲಿ ಮಾಹಿತಿ ನೀಡಿಲ್ಲ ಎಂಬುದರಲ್ಲಿ ಹುರುಳಿಲ್ಲ. ನಾನು ಆ ಕಂಪನಿಯ ಪಾಲುದಾರಿಕೆಯಿಂದ ಹೊರ ಬಂದಿರುವ ಬಗ್ಗೆ ನಾಮಪತ್ರ ಸಲ್ಲಿಕೆಗೆ ಕೆಲ ದಿನಗಳ ಹಿಂದೆಯೇ ಎನ್‌ಒಸಿ ಪಡೆದಿದ್ದೇನೆ. ಆದಾಯ ತೆರಿಗೆ ಇಲಾಖೆಗೂ ಮಾಹಿತಿ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದರು. ನನ್ನ ವಿರುದ್ಧ ಯಾವುದೇ ಕಪ್ಪು ಚುಕ್ಕೆ ಹುಡುಕಲಾಗದೆ ಈಗ ಪ್ರಮಾಣ ಪತ್ರದಲ್ಲಿ ದೋಷವಿದೆ ಎಂದು ನನ್ನ ಎದುರಾಳಿಗಳು ಆರೋಪಿಸುತ್ತಿದ್ದಾರೆ. ಅವರು ನ್ಯಾಯಾಲಯಕ್ಕೆ ಹೋಗಿ ಪ್ರಶ್ನಿಸಲಿ. ನಾನು ನ್ಯಾಯಾಲಯದಲ್ಲಿ ದಾಖಲೆ ಸಹಿತ ಹೋರಾಟ ಮಾಡುವೆ. ನ್ಯಾಯಾಲಯದ ತೀರ್ಪಿಗೆ ತಲೆ ಬಾಗುವೆ ಎಂದ ಅವರು, ಅವಿವೇಕಿಗಳ ಆರೋಪಗಳಿಗೆಲ್ಲಾ ನಾನು ತಲೆ ಕೆಡಿಸಿಕೊಳ್ಳಲ್ಲ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.