ಗೋದ್ರೋತ್ತರ ಸಂತ್ರಸ್ತೆಗೆ 50 ಲಕ್ಷ ರೂ. ಪರಿಹಾರ
Team Udayavani, Apr 24, 2019, 6:00 AM IST
ಹೊಸದಿಲ್ಲಿ: 2002ರ ಗೋದ್ರೋತ್ತರ ಹಿಂಸಾಚಾರದ ವೇಳೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಬಿಲ್ಕಿಸ್ ಬಾನೊ ಎಂಬ ಮಹಿಳೆಗೆ 50 ಲಕ್ಷ ರೂ. ಪರಿಹಾರ ನೀಡಬೇಕೆಂದು ಗುಜರಾತ್ ಸರಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಜತೆಗೆ, ಆಕೆಯ ಜೀವನೋಪಾಯಕ್ಕಾಗಿ ಒಂದು ಸರ್ಕಾರಿ ನೌಕರಿ ಹಾಗೂ ವಾಸ್ತವ್ಯಕ್ಕೆ ಸೂಕ್ತ ವ್ಯವಸ್ಥೆಯನ್ನೂ ಕಲ್ಪಿಸಬೇಕು ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರ ನ್ಯಾಯಪೀಠ ಸೂಚಿಸಿದೆ.
ಇದೇ ವೇಳೆ, 5 ಲಕ್ಷ ರೂ. ಪರಿಹಾರ ನೀಡುವುದಾಗಿ ಹೇಳಿದ್ದ ಗುಜರಾತ್ ಸರಕಾರದ ವಾದವನ್ನು ತಳ್ಳಿಹಾಕಿರುವ ನ್ಯಾಯಾಲಯ, ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ್ದ ಗುಜರಾತ್ನ ನಾಲ್ವರು ಪೊಲೀಸರ ವಿರುದ್ಧ ಸರಕಾರ ಕೈಗೊಂಡ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ಸೂಚಿಸಿದೆ.
ಅಹ್ಮದಾಬಾದ್ ಬಳಿಯ ರಾಂಧಿಕ್ಪುರ್ನಲ್ಲಿ 2002ರ ಮಾ. 3ರಂದು ಬನೋ ಕುಟುಂಬದ ಮೇಲೆ 14 ದುಷ್ಕರ್ಮಿಗಳು ದಾಳಿ ನಡೆಸಿ, ಬನೋ ಕುಟುಂಬದ 13 ಜನರನ್ನು ಕೊಂದಿದ್ದರಲ್ಲದೆ, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ