ನೀತಿ ಸಂಹಿತೆ ಸಡಿಲ ಆಡಳಿತಕ್ಕೆ ಚುರುಕು

ಕುಡಿವ ನೀರಿಗಾಗಿ ಕ್ರಮಕೈಗೊಳ್ಳಲು ಸೂಚನೆ

Team Udayavani, Apr 25, 2019, 6:00 AM IST

33

ಬೆಂಗಳೂರು: ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆಯೇ, ನೀತಿ ಸಂಹಿತೆಯಿಂದಾಗಿ ಬಾಕಿ ಉಳಿದಿದ್ದ ಕೆಲಸಗಳಿಗೆ ರಾಜ್ಯ ಸರ್ಕಾರ ಚುರುಕು ಮುಟ್ಟಿಸಿದೆ. ರಾಜ್ಯದಲ್ಲಿ ಬರಪರಿಸ್ಥಿತಿ ತೀವ್ರವಾಗಿದ್ದು, ತ್ವರಿತವಾಗಿ ಕುಡಿಯುವ ನೀರಿನ ಕಾಮಗಾರಿ ಕೈಗೊಳ್ಳಬೇಕಿದೆ. ಇದಕ್ಕಾಗಿಯೇ ಈಗಾಗಲೇ ರಚಿಸಲಾಗಿರುವ ಕಾರ್ಯಪಡೆಗಳಿಗೆ ಸಮ ರೋಪಾದಿಯಲ್ಲಿ ಕೆಲಸ ಮಾಡುವಂತೆ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್‌ ಸಚಿವ ಕೃಷ್ಣ ಬೈರೇಗೌಡ ಸೂಚನೆ ನೀಡಿದ್ದಾರೆ.

ವಿಕಾಸಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಬುಧವಾರ ಕೃಷ್ಣ ಬೈರೇಗೌಡ ಅವರು, ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್‌ ಒಳಗೊಂಡಂತೆ ಉನ್ನತ ಅಧಿಕಾರಿಗಳ ಸಭೆ ನಡೆಸಿದ್ದಾರೆ. ರಾಜ್ಯದ 176 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ತುರ್ತಾಗಿ ನೀರು ಪೂರೈಕೆ ವ್ಯವಸ್ಥೆಗೆ ಅಗತ್ಯವಾದ ಕ್ರಮ ಕೈಗೊ ಳ್ಳಬೇಕು ಎಂದು ಸೂಚಿಸಲಾಗಿದೆ ಎಂದರು.

ಏ. 23ರ ನಂತರ ಅಗತ್ಯ ಕಾಮಗಾರಿಗಳಿಗೆ ಟೆಂಡರ್‌ ಆಹ್ವಾನಿಸಿ ಕಾರ್ಯಾದೇಶ ನೀಡಲು ಹಾಗೂ ಕಾಮಗಾರಿ ಜಾರಿಗೊಳಿಸಲು ಚುನಾವಣಾ ಆಯೋಗ ಒಪ್ಪಿಗೆ ನೀಡಿರುವುದರಿಂದ ತ್ವರಿತವಾಗಿ ಅಲ್ಪಾವಧಿ ಟೆಂಡರ್‌ಗಳನ್ನು ಆಹ್ವಾನಿಸಿ ಕುಡಿಯುವ ನೀರಿನ ಕಾಮಗಾರಿಗಳನ್ನು ಆರಂಭಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿರುವ ಕಡೆ ಹೊಸದಾಗಿ ಕೊಳವೆ ಬಾವಿ ಕೊರೆಯುವ ಅಗತ್ಯತೆ ಪರಿಗಣಿಸಿ ಪ್ರತಿ ತಾಲೂಕಿಗೆ ಒಂದು ಅಥವಾ ಎರಡು ಕೊಳವೆ ಬಾವಿ ಕೊರೆಯುವ ಏಜೆನ್ಸಿಗಳನ್ನು ಟೆಂಡರ್‌ ಮೂಲಕ ಗುರುತಿಸಲಾಗುತ್ತಿದೆ. ಅವಧಿಯನ್ನು 15 ತಿಂಗಳಿಗೆ ಸಿದ್ಧಪಡಿಸುವಂತೆ ಕೊಳವೆ ಬಾವಿಗಳಿಂದ ಸಂಪರ್ಕ ಕಲ್ಪಿಸಲು ಡಿ.ಸಿ.ಗಳ ಬಳಿಯಿರುವ ಎನ್‌ಡಿಆರ್‌ಎಫ್/ ಎಸ್‌ಡಿಆರ್‌ಎಫ್ ಅಥವಾ ಗ್ರಾಮ ಪಂಚಾಯಿತಿಗಳ ಅನುದಾನ ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ. ಈ ಹಣ ಸಾಕಾಗದಿದ್ದರೆ ಟಾಸ್ಕ್ಫೋರ್ಸ್‌ಗಳಿಗೆ ಒದಗಿಸಲಾದ ಅನುದಾನ ಬಳಸಿಕೊಳ್ಳುವಂತೆಯೂ ತಿಳಿಸಲಾಗಿದೆ. ಅಲ್ಲದೇ ಈ ಸಂಬಂಧ ಅಗತ್ಯ ಸುತ್ತೋಲೆಯನ್ನೂ ಹೊರಡಿಸಲಾಗಿದೆ ಎಂದು ಹೇಳಿದರು.

ಅಧಿಕಾರಿಗಳೇ ಹೊಣೆ
ಒಣಗಿದ ಕೊಳವೆ ಬಾವಿಗಳ ಸಾಮಗ್ರಿಗಳನ್ನು ಶೇಖರಿಸಿ ಹೊಸ ಕೊಳವೆ ಬಾವಿಗಳಿಗೆ ಬೇಕಾದ ಪಂಪ್‌ಸೆಟ್, ಜಿಐ ಪೈಪ್‌ ಹಾಗೂ ಕೇಬಲ್ಗಳನ್ನು ಕಡ್ಡಾಯವಾಗಿ ಉಪಯೋಗಿಸುವಂತೆ ಸೂಚಿಸಲಾಗಿದೆ. ಹಳೆಯ ವಿದ್ಯುತ್‌ ಸಂಪರ್ಕವನ್ನು ಹೊಸ ಸಂರ್ಪಕ್ಕೆ ವರ್ಗಾಯಿಸುವಂತೆಯೂ ಸೂಚನೆ ನೀಡಲಾಗಿದೆ. ಆ ಮೂಲಕ ಅನಗತ್ಯ ದುಂದುವೆಚ್ಚ ತಡೆಗೆ ಕ್ರಮ ವಹಿಸಲಾಗಿದೆ. ಈ ಯೋಜನೆಯ ಅನುಷ್ಠಾನದಲ್ಲಿ ಯಾವುದೇ ರೀತಿಯ ಲೋಪ ಕಂಡು ಬಂದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ನೇರ ಹೊಣೆ ಮಾಡಲಾಗುವುದು ಎಂಬ ಎಚ್ಚರಿಕೆ ನೀಡಲಾಗಿದೆ ಎಂದು ಸಚಿವರು ಹೇಳಿದರು.

ಟಾಪ್ ನ್ಯೂಸ್

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.