ಮೈತ್ರಿಗೆ ಮುನ್ನಡೆ ಕನಸು; ಕಮಲಕ್ಕೆ ಗೆಲ್ಲುವ ಹುಮ್ಮಸ್ಸು

ಅಭ್ಯರ್ಥಿಗಳಿಬ್ಬರಲ್ಲಿ ಯಾರೇ ಗೆದ್ದರೂ ಮಾದಿಗ ಸಮುದಾಯದವರೆಂಬ ಚರ್ಚೆ

Team Udayavani, Apr 25, 2019, 3:51 PM IST

Udayavani Kannada Newspaper

ಚಿತ್ರದುರ್ಗ: ಚಿತ್ರದುರ್ಗ ಪರಿಶಿಷ್ಟ ಜಾತಿ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಶೇ. 70.64 ರಷ್ಟು ಮತದಾನವಾಗಿದೆ. ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಶೇ. 68.26ರಷ್ಟು ಮತ ಚಲಾವಣೆಯಾಗಿದ್ದು, ಸರಾಸರಿ ಮತದಾನಕ್ಕಿಂತ ಶೇ. 2.38 ರಷ್ಟು ಮತದಾನ ಕಡಿಮೆಯಾಗಿದೆ. ಇದು ಫಲಿತಾಂಶದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.

ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟ ಮತ್ತು ಬಿಜೆಪಿ ಅಭ್ಯರ್ಥಿಗಳಲ್ಲಿ ಯಾರೇ ಗೆದ್ದರೂ ಕನಿಷ್ಠ ಹತ್ತು ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಬಹುದು ಎಂಬ ಚರ್ಚೆ ನಡೆದಿದೆ. ಅಲ್ಲದೆ ಬೂತ್‌, ಗ್ರಾಮ, ಹೋಬಳಿ, ವಿಧಾನಸಭಾವಾರು ತಾವೆಷ್ಟು ಮತ ಪಡೆದಿದ್ದೇವೆಂದು ಅಭ್ಯರ್ಥಿಗಳು, ಕಾರ್ಯಕರ್ತರು ಹಾಗೂ ಮುಖಂಡರು ಲೆಕ್ಕ ಹಾಕುತ್ತಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಯಾವ್ಯಾವ ಮತಗಟ್ಟೆಗಳಲ್ಲಿ, ಊರುಗಳಲ್ಲಿ ಯಾವ ಪಕ್ಷದ ಅಭ್ಯರ್ಥಿಗಳು ಎಷ್ಟು ಮತ ಪಡೆದರು ಎನ್ನುವುದನ್ನು ತಾಳೆ ಹಾಕಿ ನೋಡಲಾಗುತ್ತಿದೆ.

ಕಲ್ಲೇನಹಳ್ಳಿ ಮತಗಟ್ಟೆಯಲ್ಲಿ ಹೆಚ್ಚು ಮತದಾನ: ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಕಲ್ಲೇನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತಗಟ್ಟೆ ಸಂಖ್ಯೆ 4 ರಲ್ಲಿ ಅತಿ ಹೆಚ್ಚು ಅಂದರೆ ಶೇ. 91.89 ರಷ್ಟು ಮತದಾನವಾಗಿದೆ. ಈ ಮತಗಟ್ಟೆಯಲ್ಲಿ 224 ಪುರುಷರು ಹಾಗೂ 232 ಮಹಿಳಾ ಮತದಾರರ ಪೈಕಿ ಒಟ್ಟು 456 ಮತದಾರರಿದ್ದರು. ಅವರಲ್ಲಿ 206 ಪುರುಷ ಹಾಗೂ 213 ಮಹಿಳೆಯರು ಸೇರಿದಂತೆ ಒಟ್ಟು 419 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಓಬಣ್ಣನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 263 ರಲ್ಲಿ ಕೇವಲ ಶೇ. 0.88 ರಷ್ಟು ಮತದಾನವಾಗಿ ಅತಿ ಕಡಿಮೆ ಮತದಾನವಾಗಿದೆ. ಈ ಗ್ರಾಮದಲ್ಲಿ ಹಲವು ಕಾರಣಗಳಿಗಾಗಿ ಮತದಾನವನ್ನು ಬಹಿಷ್ಕರಿಸಲಾಗಿತ್ತು. 287 ಪುರುಷ ಹಾಗೂ 280 ಮಹಿಳೆಯರು ಸೇರಿದಂತೆ ಒಟ್ಟು 567 ಮತದಾರರಿದ್ದರು. ಇಲ್ಲಿ ಮೂವರು ಪುರುಷರು ಹಾಗೂ ಇಬ್ಬರು ಮಹಿಳೆಯರು ಸೇರಿ ಒಟ್ಟು ಐವರು ಮತದಾರರಷ್ಟೇ ಮತ ಚಲಾವಣೆ ಮಾಡಿದ್ದಾರೆ. ಇದನ್ನು ಹೊರತುಪಡಿಸಿ ಚಿತ್ರದುರ್ಗ ನಗರದ ಸಿ.ಕೆ. ಪುರ ಸರಸ್ವತಿ ಕಾನೂನು ಕಾಲೇಜು ಮತಗಟ್ಟೆ ಸಂಖ್ಯೆ 221 ರಲ್ಲಿ ಶೇ. 48.13 ರಷ್ಟು ಕಡಿಮೆ ಮತದಾನವಾಗಿದೆ. ರಾಜಕೀಯ ಪಂಡಿತರು ಕೂಡಿಸಿ ಕಳೆಯುವ ಹಾಗೂ ತಾಳೆ ಹಾಕುವುದರಲ್ಲಿ ಮಗ್ನರಾಗಿದ್ದು, ಚುನಾವಣಾ ಫಲಿತಾಂಶ ಅವರೆಲ್ಲರ ಲೆಕ್ಕಾಚಾರಗಳನ್ನು ಉಲಾr ಮಾಡಿದರೂ ಅಚ್ಚರಿ ಇಲ್ಲ.

ಎರಡೂ ಸೇರಿದ್ರೆ ಬಿಜೆಪಿಗಿಂತ ಜಾಸ್ತಿ!: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ 82,896 ಮತಗಳನ್ನು ಪಡೆದು ಸಮೀಪದ ಪ್ರತಿಸ್ಪರ್ಧಿ ಜೆಡಿಎಸ್‌ ಅಭ್ಯರ್ಥಿ ಕೆ.ಸಿ. ವೀರೇಂದ್ರ (ಪಪ್ಪಿ) ಅವರನ್ನು 32,985 ಮತಗಳ ಅಂತರದಿಂದ ಪರಾಭವಗೊಳಿಸಿದ್ದರು. ಕಾಂಗ್ರೆಸ್‌ ಅಭ್ಯರ್ಥಿ ಎಚ್.ಎ. ಷಣ್ಮುಖಪ್ಪ 49,014 ಮತಗಳನ್ನು ಪಡೆದಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಅಭ್ಯರ್ಥಿಗಳು 98,925 ಮತ ಪಡೆದಿದ್ದರು. ಆ ಇಬ್ಬರು ಪಡೆದ ಮತಗಳು ಬಿಜೆಪಿ ಅಭ್ಯರ್ಥಿಗಿಂತ 16,029 ಮತಗಳಷ್ಟು ಜಾಸ್ತಿ. ಇದು ಮೈತ್ರಿ ಅಭ್ಯರ್ಥಿ ಬಿ.ಎನ್‌. ಚಂದ್ರಪ್ಪ ಗೆಲುವಿಗೆ ಪ್ಲಸ್‌ ಪಾಯಿಂಟ್ ಆಗಬಹುದು ಎಂಬ ವಾದವನ್ನು ಉಭಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಮುಂದಿಡುತ್ತಿದ್ದಾರೆ.

ಮೋದಿ ಹವಾ, ಯುವ ಮತದಾರರು, ಇಬ್ಬರೂ ಮಾದಿಗ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳಾಗಿರುವುದರಿಂದ ಯಾರೇ ಗೆದ್ದರೂ ಮಾದಿಗ ಸಮುದಾಯದವರೇ ಆಗಿರುತ್ತಾರೆ ಎಂಬ ಮಾತು ಕೂಡ ಕ್ಷೇತ್ರದಲ್ಲಿ ಕೇಳಿ ಬರುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರೇ ಕ್ಷೇತ್ರಕ್ಕೆ ಆಗಮಿಸಿ ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಲೋಕಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪರವಾಗಿ ವಿಜಯ ಸಂಕಲ್ಪ ಸಮಾವೇಶ ನಡೆಸಿದ್ದರು. ನಂತರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಡಿ.ಕೆ. ಶಿವಕುಮಾರ್‌ ಮತ್ತಿತರ ನಾಯಕರು ಕೂಡ ಆಗಮಿಸಿ ಪರಿವರ್ತನಾ ಸಮಾವೇಶ ನಡೆಸಿದ್ದರು. ಎರಡೂ ಸಮಾವೇಶಗಳು ಚಿತ್ರದುರ್ಗ ನಗರದಲ್ಲೇ ನಡೆದಿದ್ದರಿಂದ ಮತದಾರರ ಒಲವು ಯಾರ ಕಡೆ ಇದೆ ಎಂದು ತಕ್ಷಣಕ್ಕೆ ಹೇಳುವುದು ಕಷ್ಟ.

•ಹರಿಯಬ್ಬೆ ಹೆಂಜಾರಪ್ಪ

ಟಾಪ್ ನ್ಯೂಸ್

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.