ಗಂಗಾವಳಿ ಸೇತುವೆ ನಿರ್ಮಾಣಕ್ಕೆ ಬಾರ್ಜ್‌ ತಡೆ


Team Udayavani, Apr 27, 2019, 3:47 PM IST

nc-3

ಅಂಕೋಲಾ: ದಕ್ಷಿಣದ ಕಾಶಿ ಗೋಕರ್ಣ ಮತ್ತು ಕರ್ನಾಟಕ ಬಾರ್ಡೋಲಿ ಅಂಕೋಲಾವನ್ನು ಕೂಡಿಸುವ ಜನರ ಶತಮಾನಗಳ ಕನಸಾದ ಮಂಜುಗುಣಿ ಗಂಗಾವಳಿ ಸೇತುವೆ ಕಾಮಗಾರಿ ಆರಂಭವಾದ ಬೆನ್ನಲ್ಲೇ ಇಲ್ಲಿಯ ಬಾರ್ಜ್‌ ಒಡಾಟ ಅಡ್ಡಿಯುಂಟಾಗುತ್ತಿದೆ.

ಈ ಸೇತುವೆ ನಿರ್ಮಾಣಕ್ಕೆ ಶಂಕುಸ್ಥಾಪನೆಯಾಗಿ ಹಲವು ತಿಂಗಳು ಕಾಮಗಾರಿ ನಡೆಯದೆ ಜನರಲ್ಲಿ ಮತ್ತೂಮ್ಮೆ ಆತಂಕ ಸೃಷ್ಟಿಸಿತ್ತು. ಸರಕಾರದ ತಾಂತ್ರಿಕ ಕಾರಣಗಳಿಂದ ಮಂಜೂರಾದ ಕಾಮಗಾರಿ ವಿಳಂಬವಾಗಿ ಆರಂಭವಾದರು ಈಗ ಅದಕ್ಕೆ ಮತ್ತೂಂದು ವಿಘ್ನ ಎದುರಾಗಿದೆ. ಮಂಜುಗುಣಿಯಿಂದ ಪ್ರತಿನಿತ್ಯ ಗಂಗಾವಳಿಗೆ ಪ್ರಯಾಣಿಕರನ್ನು ಹೊತ್ತುಯ್ಯುವ ಬಾರ್ಜ್‌ ಈ ಸೇತುವೆ ನಿರ್ಮಾಣದ ಸ್ಥಳದಿಂದಲೇ ಸಂಚರಿಸುತ್ತಿದೆ. ಇದರಿಂದಾಗಿ ಮತ್ತೆ ಕಾಮಗಾರಿಗೆ ಬ್ರೇಕ್‌ ಬಿಳುವ ಸಾಧ್ಯತೆಗಳಿವೆ. ಸಂಬಂಧಿಸಿದ ಇಲಾಖೆ ಬಾರ್ಜ್‌ ಸಂಚಾರಕ್ಕೆ ಶೀಘ್ರ ಬದಲಿ ವ್ಯವಸ್ಥೆ ಮಾಡಿದರೆ ಸೇತುವೆ ಕಾಮಗಾರಿ ಸುರಳಿತವಾಗಿ ಆಗಲು ಸಾಧ್ಯ.

ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದಿಂದ ಗಂಗಾವಳಿ ಸೇತುವೆ ಅಂದಾಜು 30 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿದೆ. ಸೇತುವೆ ನಿರ್ಮಾಣದಲ್ಲಿ ನೈಪುಣ್ಯ ಹೊಂದಿರುವ ಡಿ.ಆರ್‌. ಇನ್ಫಾಸ್ಟ್ರಕ್ಚರ್‌ ಕಂಪನಿ ಗುತ್ತಿಗೆ ಪಡೆದುಕೊಂಡಿದೆ. ಕಾಮಗಾರಿ ಪೂರ್ಣಗೊಳಿಸಲು ಎರಡು ವರ್ಷ ಕಾಲಾವಕಾಶ ನೀಡಲಾಗಿದೆ. ಆದರೆ ತ್ವರಿತ ಗತಿಯಲ್ಲಿ ನಡೆಯದ ಕಾಮಗಾರಿ ಹಲವಾರು ಅನುಮಾನಗಳಿಗೂ ಕಾರಣವಾಗಿತ್ತು.

ಈ ಸೇತುವೆ 315 ಮೀ. ಉದ್ದ, 10.5 ಮೀ. ಅಗಲ ಹೊಂದಿದೆ. ಭಾರೀ ಸಾಮರ್ಥ್ಯ ಹೊರಬಲ್ಲ, ಹತ್ತು ಆಧಾರ ಸ್ತಂಭಗಳ ಅಡಿಪಾಯದ ಮೇಲೆ ಸೇತುವೆ ನಿರ್ಮಾಣಗೊಳ್ಳಲಿದ್ದು, ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ. ಮೀನುಗಾರಿಕೆಗೆ ತೊಡಕಾಗದಂತೆ ನಿರ್ಮಾಣಗೊಳ್ಳಲಿರುವ ಸೇತುವೆಯ ಅಡಿಭಾಗದಿಂದ ದೋಣಿ ಸಾಗುವಂತೆ ನೋಡಿಕೊಳ್ಳಲಾಗುವುದು. ಅತ್ಯಾಧುನಿಕ ವಿನ್ಯಾಸದೊಂದಿಗೆ ನಿರ್ಮಾಣಗೊಳ್ಳಲಿರುವ ಸೇತುವೆಯಿಂದ ವಾಹನ ಸಂಚರಿಸಲು 7.5 ಮೀ. ಅಗಲದ ರಸ್ತೆ ವ್ಯವಸ್ಥೆ ಕಲ್ಪಿಸಲಾಗುವುದು. ಅಲ್ಲದೆ ಹೊಂದಿಕೊಂಡು ಇಕ್ಕೆಲಗಳಲ್ಲಿ ಪಾದಚಾರಿಗಳ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಗುವುದು. ಗೋಕರ್ಣ ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ ಬೆಳೆಯುವ ತರಕಾರಿ ಸೇರಿದಂತೆ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸುವುದರೊಂದಿಗೆ ಕೃಷಿಕರಿಗೂ ಶಕ್ತಿ ತುಂಬಲಿದೆ.

ಪ್ರವಾಸೋದ್ಯಮಕ್ಕೆ ಶಕ್ತಿ ತುಂಬುವ ಸೇತುವೆ: ದಕ್ಷಿಣ ಕಾಶಿ ಗೋಕರ್ಣ ಧಾರ್ಮಿಕ ಸ್ಥಳವಾಗಿ ಬೆಳೆದಿರುವುದಲ್ಲದೆ ಸುಂದರ ಕಡಲ ಕಿನಾರೆ ಪ್ರವಾಸಿಗರನ್ನು ಸೆಳೆದುಕೊಂಡಿದೆ. ದೇಶ-ವಿದೇಶಗಳಿಂದಲೂ ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಿದ್ದು ಜಗತ್ತಿನ ಭೂಪಟದಲ್ಲಿ ಗುರುತಿಸಿಕೊಂಡಿದೆ. ನಿರ್ಮಾಣಗೊಳ್ಳಲಿರುವ ಸೇತುವೆ ಗೋವಾ ಮಾರ್ಗವಾಗಿ ಬರುವ ಪ್ರವಾಸಿಗರ ಪ್ರಯಾಸ ಕಡಿಮೆಗೊಳಿಸಲಿದೆ. ಪ್ರವಾಸೋದ್ಯಮ ಕ್ಷೇತ್ರದ ವ್ಯಾಪ್ತಿ ವಿಸ್ತರಿಸಲಿದ್ದು, ಹೊಟೇಲ್, ಅಂಗಡಿ, ಮುಂಗಟ್ಟುಗಳ ವ್ಯಾಪಾರ, ವ್ಯವಹಾರ ವೃದ್ಧಿಸಲಿದೆ. ಸ್ಥಳೀಯ ಉತ್ಪನ್ನಗಳಿಗೂ ಬೆಲೆ ಬರಲಿದ್ದು, ಹಲವಾರು ಉದ್ಯೋಗಾವಕಾಶ ಹೆಚ್ಚಲಿದೆ.

ಇತ್ತೀಚಿನ ವರ್ಷಗಳಲ್ಲಿ ಮೀನುಗಾರಿಕೆ ಜೆಟ್ಟಿಗಳು ಅಭಿವೃದ್ಧಿಗೊಳಿಸಲಾಗಿದ್ದು, ನಿರ್ಮಾಣಗೊಳ್ಳಲಿರುವ ಸೇತುವೆಯಿಂದಾಗಿ ತದಡಿ, ಕೇಣಿ, ಬೇಲೆಕೇರಿ, ಹಾರವಾಡ ಸೇರಿದಂತೆ ಸುತ್ತಮುತ್ತಲಿನ ಮೀನುಗಾರರಿಗೆ ಅನುಕೂಲವಾಗಲಿದೆ. ಸೇತುವೆ ನಿರ್ಮಾಣ ಕಾರ್ಯದಲ್ಲಿ ಅಂದಿನ ಶಾಸಕ ಸತೀಶ ಸೈಲ್ ಹೆಚ್ಚಿನ ಮುತುವರ್ಜಿ ವಹಿಸಿ ಶಂಕುಸ್ಥಾಪನೆ ನೆರವೇರಿಸಿದ್ದರು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.