ಅನುಮೋದನೆಗೆ ವಿಪಕ್ಷ ಅಸಮಾಧಾನ


Team Udayavani, Apr 28, 2019, 3:05 AM IST

anumodane

ಬೆಂಗಳೂರು: ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ನಿರ್ಣಯ ಕೈಗೊಳ್ಳಲು ಅವಕಾಶವಿಲ್ಲ ಎಂದು ಸ್ವತಃ ಆಯುಕ್ತರೇ ಹೇಳಿದರೂ ಕೆಲವು ವಿಷಯಗಳಿಗೆ ಕೌನ್ಸಿಲ್‌ ಸಭೆಯಲ್ಲಿ ಅನುಮೋದನೆ ಪಡೆದ ಆಡಳಿತ ಪಕ್ಷದ ಕ್ರಮ ವಿವಾದಕ್ಕೆ ಕಾರಣವಾಗಿದೆ.

ಚುನಾವಣಾ ನೀತಿ ಸಂಹಿತೆ ಮೇ 27ರವರೆಗೆ ಜಾರಿಯಲ್ಲಿದ್ದರೂ ಪಾಲಿಕೆಯಲ್ಲಿ ಶನಿವಾರ “ನವ ಬೆಂಗಳೂರು’ ಯೋಜನೆಯಲ್ಲಿನ ಕಾಮಗಾರಿಗಳನ್ನು ಟೆಂಡರ್‌ ಕರೆಯದೆ ನೇರವಾಗಿ ಕೆಆರ್‌ಐಡಿಎಲ್‌ ಮೂಲಕ ಕೈಗೊಳ್ಳಲು ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸುವ ವಿಷಯಕ್ಕೆ ಅನುಮೋದನೆ ಪಡೆಯಲಾಯಿತು.

ಪಾಲಿಕೆ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಅವರ ಗೈರು ಹಾಜರಿಯಲ್ಲಿ ವಿಶೇಷ ಆಯುಕ್ತ ಮನೋಜ್‌ ಕುಮಾರ್‌ ಮೀನಾ, ಕೆಆರ್‌ಐಡಿಎಲ್‌ ಮೂಲಕ ಕಾಮಗಾರಿ ನಡೆಸುವ ಕುರಿತು ಪ್ರಸ್ತಾವನೆಗೆ ಅನುಮೋದನೆ ಪಡೆಯುವ ವಿಷಯದ ಕುರಿತು ಪ್ರತಿಕ್ರಿಯಿಸಿ, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಹೀಗಾಗಿ ಯಾವುದೇ ಆಡಳಿತಾತ್ಮಕ ನಿರ್ಣಯ ಕೈಗೊಳ್ಳಲು ಸಾಧ್ಯವಿಲ್ಲ. ಮೇ 27ರ ಬಳಿಕ ನಿರ್ಣಯ ಕೈಗೊಳ್ಳುವುದು ಒಳಿತು ಎಂದು ಸಲಹೆ ನೀಡಿದರು.

ಆದರೂ 2018-19 ಹಾಗೂ 2020ನೇ ಸಾಲಿನ ನಗರೋತ್ಥಾನ ಹಾಗೂ ಎಸ್‌ಐಪಿ ಯೋಜನೆಯಡಿ ಸುಮಾರು 4261 ಕೋಟಿ ಕಾಮಗಾರಿಗಳನ್ನು ಟೆಂಡರ್‌ ಇಲ್ಲದೆ ನೇರವಾಗಿ ಕೆಆರ್‌ಐಡಿಎಲ್‌ ಮೂಲಕ ಕೈಗೆತ್ತಿಕೊಳ್ಳುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ನಿರ್ಣಯ ಕೈಗೊಳ್ಳಲಾಯಿತು.

ಇದರಿಂದ ಕೆರಳಿದ ಬಿಜೆಪಿ ಸದಸ್ಯರು, ನಿರ್ಣಯ ಹಿಂಪಡೆಯಲು ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ, ನಿರ್ಣಯ ಕೈಗೊಳ್ಳಲು ಪಾಲಿಕೆಗೆ ಅಧಿಕಾರವಿದೆ ಎಂದು ಕಾಂಗ್ರೆಸಿಗರು ವಾದಿಸಿದರೆ, ಹಣ ಹೊಡೆಯಲು ಕಾಮಗಾರಿಗಳನ್ನು ಕೆಆರ್‌ಐಡಿಎಲ್‌ಗೆ ನೀಡುತ್ತಿದ್ದಾರೆ ಎಂದು ಬಿಜೆಪಿ ಸದಸ್ಯರು ಆರೋಪಿಸಿ ಸಭಾತ್ಯಾಗ ಮಾಡಿದರು.

ಇದಕ್ಕೂ ಮೊದಲು ಸಭೆಯಲ್ಲಿ ಮಾತನಾಡಿದ ಪ್ರತಿಪಕ್ಷ ನಾಯಕ ಪದ್ಮನಾಭರೆಡ್ಡಿ, ಚುನಾವಣೆ ಸಂದರ್ಭದಲ್ಲಿ ಹಣ ಕೊಟ್ಟಿರುವ ಗುತ್ತಿಗೆದಾರರಿಗೆ ಲಾಭ ಮಾಡಿಕೊಡಲು ಕೆಆರ್‌ಐಡಿಎಲ್‌ ಸಂಸ್ಥೆಗೆ ಗುತ್ತಿಗೆ ನೀಡುತ್ತಿದ್ದೀರ. ಸಿದ್ದರಾಮಯ್ಯ ಅವರ ಅವಧಿಯಲ್ಲಿ ಘೋಷಣೆ ಮಾಡಿದ 7300 ಕೋಟಿ ರೂ.ಗಳಲ್ಲಿ ಇನ್ನೂ 4000 ಕೋಟಿ ರೂ. ಬಂದಿಲ್ಲ. ಹೀಗಿರುವಾಗ ಜನರ ಹಣ ಲೂಟಿ ಮಾಡಲು ಪಾಲಿಕೆ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅದಕ್ಕೆ ಉತ್ತರಿಸಿದ ಕಾಂಗ್ರೆಸ್‌ ಹಿರಿಯ ಸದಸ್ಯ ಗುಣಶೇಖರ್‌, ಕುಡಿಯುವ ನೀರು, ಮಳೆ ನೀರು ಕಾಲುವೆಗಳ ದುರಸ್ತಿಗೆ ಟೆಂಡರ್‌ ಆಹ್ವಾನಿಸಲು ತಡವಾಗಲಿದೆ. ಹೀಗಾಗಿ ಕೆಆರ್‌ಐಡಿಎಲ್‌ ಮೂಲಕ ಅಂತಹ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ನಿರ್ಣಯ ಕೈಗೊಂಡು ಸರ್ಕಾರಕ್ಕೆ ಕಳುಹಿಸುವ ಅಧಿಕಾರ ಪಾಲಿಕೆಗಿದೆ ಎಂದರು.

ಚುನಾವಣಾ ಆಯೋಗಕ್ಕೆ ದೂರು: ಪಾಲಿಕೆಯಲ್ಲಿ ಕೈಗೊಂಡ ನಿರ್ಣಯ ಹಿಂಪಡೆಯಬೇಕೆಂದು ಪ್ರತಿಭಟನೆ ನಡೆಸಿ ಸಭಾತ್ಯಾಗ ಮಾಡಿದ ಬಿಜೆಪಿ ಸದಸ್ಯರು, ಪದ್ಮನಾಭ ರೆಡ್ಡಿ ನೇತೃತ್ವದಲ್ಲಿ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಕುಡಿಯುವ ನೀರು ಹಾಗೂ ಪ್ರಕೃತಿ ವಿಕೋಪ ನಿರ್ವಹಣೆಗೆ ಸಂಬಂಧಿಸಿದ ಕಾಮಗಾರಿಗಳನ್ನು ಹೊರತುಪಡಿಸಿ ಉಳಿದ ಯಾವುದೇ ಕಾಮಗಾರಿಗಳನ್ನು ನಡೆಸಲು ಅವಕಾಶ ನೀಡಬಾರದು ಎಂದು ದೂರಿನಲ್ಲಿ ಕೋರಿದ್ದಾರೆ. ಪಾಲಿಕೆಯಲ್ಲಿ ನಿರ್ಣಯ ಕೈಗೊಂಡಿರುವ ಕುರಿತಂತೆ ವರದಿ ನೀಡುವಂತೆ ವಿಶೇಷ ಆಯುಕ್ತ ಮನೋಜ್‌ ಕುಮಾರ್‌ ಮೀನಾ ಅವರಿಗೆ, ಆಯೋಗ ಮೌಖೀಕವಾಗಿ ತಿಳಿಸಿದೆ ಎನ್ನಲಾಗಿದೆ.

ತೆರವು ಕಾರ್ಯಾಚರಣೆ: ಪಾಲಿಕೆಯ ವ್ಯಾಪ್ತಿಯ ಹಳೆಯ, ಅಪಾಯದ ಸ್ಥಿತಿಯಲ್ಲಿರುವ ಮರಗಳನ್ನು ತೆರವುಗೊಳಿಸಬೇಕು ಎಂದು ಪಕ್ಷಾತೀತವಾಗಿ ಪಾಲಿಕೆ ಸದಸ್ಯರು ಒತ್ತಾಯಿಸಿದರು. ಉಪಅರಣ್ಯ ಸಂರಕ್ಷಣಾಧಿಕಾರಿ ಚೋಳರಾಜನ್‌ ಮಾತನಾಡಿ, ಮಳೆಗಾಲದ ಹಿನ್ನೆಲೆಯಲ್ಲಿ ಈವರೆಗೆ 615 ಮರಗಳನ್ನು ತೆರವುಗೊಳಿಸಿದ್ದು, 3037 ರೆಂಬೆ-ಕೊಂಬೆಗಳನ್ನು ಕತ್ತರಿಸಲಾಗಿದೆ.

ಅದರಂತೆ ತೆರವುಗೊಳಿಸಿದ ಮರಗಳಿಂದ ಪಾಲಿಕೆಗೆ 10 ಲಕ್ಷ ರೂ. ಆದಾಯ ಬಂದಿದೆ. ಪಾಲಿಕೆಯ ನಾಲ್ಕು ಡಿಪೋಗಳಲ್ಲಿರುವ ದಾಸ್ತಾನು ಹರಾಜು ಹಾಕಲಾಗುವುದು. ಮಳೆಗಾಲದ ಹಿನ್ನೆಲೆಯಲ್ಲಿ ಅರಣ್ಯ ತಂಡಗಳನ್ನು ಹೆಚ್ಚಿಸಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ಮರ ಕಡಿಯಲು ಕೆಲವು ಸಂಸ್ಥೆಗಳು ಅಡ್ಡಿಪಡಿಸುತ್ತಿವೆ. ದಿನಕ್ಕೆ 20-30 ಎನ್‌ಜಿಒಗಳು ನಮ್ಮ ಕಚೇರಿಗೆ ಬಂದು ನಗರದಲ್ಲಿ ಮರ ಕಡಿಯದಂತೆ ಮನವಿ ಮಾಡುತ್ತಿವೆ. ಆದರೂ ಅಪಾಯಕಾರಿ ಮರಗಳನ್ನು ತೆರವುಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

ಶುಕ್ರವಾರ ಸಂಜೆಯಿಂದ, ಅಲ್ಲಿ ಹಾವು ಬಂದಿದೆ, ಇಲ್ಲಿ ಹಾವು ನುಗ್ಗಿದೆ ಎಂದು ಸಾಕಷ್ಟು ಸುಳ್ಳು ಕರೆಗಳು ನನಗೆ ಬಂದಿವೆ. ವನ್ಯಜೀವಿ ಸಂರಕ್ಷಕರಿಗೆ ಗೌರವಧನ ನೀಡಿಲ್ಲವೆಂದು ಹೀಗೆ ಸಾಕಷ್ಟು ಕರೆಗಳು ಬಂರುತ್ತಿದ್ದು, ರಾತ್ರಿಯಿಡಿ ಕರೆಗಳು ಬರುತ್ತಲೇ ಇದ್ದು, ನನ್ನನ್ನು ಬೆದರಿಸಲು ಹೀಗೆ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.