ಭಾರೀ ಬಿರುಗಾಳಿ ಸಹಿತ ಮಳೆ: ಬೆಳೆ, ಮನೆಗಳಿಗೆ ಹಾನಿ

Team Udayavani, Apr 29, 2019, 10:49 AM IST

mandya-sheet

ಪಾಂಡವಪುರ: ತಾಲೂಕಿನ ವಿವಿಧೆಡೆ ಶನಿವಾರ ರಾತ್ರಿ ಭಾರೀ ಬಿರುಗಾಳಿ ಸಹಿತ ಸುರಿದ ಮಳೆಗೆ 50ಕ್ಕೂ ಹೆಚ್ಚು ಮನೆಗಳ ಕಲ್ನರ್‌ ಶೀಟ್‌ಗಳು ಹಾನಿಗೊಳಗಾಗಿವೆ. ತಾಲೂಕಿನ ಕಣಿವೆಕೊಪ್ಪಲು, ರಾಗಿಮುದ್ದನಹಳ್ಳಿ ಹೊಸ ಬಡಾವಣೆ, ಬೇಬಿ ಗ್ರಾಮ, ಹಳೇಬೀಡು, ಮಹದೇಶ್ವರಪುರ ಗ್ರಾಮ ಸೇರಿದಂತೆ ವಿವಿಧೆಡೆ ಮನೆಯ ಹೆಂಚು, ಕಲ್ನರ್‌ ಶೀಟ್‌ಗಳು, ಟ್ರಾನ್ಸ್‌ಫಾರ್ಮರ್‌ಗಳು, ವಿದ್ಯುತ್‌ ಕಂಬಗಳು ಧರೆಗುರುಳಿವೆ.

ಅತ್ತಿನಗಾನಹಳ್ಳಿ ರೈತ ಬಸವರಾಜು ಒಂದೂವರೆ ಎಕರೆಯಲ್ಲಿ ಬೆಳೆದಿದ್ದ ಪಪ್ಪಾಯಿ ಬೆಳೆ ನಷ್ಟವಾಗಿ ಸುಮಾರೂ 2 ಲಕ್ಷ ರೂ.ಗಳಿಗೆ ಅಧಿಕ ನಷ್ಟ ಸಂಭವಿಸಿದೆ. 1500 ಪಪ್ಪಾಯಿ ಗಿಡ ಹಾನಿಗೀಡಾಗಿವೆ. ಹಾಗೆಯೇ ಮಹದೇಶ್ವರಪುರ ಗ್ರಾಮದ ದೊಡ್ಡೇಗೌಡರ 400 ಪಪ್ಪಾಯಿ ಗಿಡಗಳು ಹಾನಿಗೊಳಗಾಗಿವೆ. ಹಳೇಬೀಡು ತಿಮ್ಮೇಗೌಡರ 300 ಪಪ್ಪಾಯಿ ಗಿಡಗಳು ಹಾಗೂ ಕುಮಾರ್‌ಗೆ ಸೇರಿದ 500 ಪಪ್ಪಾಯಿ ಗಿಡಗಳು ಹಾನಿಗೊಳಗಾಗಿ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.

ಹಾರಿಹೋದ ಹೆಂಚು: ಕಣಿವೆಕೊಪ್ಪಲು ಗ್ರಾಮದ ಅಪ್ಪಾರಾವ್‌ಗೆ ಸೇರಿದ ಮಂಗಳೂರು ಹೆಂಚಿನ ಮನೆಯ ಹೆಂಚುಗಳು ಬಿರುಗಾಳಿಗೆ ಹಾರಿಹೋಗಿದ್ದು, ಮನೆಯ ಗೋಡೆ ಬಿರುಕು ಬಿಟ್ಟಿದೆ. ಅದೃಷ್ಟವಶಾತ್‌ ಯಾವುದೇ ಅಪಾಯ ಸಂಭವಿಸಿಲ್ಲ. ಇದರಿಂದ ಸುಮಾರು 25 ಸಾವಿರಕ್ಕೂ ಹೆಚ್ಚು ನಷ್ಟ ಸಂಭವಿಸಿದೆ. ಕೂಲಿ ಕೆಲಸ ಮಾಡಿ ಜೀವನ ನಡೆಸು ತ್ತಿದ್ದು, ಇಬ್ಬರು ಚಿಕ್ಕವಯಸ್ಸಿನ ಹೆಣ್ಣುಮಕ್ಕಳೊಂದಿಗೆ ಜೀವನ ಕಷ್ಟವಾಗಿದ್ದು, ಮನೆ ಸರಿಪಡಿಸಿಕೊಳ್ಳಲು ಕಷ್ಟ ಎನ್ನುತ್ತಾರೆ ಅಪ್ಪಾರಾವ್‌.

ಧರೆಗುರುಳಿದ ವಿದ್ಯುತ್‌ ಕಂಬ: ಹಾಗೆಯೇ ರಾಗಿಮುದ್ದನಹಳ್ಳಿ ಹೊಸ ಬಡಾವಣೆಯಲ್ಲಿ ಅನೇಕ ಮನೆಗಳ ಕಲ್ನರ್‌ ಶೀಟುಗಳು ಹಾನಿಗೊಳಗಾಗಿವೆ. ಪಟ್ಟ ಣದ ಟಿಎಪಿಸಿಎಂಎಸ್‌ ರೈತ ಸಭಾಂಗಣದ ಮುಂದೆ 3 ವಿದ್ಯುತ್‌ ಕಂಬ ಸೇರಿದಂತೆ ತಾಲೂಕಿನ ಬೇಬಿ, ಚಿಕ್ಕಾಡೆ, ರಾಗಿಮುದ್ದನಹಳ್ಳಿ, ಶಂಭೂನಹಳ್ಳಿ, ಕೆರೆ ತೊಣ್ಣೂರು, ಬೆಳ್ಳಾಳೆ, ಲಕ್ಷ್ಮೀಸಾಗರ, ನೀಲನಹಳ್ಳಿ ಚಂದ್ರೆ, ಟಿ.ಎಸ್‌.ಛತ್ರ ಸೇರಿದಂತೆ ವಿವಿಧ ಗ್ರಾಮಗಳಲ್ಲಿ 60ಕ್ಕೂ ಹೆಚ್ಚು ವಿದ್ಯುತ್‌ ಕಂಬಗಳು ಹಾಗೂ 8 ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ಗಳು ಧರೆಗುರುಳಿವೆ.

ತಹಶೀಲ್ದಾರ್‌ ಭೇಟಿ: ಜತೆಗೆ ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ರೈತ ಪುಟ್ಟೇಗೌಡರಿಗೆ ಸೇರಿದ ಬಾಳೆ ಬೆಳೆ ಹಾನಿಗೀಡಾಗಿದೆ. ಅದೃಷ್ಟವಶಾತ್‌ ಎಲ್ಲಿಯೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನಾ ಸ್ಥಳಗಳಿಗೆ ತಹಶೀಲ್ದಾರ್‌ ಪ್ರಮೋದ್‌ ಎಲ್. ಪಾಟೀಲ್ ಹಾಗೂ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಕೂಡಲೇ ಮಳೆ ಹಾನಿಯ ವರದಿ ತಯಾರಿಸಿ ಕೊಡುವಂತೆ ಸ್ಥಳದಲ್ಲಿದ್ದ ಅಧಿಕಾರಿ ಗಳಿಗೆ ಸೂಚಿಸಿದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.