ಕೋಟೆ ಪಕ್ಕದಲ್ಲೇ ಕೊಳವೆಬಾವಿ ಕೊರೆತ!

ಕಣ್ಮುಚ್ಚಿ ಕುಳಿತ ನಗರಾಡಳಿತ, ಪ್ರಾಚ್ಯವಸ್ತು ಇಲಾಖೆ •ನಗರದ ಕೋಟೆಗಳ ರಕ್ಷಣೆಗಿಲ್ಲ ಕಿಂಚಿತ್ತೂ ಕಾಳಜಿ•ಸಾರ್ವಜನಿಕರ ಆಕ್ರೋಶ

Team Udayavani, Apr 29, 2019, 5:34 PM IST

29-April-31

ರಾಯಚೂರು: ನಗರದ ಉಸ್ಮಾನಿಯಾ ಮಾರುಕಟ್ಟೆ ಹಿಂಭಾಗದ ಕೋಟೆ ಸಂದಿಯಲ್ಲಿ ಶನಿವಾರ ರಾತ್ರಿ ಕೊಳವೆ ಬಾವಿ ಕೊರೆದಿರುವುದು.

ರಾಯಚೂರು: ನಗರದ ಉಸ್ಮಾನಿಯಾ ಮಾರುಕಟ್ಟೆ ಹಿಂಭಾಗದ ಪುರಾತತ್ವ ಇಲಾಖೆ ವ್ಯಾಪ್ತಿಗೆ ಒಳಪಡುವ ಕೋಟೆ ಪಕ್ಕದಲ್ಲಿ ಖಾಸಗಿಯವರು ಕೊಳವೆಬಾವಿ ಕೊರೆಸಿದ್ದು, ಕಂಡರೂ ಕಾಣದಂತಿರುವ ನಗರಾಡಳಿತ, ಪ್ರಾಚ್ಯವಸ್ತು ಇಲಾಖೆ ನಡೆಗೆ ಸಾರ್ವಜನಿಕರ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ನಗರದಲ್ಲಿ ಈಗಾಗಲೇ ಕೋಟೆಗಳ ಒತ್ತುವರಿ ಮಿತಿಮೀರಿದೆ ಎಂಬ ಆರೋಪಗಳಿವೆ. ಅಲ್ಲದೇ, ಈಗಿರುವ ಒಂದಷ್ಟು ಪ್ರಾಚ್ಯವಸ್ತುಗಳ ಸಂರಕ್ಷಣೆಗೆ ಆದ್ಯತೆ ನೀಡಬೇಕು ಎಂಬ ಕಿಂಚಿತ್ತೂ ಕಾಳಜಿಯೂ ಕಾಣದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಅಂಥದ್ದರಲ್ಲಿ ಶನಿವಾರ ತಡರಾತ್ರಿ ಕೋಟೆ ಪಕ್ಕದಲ್ಲೇ ಬೋರ್‌ ಕೊರೆಯಿಸಲಾಗಿದೆ. ಅದಕ್ಕೆ ಅಡ್ಡ ಬಂದ ಕಲ್ಲುಗಳನ್ನು ತೆರವು ಮಾಡಿ ಬೋರ್‌ ಕೊರೆಸಲಾಗಿದೆ. ಈ ರೀತಿ ಮಾಡುವುದು ಪುರಾತತ್ವ ಹಾಗೂ ಪ್ರಾಚ್ಯವಸ್ತು ಇಲಾಖೆಗಳ ನಿಯಮಗಳಿಗೆ ವಿರುದ್ಧವಾಗಿದ್ದು, ನಗರದಲ್ಲಿ ಮಾತ್ರ ಯಾರೂ ಹೇಳುವವರು ಕೇಳುವವರಿಲ್ಲದಾಗಿದೆ.

ಈಗಾಗಲೇ ನಗರದ ಉಸ್ಮಾನೀಯ ಮಾರುಕಟ್ಟೆ ಹಿಂಭಾಗ ಸೇರಿ ವಿವಿಧೆಡೆ ಕೋಟೆಗಳ ಒತ್ತುವರಿ ಮಾಡಲಾಗಿದೆ ಎಂಬ ಆರೋಪಗಳಿವೆ. ಆದರೆ, ಜಿಲ್ಲಾಡಳಿತವಾಗಲಿ, ಪ್ರಾಚ್ಯವಸ್ತು ಇಲಾಖೆ ಆಗಲಿ ಆ ಸ್ಥಳಗಳ ತೆರವಿಗೆ ಮುಂದಾಗುತ್ತಿಲ್ಲ. ಆದರೆ, ಈಗ ಕೋಟೆ ಒತ್ತುವರಿ ಮಾಡಿದ್ದಲ್ಲದೇ, ಕೇವಲ ಮೂರು ಅಡಿ ಪಕ್ಕದಲ್ಲಿ ನೂರಾರು ಅಡಿ ಕೊಳವೆ ಬಾವಿ ಕೊರೆಸುತ್ತಿರುವುದು ಐತಿಹಾಸಿಕ ಸ್ಥಳಗಳ ರಕ್ಷಣೆಗೆ ಕೊಡಲಿ ಪೆಟ್ಟು ಕೊಟ್ಟಂತಾಗಿದೆ.

ನಿಯಮ ಉಲ್ಲಂಘನೆ: ಪ್ರಾಚ್ಯವಸ್ತು, ಪುರಾತತ್ವ ಇಲಾಖೆ ನಿಯಮಗಳ ಪ್ರಕಾರ ಯಾವುದೇ ಐತಿಹಾಸಿಕ ಸ್ಥಳದ 100 ಮೀ. ವ್ಯಾಪ್ತಿಯಲ್ಲಿ ಸ್ಮಾರಕಕ್ಕೆ ಧಕ್ಕೆ ಬರುವ ಚಿಕ್ಕ ಕೆಲಸಗಳನ್ನೂ ಮಾಡಬಾರದು. ಅಂಥ ಅನಿವಾರ್ಯ ಸನ್ನಿವೇಶ ಎದುರಾದರೆ ಜಿಲ್ಲಾಡಳಿತದ ಪರವಾನಗಿ ಬೇಕು. ಇನ್ನು200-300 ಮೀಟರ್‌ ವ್ಯಾಪ್ತಿಯಲ್ಲಿ ಕೆಲವೊಂದು ಕಾಮಗಾರಿ ಕೈಗೊಳ್ಳಲು ಅವಕಾಶವಿದ್ದು, ಅದಕ್ಕೂ ಪುರಾತತ್ವ ಇಲಾಖೆ ಪರವಾನಗಿ ಕಡ್ಡಾಯವಾಗಿ ಬೇಕು.

ನಗರಾಡಳಿತ ಮೌನ: ನಗರದಲ್ಲಿ ಐತಿಹಾಸಿಕ ಸ್ಥಳಗಳ ಒತ್ತುವರಿ ಬಗ್ಗೆ ಅನೇಕ ಸಂಘಟನೆಗಳು ಹೋರಾಟ ನಡೆಸಿ ಎಚ್ಚರಿಸಿದರೂ ನಗರಸಭೆ ಮಾತ್ರ ಮೌನಕ್ಕೆ ಶರಣಾಗಿದೆ. ಎಲ್ಲ ವಿಚಾರಗಳು ಕಂಡರೂ ಕಾಣದಂತೆ ಜಾಣಕುರುಡು ಪ್ರದರ್ಶಿಸುತ್ತಿದೆ. ಇನ್ನಾದರೂ ಎಚ್ಚರಿಕೆ ವಹಿಸಿ ಇಂಥ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲಿ ಎಂಬುದು ಸಾರ್ವಜನಿಕರ ಒತ್ತಾಸೆ.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.