ಕಾಲ ಕಟ್ಟಿ ಹಾಕೋ ಶಕ್ತಿ ಚಿತ್ರಕಲೆಗಿದೆ: ಡಾ| ಅಂದಾನಿ

Team Udayavani, Apr 29, 2019, 5:48 PM IST

29-April-34

ಕಲಬುರಗಿ: ದೊಡ್ಡಪ್ಪ ಅಪ್ಪ ಸಭಾ ಮಂಟಪದಲ್ಲಿ ಡಾ| ಎಸ್‌.ಎಂ. ನೀಲಾ ರಚಿಸಿದ ಚಿತ್ರಕಲಾಕೃತಿಗಳನ್ನು ಗಣ್ಯರು ವೀಕ್ಷಿಸಿದರು. ಡಾ| ವಿ.ಡಿ. ಮೈತ್ರಿ, ಡಾ| ಲಕ್ಷ್ಮೀ ಪಾಟೀಲ, ಡಾ| ಅಂದಾನಿ ಇದ್ದರು.

ಕಲಬುರಗಿ: ಇತಿಹಾಸ ವರ್ತಮಾನಕ್ಕೆ ತರುವ ಶಕ್ತಿ ಕಲೆಗಿದೆ. ಚಿತ್ರಕಲೆ, ಶಿಲ್ಪಕಲೆ, ವಾಸ್ತುಕಲೆ ಪ್ರಕಾರಗಳು ಇತಿಹಾಸದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದು, ಕಾಲ ಕಟ್ಟಿ ಹಾಕುವ ಶಕ್ತಿ ಹೊಂದಿರುವ ಚಿತ್ರಕಲೆಗಿದೆ ಎಂದು ಹಿರಿಯ ಕಲಾವಿದ ಡಾ| ವಿ.ಜಿ.ಅಂದಾನಿ ಹೇಳಿದರು.

ನಗರದ ದೊಡ್ಡಪ್ಪ ಅಪ್ಪ ಸಭಾ ಮಂಟಪದಲ್ಲಿ ರವಿವಾರ ಹಮ್ಮಿಕೊಂಡಿದ್ದ ಶರಣಬಸವ ವಿಶ್ವವಿದ್ಯಾಲಯ ಲಲಿತಕಲಾ ವಿಭಾಗದ ಮುಖ್ಯಸ್ಥ, ಹಿರಿಯ ಕಲಾವಿದ ಡಾ| ಸುಬ್ಬಯ್ಯ ಎಂ.ನೀಲಾ ಅವರ ಕುರಿತ ‘ನೀಲಾಮೃತ’ ಅಭಿನಂದನಾ ಗ್ರಂಥ ಬಿಡುಗಡೆ ಮತ್ತು ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 64 ವಿಧದ ಕಲೆಗಳಲ್ಲಿ ಕುಲಕಸಬುಗಳಾದ ಕಮ್ಮಾರಿಕೆ, ಬಡಿಗೆತನ, ಕುಂಬಾರಿಕೆ ಕೂಡ ಕಲೆಗಾರಿಕೆ ಭಾಗವಾಗಿವೆ ಎಂದರು.

ಸಮಾರಂಭ ಉದ್ಘಾಟಿಸಿ ಮಾತನಾಡಿದ ಶರಣಬಸವ ವಿಶ್ವವಿದ್ಯಾಲಯದ ಸಮ ಉಪಕುಲಪತಿ ಡಾ| ವಿ.ಡಿ. ಮೈತ್ರಿ, ಹೈದ್ರಾಬಾದ ಕರ್ನಾಟಕ ಭಾಗದಲ್ಲಿ ಲಲಿತ ಕಲೆಗಳು ವ್ಯಾಪಕವಾಗಿ ಬೆಳೆಯಬೇಕೆಂಬ ಆಶಯ ವ್ಯಕ್ತಪಡಿಸಿದರು.

‘ನೀಲಾಮೃತ’ ಗ್ರಂಥ ಪರಿಚಯಿಸಿದ ಹಿರಿಯ ಸಾಹಿತಿ ಡಾ| ಸ್ವಾಮಿರಾವ ಕುಲಕರ್ಣಿ ಮಾತನಾಡಿ, ಚಿತ್ರಕಲೆಯು ಮೌನದ ಭಾಷೆ. ಇದನ್ನು ಸಶಕ್ತವಾಗಿ ಬಳಸಲು ಕಲಿತರೆ ಮಾತ್ರ ಉತ್ತಮ ಕಲಾವಿದರಾಗಲು ಸಾಧ್ಯ. ಇದನ್ನು ಡಾ| ಎಸ್‌.ಎಂ.ನೀಲಾ ಸಾಧಿಸಿದ್ದಾರೆ. ಕಷ್ಟ ಪಟ್ಟು ಬೆಳೆದ ನೀಲಾ ತಮ್ಮ ಅನುಭವವನ್ನೇ ಕಲೆಯನ್ನಾಗಿಸಿಕೊಂಡಿದ್ದಾರೆ ಎಂದರು.

ಡಾ| ಎಸ್‌.ಎಂ. ನೀಲಾ ರಚಿಸಿದ ಚಿತ್ರಕಲಾ ಪ್ರದರ್ಶನವನ್ನು ಶರಣಬಸವ ವಿಶ್ವವಿದ್ಯಾಲಯದ ಡೀನ್‌ ಡಾ| ಲಕ್ಷ್ಮೀ ಪಾಟೀಲ ಉದ್ಘಾಟಿಸಿದರು. ಇದೆ ವೇಳೆ ನಾಡೋಜ ಜೆ.ಎಸ್‌. ಖಂಡೇರಾವ, ಡಾ| ಎಸ್‌.ಎಂ. ಹಿರೇಮಠ, ಬಸವರಾಜ ಉಪ್ಪಿನ್‌, ಗೋರಟಿ ಅನ್ನದಾನಯ್ಯ, ಡಾ| ಕೊತ್ಲಿ ಬಸವರಾಜ, ಶಿವಕುಮಾರ ಶಿರಿ, ಡಾ| ರೆಹಮಾನ್‌ ಪಟೇಲ, ಡಾ| ಶಾಹೀದ್‌ ಪಾಶಾ, ಡಾ| ವಿಶ್ವೇಶ್ವರಿ ತಿವಾರಿ, ಟಿ. ದೇವೇಂದ್ರ, ಮಹೇಶ ಬಡಿಗೇರ, ಯುವರಾಜ ಅನಂತ ಚಿಂಚನಸೂರ ಅವರನ್ನು ಸನ್ಮಾನಿಸಲಾಯಿತು.

ಮಹ್ಮದ್‌ ಅಯಾಜುದ್ದೀನ್‌ ಪಟೇಲ, ನೀಲಾಮೃತ ಕೃತಿ ಲೇಖಕ ಡಾ| ಬಸವರಾಜ ಕಲೆಗಾರ, ನಿವೃತ್ತ ಪ್ರಾಧ್ಯಾಪಕ ಡಾ| ಎಸ್‌.ಎಂ. ಹಿರೇಮಠ, ಡಾ| ಪರಿಮಳಾ ಅಂಬೇಕರ್‌, ಡಾ| ಅಶೋಕ ಶೆಟಕಾರ, ಡಾ|ಪರಶುರಾಮ, ರಾಘವೇಂದ್ರ ಭುರ್ಲಿ, ಸಿ.ಎಸ್‌. ಮಾಲಿಪಾಟೀಲ, ನಾರಾಯಣ ಜೋಶಿ, ಡಾ| ವಿಶ್ವೇಶ್ವರಿ ತಿವಾರಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.