ಡಿಸಿಎಂ ಭೇಟಿಯಾದ ಸಮಾನ ಮನಸ್ಕ ಶಾಸಕರು

Team Udayavani, May 2, 2019, 3:05 AM IST

dcm-bheti

ಬೆಂಗಳೂರು: ಸಮಾನ ಮನಸ್ಕರ ಸಭೆ ಕರೆಯಲು ಮುಂದಾಗಿರುವ ಶಾಸಕರಾದ ಎಸ್‌.ಟಿ.ಸೋಮಶೇಖರ್‌ ಹಾಗೂ ಬೈರತಿ ಬಸವರಾಜ್‌, ಬುಧವಾರ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರನ್ನು ಭೇಟಿ ಮಾಡಿ ಚರ್ಚಿಸಿದರು.

ಸಭೆ ನಂತರ ಮಾತನಾಡಿದ ಶಾಸಕ, “ಬಿಡಿಎ ಅಧ್ಯಕ್ಷ ಎಸ್‌.ಟಿ.ಸೋಮಶೇಖರ್‌, ಬಿಬಿಎಂಪಿ ಬಜೆಟ್‌ ಕುರಿತು ಚರ್ಚಿಸಲು ಉಪ ಮುಖ್ಯಮಂತ್ರಿಯನ್ನು ಭೇಟಿ ಮಾಡಿದ್ದೇವೆ. ರಾಜ್ಯದಲ್ಲಿ ಕುಂದಗೋಳ ಹಾಗೂ ಚಿಂಚೋಳಿ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತಿದೆ. ಹೀಗಾಗಿ ಎಲ್ಲ ಶಾಸಕರು ಚುನಾವಣೆ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಚುನಾವಣೆ ಬಳಿಕ ಶಾಸಕರೊಂದಿಗೆ ಚರ್ಚಿಸಿ ಸಮಾನ ಮನಸ್ಕರ ಸಭೆ ಕರೆಯುತ್ತೇನೆ,’ ಎಂದು ಹೇಳಿದರು.

ಇದೇ ವೇಳೆ, ಬಿಡಿಎ ಆಯುಕ್ತ ರಾಕೇಶ್‌ ಸಿಂಗ್‌ ವಿರುದ್ಧ ವಾಗ್ಧಾಳಿ ನಡೆಸಿದ ಅವರು, ಬಿಡಿಎ ಆಯುಕ್ತರಿಗೆ ಸಾರ್ವಜನಿಕರ ಬಗ್ಗೆ ಕಾಳಜಿಯಿಲ್ಲ. ಕೆಂಪೇಗೌಡ, ಅರ್ಕಾವತಿ ಬಡಾವಣೆಗಳಲ್ಲಿ ನಿವೇಶನ ಹಂಚಿಕೆ ಪೂರ್ಣಗೊಂಡಿಲ್ಲ. ನಿವೇಶನಕ್ಕಾಗಿ ಹಣ ಕಟ್ಟಿರುವ ಜನ ನರಳಾಡುತ್ತಿದ್ದಾರೆ.

ಆದರೆ, ಉಪ ಕಾರ್ಯದರ್ಶಿ 35 ನಿವೇಶನ ಅಕ್ರಮವಾಗಿ ಮಾರಾಟ ಮಾಡಿದ್ದಾರೆ. ಅವರ ವಿರುದ್ಧ ಆಯುಕ್ತರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಅವರನ್ನು ನಿಯಂತ್ರಿಸುವವರು ಯಾರು? ಜನರ ಸಮಸ್ಯೆ ಬಗೆಹರಿಸುವವರು ಯಾರು? ಬಿಡಿಎ ಅಧ್ಯಕ್ಷ ಸ್ಥಾನ ಲೆಕ್ಕಕ್ಕೆ ಇಲ್ಲದಂತಾಗಿದೆ. ಇದೆಲ್ಲವನ್ನೂ ಉಪ ಮುಖ್ಯಮಂತ್ರಿ ಗಮನಕ್ಕೆ ತಂದಿದ್ದೇವೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಡಾ.ಅಜಯ್‌ ಸಿಂಗ್‌ ಅವರ ನಿವಾಸಕ್ಕೆ ತೆರಳಿ ಶಾಸಕರು ಮಾತುಕತೆ ನಡೆಸಿದರು. ಆದರೆ, ಅವರೊಂದಿಗೆ ಯಾವುದೇ ರಾಜಕೀಯ ಚರ್ಚೆ ನಡೆಸಿಲ್ಲ. ಕೇವಲ ಉಪಹಾರ ಸೇವಿಸಿ, ಲೋಕಾಭಿರಾಮವಾಗಿ ಮಾತನಾಡಿದ್ದೇವೆ ಎಂದು ಹೇಳಿದರು.

ಡಾ.ಅಜಯ್‌ ಸಿಂಗ್‌ ಮಾತನಾಡಿ, ನಮ್ಮ ಮನೆಯಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ಚಿಂಚೋಳಿ, ಕುಂದಗೋಳ ವಿಧಾನಸಭೆ ಚುನಾವಣೆ ಕುರಿತು ಚರ್ಚೆ ನಡೆಸಿದ್ದೇವೆ. ಎಸ್‌.ಟಿ.ಸೋಮಶೇಖರ್‌ ಯಾವುದೇ ಸಭೆಗೆ ಆಹ್ವಾನ ನೀಡಿಲ್ಲ. ಆಹ್ವಾನ ಬಂದರೆ ಹೋಗುತ್ತೇನೆ ಎಂದು ಹೇಳಿದರು.

ಎಲ್ಲ ಶಾಸಕರು ಉಪ ಚುನಾವಣೆ ಕೆಲಸದಲ್ಲಿ ನಿರತರಾಗಿದ್ದಾರೆ. ಚುನಾವಣೆ ಬಳಿಕ ಸಮಾನ ಮನಸ್ಕ ಶಾಸಕರ ಜತೆ ಚರ್ಚಿಸಿ ಸಭೆ ಕರೆಯುತ್ತೇನೆ.
-ಎಸ್‌.ಟಿ.ಸೋಮಶೇಖರ್‌

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.