ಉಜಿರೆ ಸಿದ್ದವನ ಸಮೀಪ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು, ಇಬ್ಬರು ಸಾವು
Team Udayavani, May 4, 2019, 6:30 PM IST
Representative Image
ಉಜಿರೆ: ಚಲಿಸುತ್ತಿದ್ದ ಕಾರಿನ ಮೇಲೆ ಏಕಾಏಕಿ ಮರ ಬಿದ್ದು ಇಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಉಜಿರೆ ಸಿದ್ದವನ ಸಮೀಪ ಶನಿವಾರ ಸಂಜೆ ನಡೆದಿದೆ.
ಚಲಿಸುತ್ತಿದ್ದ ಕಾರಿನ ಮೇಲೆ ಭಾರೀ ಗಾತ್ರದ ಮರ ಬಿದ್ದ ಪರಿಣಾಮ ವಿಘ್ನೇಶ್ ಹಾಗೂ ಕ್ಷಿತಿಜ್ ಜೈನ್ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.