5 ದಿನಗಳ ಬಳಿಕ ಮರಳಿ ಕಾಡು ಸೇರಿದ ಆನೆ ಹಿಂಡು

ಕೆರೆ, ತೋಟಗಳಲ್ಲಿ ಬಿಡುಬಿಟ್ಟು ಆತಂಕ ಸೃಷ್ಟಿಸಿದ್ದ ಕಾಡಾನೆಗಳು ಶುಕ್ರವಾರ ರಾತ್ರಿ ತಮಿಳುನಾಡು ಅರಣ್ಯಕ್ಕೆ ವಾಪಸ್‌

Team Udayavani, May 5, 2019, 10:12 AM IST

kolar-tdy-4..

ಮಾಸ್ತಿ ಹೋಬಳಿಯ ಹಳೇಹಾರೋಮಾಕನಹಳ್ಳಿಯ ಕೆರೆಯಲ್ಲಿ ಬೀಡುಬಿಟ್ಟಿದ್ದ 6 ಕಾಡಾನೆಗಳನ್ನು ಸಿಬ್ಬಂದಿ ತಮಿಳುನಾಡು ಅರಣ್ಯಕ್ಕೆ ಓಡಿಸಿದರು.

ಮಾಸ್ತಿ: ಐದು ದಿನ ಮಾಲೂರು ತಾಲೂಕಿನಲ್ಲಿ ಬೀಡುಬಿಟ್ಟಿದ್ದ 6 ಕಾಡಾನೆಗಳನ್ನು ಕೊನೆಗೂ ಅರಣ್ಯ ಇಲಾಖೆ ಸಿಬ್ಬಂದಿ ಶುಕ್ರವಾರ ಸಂಜೆ ಕಾರ್ಯಾಚರಣೆ ನಡೆಸಿ, ತಮಿಳುನಾಡು ಅರಣ್ಯಕ್ಕೆ ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಾಲೂರು ತಾಲೂಕಿನ ಡಿ.ಎನ್‌.ದೊಡ್ಡಿ, ಬಂಟಹಳ್ಳಿ, ನಾಗಾಪುರ, ಮಾಲೂರು ಪಟ್ಟಣಕ್ಕೆ ಹೊಂದಿಕೊಂಡಿರುವ ಅರಳೇರಿ ಸೇರಿ ಹಲವು ಗ್ರಾಮಗಳ ಸುತ್ತಮುತ್ತ ಸಂಚರಿಸಿ, ಕೆಲವು ಪ್ರದೇಶಗಳಲ್ಲಿ ಬೀಡು ಬಿಡುತ್ತಿದ್ದ 6 ಆನೆಗಳ ಹಿಂಡು ಗುರುವಾರ ಟೇಕಲ್ ಹೋಬಳಿಯ ಬಲ್ಲಹಳ್ಳಿ ಗ್ರಾಮ ಸಮೀಪದ ನೀಲಗಿರಿ ತೋಪಿನಲ್ಲಿ ಕಾಣಿಸಿಕೊಂಡು ಜನರಲ್ಲಿ ಆತಂಕ ಸೃಷ್ಟಿಸಿದ್ದವು. ನಂತರ ಅಂದಿನ ರಾತ್ರಿ ಹುಳದೇನಹಳ್ಳಿ, ಮಾಸ್ತಿ ಹೋಬಳಿಯ ತೊಳಸನದೊಡ್ಡಿ ಸಮೀಪ ತೋಟಗಳ ಮೂಲಕ ಆಗಮಿಸಿ, ಶುಕ್ರವಾರ ಬೆಳಗ್ಗೆ ದಿನ್ನಹಳ್ಳಿ ಗ್ರಾಪಂ ವ್ಯಾಪ್ತಿಯ ಹಳೇಹಾರೋಮಾಕನಹಳ್ಳಿ ಸಮೀಪದ ಕೆರೆಯಲ್ಲಿ ಪ್ರತ್ಯಕ್ಷವಾಗಿದ್ದವು.

ಕಾರ್ಯಾಚರಣೆ: ಗಡಿ ಭಾಗ ಹಳೇಹಾರೋಮಾಕನಹಳ್ಳಿ ಕೆರೆಯಲ್ಲಿ ಬೀಡು ಬಿಟ್ಟಿದ್ದ ಕಾಡಾನೆಗಳನ್ನು ವೀಕ್ಷಿಸಲು ಜನ ತಂಡೋಪ ತಂಡವಾಗಿ ಆಗಮಿಸಿ ಅಲ್ಲಲ್ಲಿ ಗುಂಪಾಗಿ ನಿಂತು ಗಲಾಟೆ ಮಾಡುತ್ತಿದ್ದರು. ಇದರಿಂದ ಆನೆಗಳು ಕದಲದೇ ಕೆರೆಯಲ್ಲಿ ಸುತ್ತಾಡುತ್ತಾ ಸಂಜೆವರೆಗೂ ಬೀಡುಬಿಟ್ಟಿದ್ದವು. ಸಂಜೆಯಾಗುತ್ತಿದ್ದಂತೆ ಆನೆಗಳು ಮುಂದಕ್ಕೆ ತೆರಳಲು ಪ್ರಾರಂಭಿಸಿದಾಗ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಪಟಾಕಿ ಸಿಡಿಸುತ್ತಾ ಕಾರ್ಯಾಚರಣೆ ಆರಂಭಿಸಿದರು.

ಆನೆಗಳು ಮುಂದಕ್ಕೆ ಹೋಗುತ್ತಿದ್ದಂತೆ ಜನತೆಯೂ ಕೂಗಾಟ, ಕಿರುಚಾಟ, ಶಿಳ್ಳೆ ಹೊಡೆಯುತ್ತಾ ಆನೆಗಳನ್ನು ಹಿಂಬಾಲಿಸುತ್ತಿದ್ದರು. ಇದರಿಂದ ಗಾಬರಿಗೊಂಡ ಆನೆಗಳು ಮತ್ತಷ್ಟು ಜೋರಾಗಿ ಓಡಲು ಪ್ರಾರಂಭಿಸಿದವು. ನಂತರ ಕಾಂಚಾಳ, ದುಡವನಹಳ್ಳಿ ಕೆರೆ ಹಾಗೂ ಗಡಿಭಾಗದ ಅರಣ್ಯದ ಮೂಲಕ ತಮಿಳುನಾಡಿನ ಅರಣ್ಯ ಪ್ರದೇಶಕ್ಕೆ ಸೇರಿದವು.

ನಿಟ್ಟಿಸಿರು ಬಿಟ್ಟ ಅರಣ್ಯ ಸಿಬ್ಬಂದಿ: ಐದು ದಿನಗಳಿಂದ ಮಾಲೂರು ತಾಲೂಕಿನ ಹಲವು ಗ್ರಾಮಗಳ ಸಮೀಪ ಸಂಚರಿಸಿ ಜನರಲ್ಲಿ ಆತಂಕ ಸೃಷ್ಟಿ ಮಾಡಿದ್ದಲ್ಲದೆ, ಅರಣ್ಯ ಇಲಾಖೆ ಸಿಬ್ಬಂದಿಗೆ ತಲೆ ನೋವಾಗಿದ್ದವು. ಹಲವು ಗ್ರಾಮಗಳಲ್ಲಿ ಮಾವು, ತರಕಾರಿ, ಬಾಳೆ ಬೆಳೆಯನ್ನು ನಾಶ ಮಾಡಿದ್ದವು. ಶುಕ್ರವಾರ ರಾತ್ರಿ ವೇಳೆಗೆ ಹಳೇಹಾರೋಮಾಕನಹಳ್ಳಿ ಕೆರೆಯ ಮೂಲಕ ತಮಿಳುನಾಡು ಅರಣ್ಯ ಪ್ರದೇಶಕ್ಕೆ ಓಡಿಸುವಲ್ಲಿ ಯಶಸ್ವಿಯಾದ ಅರಣ್ಯ ಇಲಾಖೆ ಸಿಬ್ಬಂದಿ ನಿಟ್ಟುಸಿರುಬಿಟ್ಟಿದ್ದಾರೆ.

ಶಾಶ್ವತ ಪರಿಹಾರ ಕಲ್ಪಿಸಿ: ಮಾಸ್ತಿ ಹೋಬಳಿಯ ದಿನ್ನಹಳ್ಳಿ ಗ್ರಾಪಂ ವ್ಯಾಪ್ತಿಯ ಹಲವು ಗ್ರಾಮಗಳು ತಮಿಳುನಾಡು ಗಡಿಭಾಗಕ್ಕೆ ಹೊಂದಿಕೊಂಡಿವೆ. ಆಗಾಗ ಚಿರತೆ, ಮುಂತಾದ ಕಾಡು ಪ್ರಾಣಿಗಳು ಬರುತ್ತವೆ. ಬೇಸಿಗೆಯಲ್ಲಿ ಆಹಾರ ಸಿಗದೇ ಮತ್ತೆ ಕಾಡಾನೆಗಳು ಬರಬಹುದೆಂಬ ಆತಂಕ ಜನರನ್ನು ಕಾಡುತ್ತಿದೆ. ಹೀಗಾಗಿ ಶಾಶ್ವತ ಪರಿಹಾರ ಒದಗಿಸಿಕೊಡಬೇಕೆಂದು ರೈತರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.