‘ಸನ್ಯಾಸಿ’ಯಾದ ಶೈಲೇಶ ಉಪಾಧ್ಯಾಯ

ಪಲಿಮಾರು ಮಠದ ನಿಯೋಜಿತ ಉತ್ತರಾಧಿಕಾರಿಗೆ ಮಂತ್ರೋಪದೇಶ

Team Udayavani, May 11, 2019, 7:41 AM IST

15

ಕಲಶದ ಜಲವನ್ನು ಶ್ರೀವಿದ್ಯಾಧೀಶತೀರ್ಥರು ಶಿಷ್ಯನಿಗೆ ಅಭಿಷೇಕ ಮಾಡಿದರು.

ಉಡುಪಿ: ರವಿವಾರ ಶ್ರೀ ಪಲಿಮಾರು ಮಠದ ಉತ್ತರಾಧಿಕಾರಿಯಾಗಿ ನಿಯುಕ್ತಿಗೊಳ್ಳಲಿರುವ ವಟು ಶೈಲೇಶ ಉಪಾಧ್ಯಾಯ ಅವರು ಶುಕ್ರವಾರ ಪ್ರಾತಃಶುಭಕಾಲದಲ್ಲಿ ಸನ್ಯಾಸಾಶ್ರಮವನ್ನು ಸ್ವೀಕರಿಸಿದರು. ಗುರು ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಶಿಷ್ಯನಿಗೆ ಪ್ರಣವ ಮಂತ್ರೋಪದೇಶವನ್ನು ನೀಡಿದರು.

ಅಕ್ಷಯ ತೃತೀಯಾದ ಶುಭ ದಿನ ಆರಂಭವಾದ ಶಿಷ್ಯ ಸ್ವೀಕಾರ ಪ್ರಕ್ರಿಯೆಯ ಭಾಗವಾಗಿ ಗುರು ವಾರ ರಾತ್ರಿ ಶಾಕಲ ಮಂತ್ರದ ಹೋಮ ನಡೆಯಿತು. ಶಾಸ್ತ್ರದಂತೆ ಉಪವಾಸವಿದ್ದು ಜಾಗರಣೆ ಮಾಡಿದ ಶೈಲೇಶರು ಪ್ರಾತಃಕಾಲ ಸನ್ಯಾಸಾಶ್ರಮವನ್ನು ಸ್ವೀಕರಿಸಿದರು. ಇದಕ್ಕೆ ಪೂರ್ವಭಾವಿಯಾಗಿ ರಾತ್ರಿ ನಡೆದ ಹೋಮದ ಅಗ್ನಿಯನ್ನು ಉಳಿಸಿಕೊಂಡು ಶುಕ್ರವಾರ ಬೆಳಗ್ಗೆ ಸನ್ಯಾಸಾಶ್ರಮ ಸ್ವೀಕಾರಕ್ಕೆ ಅತ್ಯಗತ್ಯ ವಾದ ವಿರಜಾ ಹೋಮವನ್ನು ನಡೆಸ ಲಾಯಿತು. ಪುರುಷಸೂಕ್ತ ಹೋಮ ವನ್ನೂ ವೈದಿಕರು ನಡೆಸಿಕೊಟ್ಟರು. ಬಳಿಕ ಶೈಲೇಶರು ಮಧ್ವ ಸರೋವರಕ್ಕೆ ತೆರಳಿ ಸ್ನಾನಕ್ಕೆ ಮುನ್ನ ‘ಶೈಲೇಶ’ನನ್ನು ತ್ಯಜಿಸಿ ‘ಸನ್ಯಾಸಿ’ ಯಾಗುವುದರ ಸಂಕೇತವಾಗಿ ಧರಿಸಿದ ಬಟ್ಟೆ, ಜನಿವಾರಗಳನ್ನು ವಿಸರ್ಜನೆ ಮಾಡಿದರು. ಅನಂತರ ಕಾಷಾಯ ವಸ್ತ್ರ, ದಂಡಧಾರಿಯಾಗಿ ಮಧ್ವತೀರ್ಥದಲ್ಲಿ ಅವಗಾಹನಸ್ನಾನ ಮಾಡಿದರು. ಸರೋವರದ ದಂಡೆ ಯಲ್ಲಿ ಹೋಮದ ಸಂದರ್ಭ ಪೂಜಿಸಿದ ಪವಿತ್ರ ಕಲಶಜಲವನ್ನು ಅವರಿಗೆ ಅಭಿಷೇಕ ಮಾಡಲಾಯಿತು. ಹಿಡಿದ ದಂಡಕ್ಕೆ ಹೊಸ ಯಜ್ಞೋಪ ವೀತವನ್ನು ಪೋಣಿಸಲಾಯಿತು. ದಂಡ, ಕಮಂಡಲು, ಗೋಪೀಚಂದನದೊಂದಿಗೆ ಶೋಭಿಸುವ ನೂತನ ಯತಿ ಶ್ರೀಕೃಷ್ಣ ದೇವರ ದರ್ಶನ ಮಾಡಿ, ಸರ್ವಜ್ಞ ಪೀಠದಲ್ಲಿ ವಿರಾಜಮಾನರಾಗಿದ್ದ ಶ್ರೀ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ರಲ್ಲಿಗೆ ತೆರಳಿ ತಲೆಬಾಗಿ ತನಗೆ ಪ್ರಣವ ಮಂತ್ರೋಪದೇಶವನ್ನು ಅನುಗ್ರಹಿಸುವಂತೆ ಪ್ರಾರ್ಥಿಸಿದರು.

ಪ್ರಣವ ಮಂತ್ರೋಪದೇಶ
ಹೋಮ ಸಂದರ್ಭ ಪೂಜಿತ ಕಲಶದ ಸ್ವಲ್ಪ ಜಲವನ್ನು ನೂತನ ಯತಿಗೆ ಅಭಿಷೇಕ ಮಾಡಿದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ತಣ್ತೀಜ್ಞಾನ ಚಿಂತನೆಗಳನ್ನು ನಡೆಸಿ ಪ್ರಣವ ಮಂತ್ರೋಪದೇಶವನ್ನು ನೀಡಿದರು. ಶ್ರೀ ಪೇಜಾವರ ಮಠದ ಕಿರಿಯ ಯತಿ ಉಪಸ್ಥಿತರಿದ್ದು ನೂತನ ಯತಿಗೆ ಶುಭ ಕೋರಿದರು.

ಬಳಿಕ ಗುರುಗಳಾದ ಪಲಿಮಾರು ಶ್ರೀಗಳು ಶ್ರೀಕೃಷ್ಣನಿಗೆ ಮಹಾಪೂಜೆ ನಡೆಸಿದರೆ ಶಿಷ್ಯ ಜಪ, ಪಾರಾಯಣಾದಿಗಳ ಬಳಿಕ ಅನಂತೇಶ್ವರ, ಚಂದ್ರಮೌಳೀಶ್ವರ ದೇವಸ್ಥಾನಗಳಿಗೆ ತೆರಳಿ ದೇವರ ದರ್ಶನ ಮಾಡಿದರು. ತಿರುಮಲ ತಿರುಪತಿ ದೇವಸ್ಥಾನದಿಂದ ಅರ್ಚಕರು ತಂದ ಪ್ರಸಾದವನ್ನು ಯುವ ಯತಿಗೆ ನೀಡಲಾಯಿತು. ಧಾರ್ಮಿಕ ವಿಧಿಗಳನ್ನು ಗುಂಡಿಬೈಲು ಸುಬ್ರಹ್ಮಣ್ಯ ಭಟ್ ನಡೆಸಿಕೊಟ್ಟರು.

ಇಂದು ಅಷ್ಟಮಹಾ ಮಂತ್ರೋಪದೇಶ
ಶನಿವಾರ ಅಷ್ಟಮಹಾಮಂತ್ರಗಳ ಉಪದೇಶವನ್ನು ನೂತನ ಯತಿಗೆ ಗುರುಗಳು ನೀಡುವರು. ವಿವಿಧ ಹೋಮಗಳು ಕೂಡ ನಡೆಯಲಿವೆ.

ಹೆಸರು ಸೂಚನೆ, ನಾಳೆ ಘೋಷಣೆ
ಸನ್ಯಾಸ ಸ್ವೀಕಾರ ಪ್ರಕ್ರಿಯೆಯ ಅಂಗವಾಗಿರುವ ನೂತನ ನಾಮಧೇಯವನ್ನು ಶುಕ್ರವಾರವೇ ಗುರು ಶ್ರೀ ವಿದ್ಯಾಧೀಶತೀರ್ಥರು ಯುವ ಯತಿಗಳಿಗೆ ತಿಳಿಸಿದ್ದಾರೆ. ರವಿವಾರ ಅವರನ್ನು ವಿಧ್ಯುಕ್ತವಾಗಿ ಪಲಿಮಾರು ಮಠದ ಉತ್ತರಾಧಿಕಾರಿಯಾಗಿ ಸ್ವೀಕರಿಸುವ ಸಂದರ್ಭ ಅದನ್ನು ಬಹಿರಂಗಗೊಳಿಸುವರು.

ಟಾಪ್ ನ್ಯೂಸ್

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Manipal ಗಾಂಜಾ ಸೇವನೆ: ಇಬ್ಬರು ಪೊಲೀಸ್ ವಶಕ್ಕೆ

Manipal ಗಾಂಜಾ ಸೇವನೆ: ಇಬ್ಬರು ಪೊಲೀಸ್ ವಶಕ್ಕೆ

Missing Case ಶಿರ್ವ: ನಾಲ್ವರು ಮದ್ರಸಾ ವಿದ್ಯಾರ್ಥಿಗಳು ನಾಪತ್ತೆ

Missing Case ಶಿರ್ವ: ನಾಲ್ವರು ಮದ್ರಸಾ ವಿದ್ಯಾರ್ಥಿಗಳು ನಾಪತ್ತೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

Chikkaballapur: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದವ ಸಾವು

Chikkaballapur: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದವ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.