ಸುಕೋ ಬ್ಯಾಂಕ್‌ ನವೀಕೃತ ಶಾಖೆ ಉದ್ಘಾಟನೆ ನಾಳೆ

ಸಹಕಾರ ಕ್ಷೇತ್ರದಲ್ಲಿ ತಾಂತ್ರಿಕತೆ ಅಳವಡಿಸಿಕೊಂಡ ಪ್ರಥಮ ಬ್ಯಾಂಕ್‌ ನಮ್ಮದು: ಮೋಹಿತ್‌ ಮಸ್ಕಿ

Team Udayavani, May 12, 2019, 12:17 PM IST

11-March-15

ಚಳ್ಳಕೆರೆ: ಸುಕೋ ಬ್ಯಾಂಕ್‌ ಅಧ್ಯಕ್ಷ ಮೋಹಿತ್‌ ಮಸ್ಕಿ ಬ್ಯಾಂಕ್‌ನ ಚಳ್ಳಕೆರೆ ಶಾಖೆಯಲ್ಲಿ ಸುದ್ದಿಗೋಷ್ಠಿ ನಡೆಸಿದರು.

ಚಳ್ಳಕೆರೆ: 25 ವರ್ಷಗಳಿಂದ ಗ್ರಾಹಕರ ಸೇವೆಯಲ್ಲಿ ನಿರತರಾಗಿರುವ ಸುಕೋ ಬ್ಯಾಂಕ್‌ ಇದುವರೆಗೆ ಸುಮಾರು 1125 ಕೋಟಿ ರೂ.ಗಳ ವ್ಯವಹಾರ ನಡೆಸುವ ಮೂಲಕ ಸಹಕಾರಿ ಬ್ಯಾಂಕ್‌ಗಳ ಕ್ಷೇತ್ರದ ನಂ.1 ಬ್ಯಾಂಕ್‌ ಆಗಿದೆ ಎಂದು ಸುಕೋ ಬ್ಯಾಂಕ್‌ ಅಧ್ಯಕ್ಷ ಮೋಹಿತ್‌ ಮಸ್ಕಿ ತಿಳಿಸಿದರು.

ಬ್ಯಾಂಕ್‌ನ ಚಳ್ಳಕೆರೆ ಶಾಖೆಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಎರಡು ವರ್ಷಗಳ ಹಿಂದೆ ಚಳ್ಳಕೆರೆ ನಗರದಲ್ಲಿ ಪ್ರಾರಂಭವಾದ ಸುಕೋ ಬ್ಯಾಂಕ್‌ ಮೇ 13ರಿಂದ ನವೀಕೃತ ಕಟ್ಟಡಕ್ಕೆ ಸ್ಥಳಾಂತರವಾಗಲಿದೆ. ಬ್ಯಾಂಕ್‌ನ ಬೆಳ್ಳಿಹಬ್ಬದ ಹಿನ್ನೆಲೆಯಲ್ಲಿ ಸಂಗೀತ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಮೂಲಕ ಕಲಾವಿದರಿಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದರು.

ಬ್ಯಾಂಕ್‌ನ ನವೀಕೃತ ಶಾಖೆ ಹಾಗೂ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮವನ್ನು ಶಾಸಕ ಟಿ. ರಘುಮೂರ್ತಿ ಮೇ 13 ರಂದು ಸಂಜೆ 5:30ಕ್ಕೆ ಉದ್ಘಾಟಿಸುವರು. ಮುಖ್ಯ ಅತಿಥಿಯಾಗಿ ಜಿಲ್ಲಾ ಚೇಂಬರ್‌ ಆಫ್‌ ಕಾಮರ್ಸ್‌ ಅಧ್ಯಕ್ಷ ಎನ್‌. ಸತೀಶ್‌ ಭಾಗವಹಿಸುವರು. ಚಿತ್ರದುರ್ಗ ರಸ್ತೆಯ ನೂತನ ಕಟ್ಟಡದಲ್ಲಿ ಬ್ಯಾಂಕ್‌ನ ನವೀಕೃತ ಶಾಖೆ ಕಾರ್ಯಾರಂಭ ಮಾಡಲಿದೆ. ಜಗಜೀವನರಾಮ್‌ ಭವನದ ಆವರಣದಲ್ಲಿ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ನಡೆಯಲಿದ್ದು, ಸರಿಗಮಪ ಖ್ಯಾತಿಯ ಜ್ಞಾನೇಶ್‌ ಬಳ್ಳಾರಿ, ಭೂಮಿಕ ಹೊಸಪೇಟೆ ಹಾಗೂ ‘ಕನ್ನಡ ಕೋಗಿಲೆ’ ಕೊಪ್ಪಳದ ಅರ್ಜುನ ಇಟಗಿ ಸಂಗೀತ ಕಾರ್ಯಕ್ರಮ ನಡೆಸಿಕೊಡುವರು ಎಂದು ಹೇಳಿದರು.

ಸಹಕಾರಿ ಕ್ಷೇತ್ರದ ಬ್ಯಾಂಕ್‌ಗಳಲ್ಲಿ ಆಗ್ರಸ್ಥಾನ ಪಡೆದಿರುವ ಸುಕೋ ಬ್ಯಾಂಕ್‌ 1994, ಮೇ 3 ರಂದು ಸಿಂಧನೂರಿನಲ್ಲಿ ತನ್ನ ಪ್ರಥಮ ಶಾಖೆಯನ್ನು ಪ್ರಾರಂಭಿಸಿತು., ಪ್ರಸ್ತುತ ರಾಜ್ಯದಲ್ಲಿ 28 ಶಾಖೆಗಳನ್ನು ಹೊಂದಿದೆ. ಸಹಕಾರಿ ಕ್ಷೇತ್ರದಲ್ಲಿ ತಾಂತ್ರಿಕತೆಯನ್ನು ಅಳವಡಿಸಿಕೊಂಡ ಪ್ರಥಮ ಬ್ಯಾಂಕ್‌ ಆಗಿ ಸುಕೋ ಬ್ಯಾಂಕ್‌ ಹೊರಹೊಮ್ಮಿದೆ. 2016ರ ನವೆಂಬರ್‌ 6 ರಂದು ಬ್ಯಾಂಕ್‌ನ ಶಾಖೆಯನ್ನು ಚಳ್ಳಕೆರೆ ನಗರದಲ್ಲಿ ಪ್ರಾರಂಭಿಸಲಾಯಿತು. ಸುಕೋ ಬ್ಯಾಂಕ್‌ ಈಗಾಗಲೇ 40 ಕೋಟಿ ರೂ. ವ್ಯವಹಾರ ನಡೆಸಿದೆ ಎಂದರು.

ವ್ಯವಸ್ಥಾಪಕ ನಿರ್ದೇಶಕ ಪರಿಮಳ ಎಸ್‌. ಅಗ್ನಿಹೋತ್ರಿ ಮಾತನಾಡಿ, ಬ್ಯಾಂಕ್‌ ಸಂಸ್ಥಾಪಕ ಅಧ್ಯಕ್ಷ ಮನೋಹರ ಮಸ್ಕಿಯವರ ಮಾರ್ಗದರ್ಶನದಲ್ಲಿ ಬ್ಯಾಂಕ್‌ ಮುನ್ನಡೆ ಸಾಧಿಸುತ್ತಿದೆ. ಶೀಘ್ರದಲ್ಲೇ ಜೀವವಿಮಾ ನಿಗಮದ ವ್ಯವಹಾರವನ್ನು ನಮ್ಮ ಶಾಖೆ ಮೂಲಕವೇ ನಡೆಸಲಾಗುವುದು. ಡಿಜಿಟಲ್ ಬ್ಯಾಂಕಿಂಗ್‌ ಸೌಲಭ್ಯ ಕೂಡ ಇದ್ದು,ಗ್ರಾಹಕರ ಉತ್ತಮ ಸೇವೆಯೇ ನಮ್ಮ ಧೇಯವೆಂದರು.

ಸುದ್ದಿಗೋಷ್ಠಿಯಲ್ಲಿ ಮಾತೃಶ್ರೀ ಎನ್‌. ಮಂಜುನಾಥ, ರಾಮದಾಸ್‌, ಬೆಸ್ಕಾಂ ನಿವೃತ್ತ ಅಧಿಕಾರಿ ಪಿ. ರುದ್ರಮೂರ್ತಿ ಇದ್ದರು.

ವಾಣಿಜ್ಯೋದ್ಯಮ, ಕೃಷಿ, ಹೈನುಗಾರಿಕೆ ಮೊದಲಾದ ಯೋಜನೆಗಳಲ್ಲಿ ಗ್ರಾಹಕರಿಗೆ ಸಾಲ ನೀಡುವ ಮೂಲಕ ಗ್ರಾಹಕರ ನೆರವಿಗೆ ಧಾವಿಸಿದೆ. ಮುಂಬರುವ ದಿನಗಳಲ್ಲಿ ಸುಕೋ ಸೋಲಾರ್‌ ಶಕ್ತಿ ಯೋಜನೆಯನ್ನು ಅಳವಡಿಸಲು ಚಿಂತನೆ ನಡೆದಿದೆ.
•ಮೋಹಿತ್‌ ಮಸ್ಕಿ,
ಸುಕೋ ಬ್ಯಾಂಕ್‌ ಅಧ್ಯಕ್ಷರು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.