ಕ್ರೀಡಾಂಗಣ ಪುನಶ್ಚೇತನಕ್ಕೆ ಪ್ರಸ್ತಾವನೆ ಸಲ್ಲಿಸಿ

Team Udayavani, May 14, 2019, 2:24 PM IST

hav-4

ಹಾವೇರಿ: ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಆಯುಕ್ತ ಕೆ. ಶ್ರೀನಿವಾಸ ನೇತೃತ್ವದ ಅಧಿಕಾರಿಗಳ ತಂಡ ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ ನೀಡಿ ಒಳಾಂಗಣ ಕ್ರೀಡಾಂಗಣದಲ್ಲಿ ಕೈಗೊಂಡಿರುವ ಕಾಮಗಾರಿ, ಈಜುಕೊಳ ಹಾಗೂ ವಿವಿಧ ಕ್ರೀಡಾ ಅಂಕಣಗಳನ್ನು ಪರಿಶೀಲಿಸಿ ಪುನಶ್ಚೇತನಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು.

2010ನೇ ಸಾಲಿನಲ್ಲಿ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ನಿರ್ಮಿಸಲಾದ ಒಳಾಂಗಣ ಕ್ರೀಡಾಂಗಣ ಕಟ್ಟಡದ ದಕ್ಷಿಣ ಭಾಗದ ಗೋಡೆ ಮತ್ತು ಮೇಲ್ಛಾವಣಿ ಕುಸಿದುಬಿದ್ದಿದು,್ದ ಈ ಗೋಡೆಯ ಪುನರ್‌ ನಿರ್ಮಾಣ ಹಾಗೂ ಒಳಾಂಗಣ ಕ್ರೀಡಾಂಗಣದ ಶೆಟಲ್ ಬ್ಯಾಡ್ಮಿಂಟ್ ಕೋರ್ಟ್‌ಗಳ ಮರದ ನೆಲಹಾಸು ಹಾಗೂ ಟೈಲ್ಸ್, ಕುಳಿತುಕೊಳ್ಳಲು ಆಸನ ವ್ಯವಸ್ಥೆ ಹಾಗೂ ಈಜುಕೋಳದ ನವೀಕರಣ ಕಾಮಗಾರಿಯನ್ನು 71.62 ಲಕ್ಷ ರೂ.ಗಳಲ್ಲಿ ಕೈಗೊಂಡಿದ್ದು, ಈ ಕಾಮಗಾರಿಯ ಪರಿಶೀಲನೆ ನಡೆಸಿ ಅವರು ಅಗತ್ಯ ಸಲಹೆ ನೀಡಿದರು.

ಪುನರ್‌ ನಿರ್ಮಾಣಗೊಂಡಿರುವ ದಕ್ಷಿಣ ಭಾಗದ ಗೋಡೆಯ ತಾಂತ್ರಿಕ ಗುಣಮಟ್ಟದಿಂದ ನಿರ್ಮಾಣವಾಗಿರುವ ಕುರಿತಂತೆ ಮೂರನೇ ಸಂಸ್ಥೆಯಿಂದ ತಾಂತ್ರಿಕ ಪರೀಕ್ಷೆ ನಡೆಸಿ ವರದಿ ಸಲ್ಲಿಸಬೇಕು. ಪುನರ್‌ ನಿರ್ಮಾಣವಾಗಿರುವ ದಕ್ಷಿಣ ಗೋಡೆ ಹೊರತುಪಡಿಸಿ ಉಳಿದ ಮೂರು ಬದಿಯ ಗೋಡೆಗಳ ಗುಣಮಟ್ಟವನ್ನು ಸಹ ತಾಂತ್ರಿಕ ಸಮಿತಿಯಿಂದ ಪರಿಶೀಲಿಸಿ ವಿಸ್ತೃತ ಕ್ರಿಯಾಯೋಜನೆ ಅನುಸಾರ ತಾಂತ್ರಿಕ ಗುಣಮಟ್ಟದಿಂದ ಕಾಮಗಾರಿ ನಡೆದಿರುವ ಬಗ್ಗೆ ವರದಿ ಸಲ್ಲಿಸಲು ಸೂಚಿಸಿದರು.

ಗಾಳಿಯ ಒತ್ತಡದಿಂದ ಗೋಡೆ ಹಾಗೂ ಛಾವಣಿಗೆ ಯಾವುದೇ ಹಾನಿಯಾಗದಂತೆ ಕೈಗಾರಿಕಾ ಶೆಡ್‌ಗಳಿಗೆ ಫ್ಯಾನ್‌ಗಳನ್ನು ಅಳವಡಿಸುವ ರೀತಿಯಲ್ಲಿ ಇಲ್ಲಿಯೂ ಫ್ಯಾನ್‌ ಅಳವಡಿಸಲಾಗಿದೆ. ಸಾಗವಾನಿ ಮರದ ಕಟ್ಟಿಗೆಯಿಂದ ನೆಲಹಾಸು ಸಿದ್ಧಪಡಿಸಲು ಕ್ರಮವಹಿಸಲಾಗಿದೆ. ಈಗಾಗಲೇ ಪುನರ್‌ ನಿರ್ಮಾಣ ಮಾಡಿರುವ ಕಾಮಗಾರಿಯ ಗುಣಮಟ್ಟವನ್ನು ತಟಸ್ಥ ಮೂರನೇ ತಾಂತ್ರಿಕ ಸಂಸ್ಥೆಯಿಂದ ಪರಿಶೀಲನೆ ನಡೆಸಿ ಪ್ರಮಾಣಪತ್ರ ಪಡೆಯಲಾಗಿದೆ ಎಂದು ಅಧಿಕಾರಿಗಳು ವಿವರಿಸಿದರು. ಕ್ರೀಡಾಂಗಣದ ಹೊರವಲಯದ ಟೆನ್ನಿಸ್‌ ಕೋರ್ಟ್‌ ಹಾಗೂ ಸ್ಕೇಟಿಂಗ್‌ ಕೋರ್ಟ್‌ಗಳ ನವೀಕರಣ ಹಾಗೂ ಬಣ್ಣ ಬಳಿಸಲು ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು. ಸ್ನೂೕಕರ್‌ ಹಾಗೂ ಜಿಮ್‌ ವಿಭಾಗವನ್ನು ಆಧುನಿಕರಣಗೊಳಿಸಲು ಹಾಗೂ ವಿಸ್ತರಿಸಲು ಆಯುಕ್ತರು ಸಲಹೆ ನೀಡಿದರು.

ಕ್ರೀಡಾಂಗಣದ ಟ್ರ್ಯಾಕ್‌ನ್ನು ಪುನರ್‌ ನವೀಕರಿಸಬೇಕು. ಮುಖ್ಯ ದ್ವಾರದ ಒಳಬದಿಯಲ್ಲಿರುವ ಪ್ರೇಕ್ಷಕರ ಗ್ಯಾಲರಿಯ ಮೇಲ್ಛಾವಣಿ ಬದಲಾವಣೆ, ಧ್ವಜಾರೋಹಣ ಕಟ್ಟಡದ ಮರು ವಿನ್ಯಾಸ ಹಾಗೂ ನವೀಕರಣ, ಮುಖ್ಯ ಕಟ್ಟಡದ ಮೀಟಿಂಗ್‌ ಹಾಲ್ ನವೀಕರಣ, ಆಸನ ವ್ಯವಸ್ಥೆ, ಸುಣ್ಣ-ಬಣ್ಣಗೊಳಿಸಲು ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು.

ಇದೇ ಸಂದರ್ಭದಲ್ಲಿ ಕ್ರೀಡಾಂಗಣಕ್ಕೆ ಅಗತ್ಯವಾದ ಸೌಲಭ್ಯಗಳನ್ನು ಒದಗಿಸುವ ಕುರಿತಂತೆ ಹಾಗೂ ಹಾವೇರಿಯಲ್ಲಿ ಹಾಕಿ ಕ್ರೀಡಾಂಗಣಕ್ಕೆ ನಾಲ್ಕು ಎಕರೆ ಜಾಗೆಯನ್ನು ಕಾಯ್ದಿರಿಸಲಾಗಿದೆ. ನಿರ್ಮಾಣಕ್ಕೆ ಅಗತ್ಯ ಅನುದಾನ ಒದಗಿಸುವಂತೆ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಕ್ರೀಡಾ ಆಯುಕ್ತರಿಗೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ವಿವಿಧ ಕ್ರೀಡಾ ಸಂಘಟನೆಗಳ ಪ್ರತಿನಿಧಿಗಳು, ಕ್ರೀಡಾಂಗಣಕ್ಕೆ ವಿವಿಧ ಸೌಲಭ್ಯಗಳ ಒದಗಿಸುವ ಕುರಿತಂತೆ ಆಯುಕ್ತರಿಗೆ ಮೌಖೀಕವಾಗಿ ಮನವಿ ಮಾಡಿಕೊಂಡರು.

ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಜಂಟಿ ನಿರ್ದೇಶಕ ರಮೇಶ್‌, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಭಾವನಮೂರ್ತಿ, ಯುವಜನ ಸೇವಾ ಮತ್ತು ಕ್ರೀಡಾಧಿಕಾರಿ ಶಾಕೀರ್‌ ಅಹ್ಮದ್‌, ಕೆ.ಸಿ. ಕಾಂತರಾಜು ಇತರರು ಈ ಸಂದರ್ಭದಲ್ಲಿದ್ದರು.

ಟಾಪ್ ನ್ಯೂಸ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.