ನವೀನ್‌ ಸಜ್ಜು ಈಗ ಹೀರೋ

"ಕೆಮಿಸ್ಟ್ರಿ' ನಿರ್ದೇಶಕನ "ಚಾರ್ಲಿ ಚಾಪ್ಲಿನ್‌'

Team Udayavani, May 15, 2019, 3:00 AM IST

naveen-sajju

“ಚಾರ್ಲಿ ಚಾಪ್ಲಿನ್‌…’ ಚೇತೋಹಾರಿ ಹಾಸ್ಯಕ್ಕೆ ಮತ್ತೊಂದು ಹೆಸರೇ ಈ ಚಾರ್ಲಿ ಚಾಪ್ಲಿನ್‌. ಹೌದು, ಇಲ್ಲೇಕೆ ಚಾರ್ಲಿ ಚಾಪ್ಲಿನ್‌ ಹೆಸರು ಪ್ರಸ್ತಾಪ ಎಂಬ ಪ್ರಶ್ನೆ ಕಾಡಬಹುದು. ಅದಕ್ಕೆ ಉತ್ತರ ಮತ್ತದೇ “ಚಾರ್ಲಿ ಚಾಪ್ಲಿನ್‌’. ಅಂದರೆ, ಕನ್ನಡದಲ್ಲಿ ಸೆಟ್ಟೇರಲು ತಯಾರಾಗುತ್ತಿರುವ ಹೊಸ ಚಿತ್ರದ ಹೆಸರಿದು. ಅಂದಹಾಗೆ, ಈ ಚಿತ್ರವನ್ನು ಕುಮಾರ್‌ ನಿರ್ದೇಶನ ಮಾಡುತ್ತಿದ್ದಾರೆ.

ಯಾವ ಕುಮಾರ್‌ ಅಂದರೆ, “ಕೆಮಿಸ್ಟ್ರಿ ಆಫ್ ಕರಿಯಪ್ಪ’ ಚಿತ್ರ ತೋರಿಸಬೇಕು. ಆ ಚಿತ್ರ ಈಗ ಅರ್ಧ ಶತಕ ದಾಟಿ ಸಂಭ್ರಮದಲ್ಲಿರುವ ಬೆನ್ನಲ್ಲೇ ನಿರ್ದೇಶಕರು, “ಚಾರ್ಲಿ ಚಾಪ್ಲಿನ್‌’ ಹಿಂದೆ ಬಂದಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆ ಜವಾಬ್ದಾರಿಯೂ ಅವರದೇ. ಈ ಚಿತ್ರಕ್ಕೆ ನವೀನ್‌ ಸಜ್ಜು ಹೀರೋ. ಗಾಯಕ ಆಗಿದ್ದ ನವೀನ್‌ ಸಜ್ಜು ಸಂಗೀತ ನಿರ್ದೇಶಕರಾಗಿಯೂ ಗುರುತಿಸಿಕೊಂಡರು.

“ಬಿಗ್‌ಬಾಸ್‌’ ಮನೆಗೆ ಕಾಲಿಟ್ಟು ಬಂದ ಬಳಿಕ ಹೀರೋ ಆಗಿಯೂ ಅದೃಷ್ಟ ಒಲಿದು ಬಂದಿದೆ. ಗಾಯಕರಾಗಿ ಸೈ ಎನಿಸಿಕೊಂಡಿದ್ದ ಅವರು ತೆರೆಯ ಮೇಲೆ ಹೇಗೆ ಕಾಣುತ್ತಾರೆ ಎಂಬ ಕುತೂಹಲಕ್ಕೆ ಸಿನಿಮಾ ಬರುವವರೆಗೆ ಕಾಯಲೇಬೇಕು. ಇನ್ನು, ಇಲ್ಲೂ ಸಹ ಹಾಸ್ಯ ನಟ ತಬಲಾನಾಣಿ ಅವರು ಪ್ರಮುಖ ಆಕರ್ಷಣೆ.

“ಕೆಮಿಸ್ಟ್ರಿ ಆಫ್ ಕರಿಯಪ್ಪ’ ಚಿತ್ರದಲ್ಲಿ ಒಂದು ರೀತಿ ಹೀರೋ ಎಂದೇ ಕರೆಸಿಕೊಂಡಿದ್ದ ತಬಲಾನಾಣಿ, ಇಲ್ಲೂ ತಮ್ಮ ಎಂದಿನ ಹಾಸ್ಯ ಮಾತುಗಳ ಮೂಲಕ ಮೋಡಿ ಮಾಡುವ ಲಕ್ಷಣಗಳಿವೆ. ಉಳಿದಂತೆ ಚಿತ್ರದಲ್ಲಿ ಇನ್ನೂ ಎರಡು ಪ್ರಮುಖ ಪಾತ್ರಗಳಿದ್ದು, ಆ ಪಾತ್ರಕ್ಕೆ ಹುಡುಕಾಟ ನಡೆದಿದೆ. ಇಲ್ಲಿ ನಾಯಕಿಗೂ ಪ್ರಮುಖ ಜಾಗ ಕಲ್ಪಿಸಿರುವ ನಿರ್ದೇಶಕರು, ಆಕೆಗೆ ಹುಡುಕಾಟ ನಡೆಸಿದ್ದಾರೆ.

ಎಲ್ಲಾ ಸರಿ, “ಚಾರ್ಲಿ ಚಾಪ್ಲಿನ್‌’ ಹೆಸರೇ ಯಾಕೆ? ಈ ಪ್ರಶ್ನೆಗೆ ಉತ್ತರಿಸುವ ನಿರ್ದೇಶಕ ಕುಮಾರ್‌, ಇದೊಂದು ಹಾಸ್ಯಭರಿತ ಕಥೆ. ಆರಂಭದಿಂದ ಅಂತ್ಯದವರೆಗೂ ನಗಿಸುತ್ತಲೇ ಕಥೆ ಸಾಗಲಿದೆ. ನಗು ಅಂದಾಕ್ಷಣ, ನೆನಪಾಗೋದೇ ಚಾರ್ಲಿ ಚಾಪ್ಲಿನ್‌. ಹಾಗಾಗಿ ಕಥೆಗೆ ಪೂರಕವಾಗಿರುತ್ತೆ ಎಂಬ ಕಾರಣಕ್ಕೆ ಆ ಶೀರ್ಷಿಕೆ ಇಡಲಾಗಿದೆ. ಇದೊಂದು ಜರ್ನಿ ಕಥೆ.

ಬೆಂಗಳೂರಿನಿಂದ ಮಡಿಕೇರಿವರೆಗೆ ನಡೆಯುವ ಜರ್ನಿಯಲ್ಲಿ ಕಾಣುವ ದೃಶ್ಯಗಳು, ಪಾತ್ರಗಳು, ಮಾತುಗಳು ಎಲ್ಲವೂ ನಗು ತರಿಸುತ್ತಲೇ ಸಾಗುತ್ತವೆ . ಬೆಂಗಳೂರು, ಶ್ರವಣಬೆಳಗೊಳ, ಮಡಿಕೇರಿ ಸುತ್ತಮುತ್ತ ಸುಮಾರು 45 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ’ ಎಂದು ವಿವರ ಕೊಡುತ್ತಾರೆ ನಿರ್ದೇಶಕರು. ಚಿತ್ರಕ್ಕೆ ಶಿವಸೇನ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.