ರಮೇಶ್ ಜಾರಕಿಹೊಳಿ ಭೇಟಿ ಮಾಡಿದ ಯೋಗೇಶ್ವರ್
Team Udayavani, May 15, 2019, 3:04 AM IST
ಬೆಂಗಳೂರು: ಕಾಂಗ್ರೆಸ್ ನಾಯಕರೊಂದಿಗೆ ಮುನಿಸಿಕೊಂಡು ಶಾಸಕ ಸ್ಥಾನ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿರುವ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿಯನ್ನು ಬಿಜೆಪಿಯ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಮಂಗಳವಾರ ಸೆವೆನ್ ಮಿನಿಸ್ಟರ್ ಕ್ವಾಟರ್ನಲ್ಲಿರುವ ರಮೇಶ್ ಜಾರಕಿಹೊಳಿ ಅವರ ನಿವಾಸಕ್ಕೆ ಭೇಟಿ ನೀಡಿ ಮಧ್ಯಾಹ್ನ ಅವರ ಜತೆಯಲ್ಲಿಯೇ ಭೋಜನ ಸ್ವೀಕರಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅವರ ಭೇಟಿಯ ಬೆನ್ನಲ್ಲೇ ನೆಲಮಂಗಲದ ಮಾಜಿ ಶಾಸಕ ನಾಗರಾಜ್ ಕೂಡ ರಮೇಶ್ ಜಾರಕಿಹೊಳಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ರಮೇಶ್ ಜಾರಕಿಹೊಳಿ ಪಕ್ಷದ ನಾಯಕರ ಜತೆ ಮುನಿಸಿಕೊಂಡು ಬಂಡಾಯ ಸಾರಿ ಮುಂಬೈನಲ್ಲಿ ವಾಸ್ತವ್ಯ ಹೂಡಿದ್ದ ಸಂದರ್ಭದಲ್ಲಿ ಸಿ.ಪಿ ಯೋಗೇಶ್ವರ್ ಮತ್ತು ನಾಗರಾಜ್ಗೆ ಬಂಡಾಯ ಶಾಸಕರ ನೋಡಿಕೊಳ್ಳುವ ಜವಾಬ್ದಾರಿ ವಹಿಸಲಾಗಿತ್ತು.
ಅದೇ ಕಾರಣಕ್ಕೆ ಈಗ ಮತ್ತೆ ಇಬ್ಬರೂ ಮಾಜಿ ಶಾಸಕರು ರಮೇಶ್ ಜಾರಕಿಹೊಳಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಸೋಮವಾರ ಮಧ್ಯಾಹ್ನವೇ ಬೆಂಗಳೂರಿಗೆ ಆಗಮಿಸಿದ್ದ ರಮೇಶ್ ಜಾರಕಿಹೊಳಿ ಯಾರ ಭೇಟಿಗೂ ಅವಕಾಶ ನೀಡದೇ ಮನೆಯಲ್ಲಿಯೇ ಉಳಿದುಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್