ಉಪ್ಪಿನಂಗಡಿ: ನಾಡಕಚೇರಿಗೆ ಕೂಡಿಬಾರದ ಕಟ್ಟಡ ಭಾಗ್ಯ!

ಮೂರು ತಿಂಗಳು ಕಳೆದರೂ ಸ್ವಂತ ಕಟ್ಟಡ ನಿರ್ಮಾಣಕ್ಕೆ ತಯಾರಿ ನಡೆದಿಲ್ಲ

Team Udayavani, May 15, 2019, 4:02 PM IST

15-May-23

ಪಾಳು ಬಿದ್ದಿರುವ ಉಪ್ಪಿನಂಗಡಿಯ ಹಳೆಯ ನಾಡಕಚೇರಿಯ ಕಟ್ಟಡ.

ಉಪ್ಪಿನಂಗಡಿ: ಹೋಬಳಿ ಮಟ್ಟದ ನಾಡಕಚೇರಿ ಕಟ್ಟಡ ಸ್ಥಳಾಂತರ ಗೊಂಡರೂ ಸ್ವಂತ ಕಟ್ಟಡ ನಿರ್ಮಾಣಕ್ಕೆ ಇನ್ನೂ ಕಾಲ ಕೂಡಿ ಬಾರದೆ ಪಾಳು ಬಿದ್ದುಕೊಂಡಿದೆ.

ಕಂದಾಯ ಇಲಾಖೆಗೆ ಸೇರಿದ ಕಟ್ಟಡ ಹಲವು ವರ್ಷಗಳಿಂದ ಅಪಾಯದಲ್ಲಿದ್ದು, ಕರ್ತವ್ಯ ನಿಭಾಯಿಸಲು ಕಷ್ಟ ಎಂಬುದನ್ನು ಮನಗಂಡ ಜಿಲ್ಲಾಧಿಕಾರಿಗಳು ಬದಲಿ ಸರಕಾರಿ ಕಟ್ಟಡಕ್ಕೆ ತಾತ್ಕಾಲಿಕವಾಗಿ ಸ್ಥಳಾಂತರಿಸುವಂತೆ ಆದೇಶಿಸಿದ್ದರು. ಅದರಂತೆ ಪುತ್ತೂರು ಸಹಾಯಕ ಆಯುಕ್ತರು ಉಪ್ಪಿನಂಗಡಿ ನೂತನ ಪಂಚಾಯತ್‌ ಕಟ್ಟಡದಲ್ಲಿ ಸ್ಥಳಾವಕಾಶ ಕೋರಿ ಮನವಿ ಸಲ್ಲಿಸಿದ್ದರು.

ಮನವಿಗೆ ಸ್ಪಂದಿಸಿದ ಪಂಚಾಯತ್‌ ಆಡಳಿತ ಸ್ಥಳಾವಕಾಶಕ್ಕೆ ಸರ್ವ ಸದಸ್ಯರ ಒಪ್ಪಿಗೆಯಂತೆ ಸಮ್ಮತಿ ಸೂಚಿಸಿದ ಮೇರೆಗೆ ನಾಡಕಚೇರಿಗೆ ಅವಕಾಶ ಕೊಟ್ಟಿತ್ತು. ಅದಾಗಿ ಮೂರು ತಿಂಗಳು ಕಳೆದರೂ ಇನ್ನೂ ನಾಡಕಚೇರಿ ನೂತನ ಸ್ವಂತ ಕಟ್ಟಡ ನಿರ್ಮಾಣಕ್ಕೆ ಯಾವುದೇ ತಯಾರಿ ನಡೆದಿಲ್ಲ.

ಕಟ್ಟಡ ರಚನೆ ಮಂಜೂರಾತಿ ದೊರಕಿದ ಕುರಿತು ಯಾವುದೇ ಮಾಹಿತಿ ಈತನಕ ಇಲ್ಲ. ಅಧಿಕಾರಿಗಳು ಪಂಚಾಯತ್‌ ಕಟ್ಟಡ ಸ್ಥಳಾಂತರಕ್ಕೆ ಮುನ್ನ ಶೀಘ್ರವೇ ಸರಕಾರದ ಬಜೆಟ್‌ನಲ್ಲಿ 10 ಲಕ್ಷ ರೂ. ಕ್ರೋಡೀಕರಿಸಿ ತತ್‌ಕ್ಷಣವೇ ಕಾಮಗಾರಿ ಆರಂಭಿಸಿ ಸುಸಜ್ಜಿತ ಕಟ್ಟಡ ನಿರ್ಮಿಸುವ ಕುರಿತು ಮಾತುಕತೆ ನಡೆದಿತ್ತು.

ಪ್ರಕ್ರಿಯೆ ಆರಂಭಿಸಿಲ್ಲ
ನಾಡಕಚೇರಿ ಸ್ಥಳಾಂತರಗೊಂಡು ಮೂರು ತಿಂಗಳು ಕಳೆದರೂ ಯಾವುದೇ ಪ್ರಕ್ರಿಯೆ ಆರಂಭಿಸಿಲ್ಲ. ಈ ಮಳೆಗಾಲದಲ್ಲಿ ಹಳೆಯ ಕಟ್ಟಡ ಮುರಿದು ಬೀಳುವ ಅಪಾಯವಿದೆ. ಪುತ್ತೂರು ತಾಲೂಕಿನ ಬಜತ್ತೂರು, 34ನೇ ನೆಕ್ಕಿಲಾಡಿ, ಉಪ್ಪಿನಂಗಡಿ, ಬನ್ನೂರು, ಕೋಡಿಂಬಾಡಿ, ಬೆಳ್ಳಿಪ್ಪಾಡಿ ಸಹಿತ 13 ಗ್ರಾಮ ವ್ಯಾಪ್ತಿ ಹೊಂದಿದೆ. ಮಳೆಗಾಲ ಆರಂಭವಾದರೆ ಈ ಕಟ್ಟಡದ ಪಕ್ಕ ನಡೆದಾಡುವುದೂ ಅಪಾಯಕಾರಿ ಎಂದು ಸ್ಥಳೀಯರು ಹೇಳುತ್ತಿದ್ದಾರೆ.

ಪ್ರಸ್ತಾವನೆ ಸಲ್ಲಿಸಲಾಗಿದೆ
ಉಪ್ಪಿನಂಗಡಿ ನಾಡ ಕಚೇರಿಯ ನಿವೇಶನದಲ್ಲಿ ಕಟ್ಟಡವು ಅಪಾಯದ ಸ್ಥಿತಿಯಲ್ಲಿದ್ದು, ಈಗಾಗಲೇ ಪಂಚಾಯತ್‌ ಕಟ್ಟಡಕ್ಕೆ ಸ್ಥಳಾಂತರಗೊಂಡಿದೆ. ಆದರೆ, ಹಳೆಯ ಕಟ್ಟಡವನ್ನು ಕೆಡವಿ ನೂತನ ಕಟ್ಟಡ ರಚನೆಗಾಗಿ 25 ಲಕ್ಷ ರೂ.ಗಳ ಪ್ರಸ್ತಾವನೆಯನ್ನು ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಗಿದೆ. ಮಂಜೂರಾತಿ ದೊರಕಿದ ತತ್‌ಕ್ಷಣವೇ ಸ್ವಂತ ಕಟ್ಟಡ ರಚನೆಯಾಗಲಿದೆ.
ಡಾ| ಪ್ರದೀಪ್‌ ಕುಮಾರ್‌,
ಪುತ್ತೂರು ತಾಲೂಕು ದಂಡಾಧಿಕಾರಿ.

‘ಅಧಿಕಾರಿಗಳು ಸ್ಪಂದಿಸಿಲ್ಲ’
ನಾಡಕಚೇರಿ ಪಂಚಾಯತ್‌ ಕಟ್ಟಡಕ್ಕೆ ಸ್ಥಳಾಂತರ ಆಗುವ ಮುನ್ನವೇ ಪಂಚಾಯತ್‌ ಅಧ್ಯಕ್ಷ ಅಬ್ದುಲ್ ರಹಿಮಾನ್‌ ಅವರು, ನೂತನ ಕಟ್ಟಡ ರಚನೆಗೆ ಸರಕಾರದಿಂದ ಮಂಜೂರಾತಿ ಪಡೆಯುವುದು ಕಷ್ಟಸಾಧ್ಯವಾದಲ್ಲಿ, ನೆಲ ಅಂತಸ್ತಿನಲ್ಲಿ ಗ್ರಾ.ಪಂ. ವಾಣಿಜ್ಯ ಕಟ್ಟಡ ರಚನೆಗೆ ಅವಕಾಶ ನೀಡುವುದಾದಲ್ಲಿ 2‌ನೇ ಮಹಡಿಯಲ್ಲಿ ನಾಡಕಚೇರಿ ಕಟ್ಟಡ ನಿರ್ಮಿಸಿಕೊಡುವುದಾಗಿ ತಿಳಿಸಿದ್ದರು. ಆದರೂ ಕಂದಾಯ ಇಲಾಖೆ ಅಧಿಕಾರಿಗಳು ಸ್ಪಂದಿಸಿಲ್ಲ. ಹೀಗಾಗಿ, ಪಂಚಾಯತ್‌ ಆಡಳಿತ ಸಾರ್ವಜನಿಕ ಸೇವೆಯಡಿ ನಾಡಕಚೇರಿಗೆ ತಾತ್ಕಾಲಿಕ ಅವಕಾಶ ಕಲ್ಪಿಸಿತ್ತು. ತತ್‌ಕ್ಷಣವೇ ಅವರು ಸ್ವಂತ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡದಿದ್ದಲ್ಲಿ ಪಂಚಾಯತ್‌ ಸರ್ವಸದಸ್ಯರ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ವಿಶೇಷ ವರದಿ

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.