ಬೆಂಬಲ ಬೆಲೆಗೆ ಕಡೆಲೆಕಾಳು ಖರೀದಿ: ರಾಮಚಂದ್ರನ್‌

ಐದು ಖರೀದಿ ಕೇಂದ್ರ ಆರಂಭ ಗರಿಷ್ಠ 10 ಕ್ವಿಂಟಲ್ ಖರೀದಿಗೆ ಅವಕಾಶ

Team Udayavani, May 17, 2019, 12:37 PM IST

bagalkote tdy 2

ಬಾಗಲಕೋಟೆ: ನಗರದಲ್ಲಿ ನಡೆದ ಜಿಲ್ಲಾ ಟಾಸ್ಕ್ಪೋರ್ಸ್‌ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಆರ್‌. ರಾಮಚಂದ್ರನ್‌ ಮಾತನಾಡಿದರು.

ಬಾಗಲಕೋಟೆ: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಕಡಲೆಕಾಳು ಪ್ರತಿ ಕ್ವಿಂಟಲ್ಗೆ 4650 ರೂ. ಗಳಂತೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ಶಾಖೆಯಿಂದ ಎಕರೆಗೆ 3 ಕ್ವಿಂಟಲ್ನಂತೆ ಗರಿಷ್ಠ 10 ಕ್ವಿಂಟಲ್ ಖರೀದಿಸುತ್ತಿದ್ದು, ನೋಂದಣಿಗೆ ಮೇ 28 ಕೊನೆ ದಿನವಾಗಿದೆ ಎಂದು ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌ ತಿಳಿಸಿದರು.

ಜಿಲ್ಲಾಕಾರಿಗಳ ಸಭಾಂಗಣದಲ್ಲಿ ಈಚೆಗೆ ನಡೆದ ಜರುಗಿದ ಜಿಲ್ಲಾ ಟಾಸ್ಕ್ಪೋರ್ಸ್‌ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಬಾಗಲಕೋಟೆ ಎಪಿಎಂಸಿ ಪ್ರಾಂಗಣ, ಹುನಗುಂದ ಎಪಿಎಂಸಿ ಆವರಣ, ಸೂಳೇಬಾವಿ ಎಫ್‌ಪಿಒ ಆವರಣ, ಸಾವಳಗಿ ಪಿಕೆಪಿಎಸ್‌ ಆವರಣ ಹಾಗೂ ತೊದಲಬಾಗಿ ಎಫ್‌ಎಚ್ಸಿಎಲ್ ಆವರಣದಲ್ಲಿ ತೊಗರಿಕಾಳು ಖರೀದಿಗೆ ರೈತರಿಂದ ನೋಂದಣಿ ಮಾಡಿಕೊಳ್ಳಲಾಗುತ್ತಿದೆ ಎಂದರು.

ಕಡಳೆಕಾಳು ಖರೀದಿಗೆ ಮೇ 28 ಕೊನೆ ದಿನ. ರೈತರು ನೋಂದಣಿ ಸಮಯದಲ್ಲಿ ಕಂದಾಯ ಇಲಾಖೆಯಿಂದ ಪಹಣಿ ಪತ್ರ, ಆಧಾರ ಕಾರ್ಡ, ಬ್ಯಾಂಕ್‌ ಪಾಸ್‌ಬುಕ್‌ ಝರಾಕ್ಸ ಪ್ರತಿ, ಬೆಳೆ ಪ್ರಮಾಣ ಪತ್ರ ಹಾಗೂ ಮೊಬೈಲ್ ನಂಬರ ದಾಖಲೆಗಳನ್ನು ತಪ್ಪದೇ ತರಬೇಕು. ಜೂ.7 ವರೆಗೆ ಕಡಲೆಕಾಳು ಖರೀದಿ ಮಾಡಲಾಗುತ್ತಿದೆ.

ಖರೀದಿ ಪ್ರಕ್ರಿಯೆ ಬೆಳಗ್ಗೆ 8 ರಿಂದ ಸಂಜೆ 6ಗಂಟೆವರೆಗೆ ನಡೆಯಲಿದ್ದು, ಕಡಲೆಕಾಳನ್ನು ಚೆನ್ನಾಗಿ ಒಣಗಿಸಿ ತರಬೇಕು. ಖಂಡಕಾಳು, ಕ್ರಿಮಿಕೀಟಗಳಿಂದ ಕೂಡಿರಬಾರದು. ಕಸಕಡ್ಡಿಗಳನ್ನು ಸಾಣಿಗೆಯಿಂದ ಸ್ವಚ್ಛಗೊಳಿಸಿ ಎಫ್‌ಎಕ್ಯೂ ಗುಣಮಟ್ಟದ ಕಡಲೆಕಾಳನ್ನು ಮಾತ್ರ ಖರೀದಿ ಮಾಡಲಾಗುತ್ತಿದೆ. ಖರೀದಿ ಕೇಂದ್ರದಲ್ಲಿ ಹುಟ್ಟುವಳಿಯ ಹಸ್ತಾಂತರವನ್ನು ಸಾಗಾಣಿಕೆ ಗುತ್ತಿಗೆದಾರರು ನಿರ್ವಹಿಸುವುದು, ತೂಕದಲ್ಲಿ ಅನಧಿಕೃತವಾಗಿ ಹಮಾಲರ ಫೀ, ತೂಕದ ಫೀ, ಸೂಟು, ಕಾಳು ಕೊಡುವುದು ಮತ್ತು ಪಡೆಯುವುದು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ರೈತರಿಂದ ಹಮಾಲರಾಗಲಿ ಖರೀದಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಗಳಾಗಲಿ ಅನಧಿಕೃತ ಹಣ ಪಡೆದಲ್ಲಿ ಅಂಥವರ ವಿರುದ್ಧ ಕ್ರಮ ಜರುಗಿಸಲಾಗುತ್ತದೆ. ಇಂತಹ ದೂರುಗಳು ಬಂದಲ್ಲಿ ಸಮಿತಿ ಕಾರ್ಯದರ್ಶಿಯವರಿಗೆ ದೂರು ಸಲ್ಲಿಸಲಾಗುವುದು ಎಂದರು. ಯಾವುದೇ ಸಂದರ್ಭದಲ್ಲಿ ರೈತರು ಮಧ್ಯವರ್ತಿಗಳ ಮೊರೆ ಹೋಗಬಾರದು. ಇದರ ಉಪಯೋಗವನ್ನು ರೈತರೇ ನೇರವಾಗಿ ಪಡೆಯಬೇಕು. ಸಮಸ್ಯೆಗಳಿದ್ದಲ್ಲಿ ಉಪವಿಭಾಗಾಧಿಕಾರಿಗಳು, ತಹಶೀಲ್ದಾರ್‌ರು ಹಾಗೂ ಕೃಷಿ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಆಯಾ ಎಪಿಎಂಸಿ ಕಚೇರಿಗಳಲ್ಲಿ ಮಾರ್ಕಫೆಡ್‌ ಅಧಿಕಾರಿಗಳ ಮೊಬೈಲ್ ನಂಬರಿಗೆ ಕರೆ ಮಾಡಬಹುದು ಎಂದರು.

ಎಫ್‌ಎಕ್ಯೂ ಗುಣಮಟ್ಟದ ಕಡಲೆ ಕಾಳು ಉತ್ಪನ್ನ್ನ ಪರೀಕ್ಷಿಸಲು ಅನುಭವಿ ಗ್ರೇಡರ್‌ಗಳನ್ನು ಕೃಷಿ ಇಲಾಖೆಯಿಂದ ನೇಮಿಸಿಕೊಳ್ಳಬೇಕು. ಖರೀದಿಸಿದ ಕಡಲೆಕಾಳನ್ನು ದಾಸ್ತಾನು ಮಾಡಲು ಅಗತ್ಯ ಗೋದಾಮುಗಳ ವ್ಯವಸ್ಥೆ ಇರುವುದಾಗಿ ರಾಜ್ಯ ಉಗ್ರಾಣ ನಿಗಮದ ವ್ಯವಸ್ಥಾಪಕರು ತಿಳಿಸಿದರು. ಖರೀದಿ ಕೇಂದ್ರಗಳಲ್ಲಿ ರೈತರ ಹೆಸರಿನಲ್ಲಿ ವರ್ತಕರು ತರುವ ಕಡಲೆಕಾಳು ಖರೀದಿಸದಂತೆ ಹಾಗೂ ಖರೀದಿ ಕೇಂದ್ರಗಳಲ್ಲಿ ಯಾವುದೇ ರೀತಿಯ ದುರುಪಯೋಗವಾಗದಂತೆ ಕ್ರಮ ವಹಿಸಲು ಪ್ರತಿ ತಾಲೂಕಿಗೆ ಒಬ್ಬರಂತೆ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಅಲ್ಲದೇ ಖರೀದಿಸಿದ ಕಡಲೆಕಾಳು ಉತ್ಪನ್ನ ಕುರಿತು ಹಣ ಸಂದಾಯವನ್ನು ಸಂಬಂಧಿಸಿದ ರೈತರಿಗೆ 15 ದಿನಗಳೊಳಗಾಗಿ ಆರ್‌ಟಿಜಿ ಎಸ್‌ ಮೂಲಕ ಅವರ ಖಾತೆಗಳಿಗೆ ಜಮಾ ಮಾಡಲಾಗುತ್ತದೆ ಎಂದು ತಿಳಿಸಿದರು.

ಜಿಪಂ ಸಿಇಒ ಗಂಗೂಬಾಯಿ ಮಾನಕರ, ಆಹಾರ ಇಲಾಖೆಯ ಉಪ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಸಹಕಾರ ಇಲಾಖೆಯ ಉಪನಿಬಂಧಕ ಪಿ.ಎನ್‌. ಕಳಸನ್ನವರ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರಾಜಶೇಖರ ವಿಜಾಪುರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.