ಸಿಎಂ ಸ್ಥಾನ ತಪ್ಪಿಸಿದ್ದು ಯಾರು ಎಂದು ಸಿದ್ದುವನ್ನೇ ಕೇಳಿ
Team Udayavani, May 18, 2019, 3:00 AM IST
ಬೆಂಗಳೂರು: ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮುಖ್ಯಮಂತ್ರಿ ಹುದ್ದೆ ಯಾಕೆ ತಪ್ಪಿಸಲಾಯಿತು ಎನ್ನುವ ಪ್ರಶ್ನೆಯನ್ನು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನೇ ಕೇಳಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಹೇಳಿದ್ದಾರೆ.
ಆ ಮೂಲಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮುಖ್ಯಮಂತ್ರಿ ಸ್ಥಾನ ತಪ್ಪಿದ ಬಗ್ಗೆ ತಣ್ಣಗಾಗಿದ್ದ ವಿಚಾರವನ್ನು ವಿಶ್ವನಾಥ್ ಮತ್ತೆ ಕೆದಕಿದ್ದಾರೆ. ಜತೆಗೆ ಸಿದ್ದರಾಮಯ್ಯ ಅವರಿಗೂ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, ಖರ್ಗೆ ಅವರಿಗೆ ಸಿಎಂ ಸ್ಥಾನ ತಪ್ಪಿಸಿದ್ದು ಯಾರು ಎಂಬುದು ಸಿದ್ದರಾಮಯ್ಯ ಅವರಿಗೇ ಗೊತ್ತಿದೆ. ಅವರನ್ನೇ ಕೇಳಿ ಎಂದರು.
2013ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ಕಾಂಗ್ರೆಸ್ನಲ್ಲೇ ಇದ್ದ ವಿಶ್ವನಾಥ, ಮುಖ್ಯಮಂತ್ರಿ ಗಾದಿಗಾಗಿ ನಡೆದಿದ್ದ ಕಸರತ್ತುಗಳಿಗೆ ನೇರ ಸಾಕ್ಷಿಯಾಗಿದ್ದರು. ಹೀಗಾಗಿ, ಅವರ ಹೇಳಿಕೆ ಕುತೂಹಲ ಮೂಡಿಸಿದೆ. ಜೆಡಿಎಸ್ನಲ್ಲಿ ಎಚ್.ಡಿ.ರೇವಣ್ಣ ಸೇರಿ ಹಲವರಿಗೆ ಮುಖ್ಯಮಂತ್ರಿ ಆಗುವ ಅರ್ಹತೆ ಇದೆ ಎಂಬ ಸಿದ್ದರಾಮಯ್ಯ ಅವರ ಟ್ವೀಟ್ ಕುರಿತು ಕೇಳಿದಾಗ, ಅದನ್ನು ನನ್ನನ್ನು ಯಾಕೆ ಕೇಳುತ್ತೀರಿ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ