ಕುಂದಗೋಳಕ್ಕೆ ಸಿದ್ದು ಕೊಡುಗೆ ಏನು?

Team Udayavani, May 18, 2019, 9:57 AM IST

hubali-tdy-2…

ಹುಬ್ಬಳ್ಳಿ: ಬಿಜೆಪಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿರುವ ಸಿದ್ದರಾಮಯ್ಯ ತಾವು 5 ವರ್ಷ ಸಿಎಂ ಆಗಿದ್ದಾಗ ಕುಂದಗೋಳ ಕ್ಷೇತ್ರಕ್ಕೆ ಯಾವ ಕೊಡುಗೆ ನೀಡಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಲಿ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಸವಾಲೆಸೆದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಸಿದ್ದರಾಮಯ್ಯ ಅಧಿಕಾರಾವಧಿಯಲ್ಲಿ ಈ ಭಾಗಕ್ಕೆ ಯಾವುದೇ ಕೊಡುಗೆ ನೀಡಿಲ್ಲ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ 250 ಕೋಟಿ ರೂ. ವೆಚ್ಚದಲ್ಲಿ ಕುಂದಗೋಳ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಹುಬ್ಬಳ್ಳಿ-ಲಕ್ಷ್ಮೇಶ್ವರ ರಸ್ತೆ ಅಭಿವೃದ್ಧಿಪಡಿಸಲಾಗಿದೆ. 30 ಗ್ರಾಪಂ ನೂತನ ಕಟ್ಟಡ ನಿರ್ಮಿಸಲಾಗಿದೆ. ಕಿರೇಸೂರ ಬಳಿ ಕೆರೆ ನಿರ್ಮಿಸಿ ಮಲಪ್ರಭಾ ನದಿ ನೀರನ್ನು ತುಂಬಿಸಿ ಕುಂದಗೋಳ ತಾಲೂಕಿನ 19 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸಲಾಗುತ್ತಿದೆ. ಸುವರ್ಣಗ್ರಾಮ ಯೋಜನೆಗೆ 2 ಕೋಟಿ ರೂ. ನೀಡಲಾಗಿದೆ. ಗ್ರಾಮಗಳ ರಸ್ತೆಗಾಗಿ ನಮ್ಮ ಗ್ರಾಮ-ನಮ್ಮ ರಸ್ತೆ ಯೋಜನೆಗೆ ಚಾಲನೆ ನೀಡಿ ರಸ್ತೆ ನಿರ್ಮಿಸಲಾಗಿದೆ. ಕ್ಷೇತ್ರಕ್ಕೆ ಯಾವುದೇ ಕೊಡುಗೆ ನೀಡದ ಕಾಂಗ್ರೆಸ್‌ ಮುಖಂಡರು ಈಗ ಕ್ಷೇತ್ರದ ಅಭಿವೃದ್ಧಿ ಬಗ್ಗೆ, ಕ್ಷೇತ್ರ ದತ್ತು ಪಡೆಯುವ ಬಗ್ಗೆ ಮಾತನಾಡುತ್ತಿರುವುದನ್ನು ಕ್ಷೇತ್ರದ ಜನರು ನಂಬುವುದಿಲ್ಲ. ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ನಡೆಸಿ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದನ್ನು ತಿಳಿಸಲಿ ಎಂದರು.

ಕುಂದಗೋಳದಲ್ಲಿ 15 ದಿನಗಳಿಗೊಮ್ಮೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಮಲಪ್ರಭಾ ನೀರನ್ನು ಕುಂದಗೋಳಕ್ಕೂ ಪೂರೈಸಲಾಗುತ್ತಿದೆ. ಹುಬ್ಬಳ್ಳಿ-ಧಾರವಾಡಕ್ಕೆ ಪ್ರತಿ ದಿನ 200 ಎಂಎಲ್ಡಿ ನೀರು ಬೇಕು. ಆದರೆ 160 ಎಂಎಲ್ಡಿ ನೀರು ಮಾತ್ರ ಪೂರೈಕೆಯಾಗುತ್ತಿದೆ. ಇದರಿಂದ ನೀರಿನ ಸಮಸ್ಯೆ ಉಂಟಾಗಿದೆ. ನೀರಿನ ಪೂರೈಕೆ ಪ್ರಮಾಣ ಹೆಚ್ಚಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಸಿದ್ದರಾಮಯ್ಯ ಸರಕಾರ ಕ್ರಮ ಕೈಗೊಳ್ಳಲಿಲ್ಲ. ಇದಕ್ಕಾಗಿ 26 ಕೋಟಿ ರೂ. ಬಿಡುಗಡೆ ಮಾಡಲು ಹಿಂದೇಟು ಹಾಕಿತು ಎಂದು ದೂರಿದರು.

ಸಿದ್ದು ಆಜನ್ಮ ದ್ವೇಷಿ: ಹಾವಿನ ದ್ವೇಷ 12 ವರ್ಷ. ಆದರೆ ಸಿದ್ದರಾಮಯ್ಯ ದ್ವೇಷ ಅವರು ಜೀವಂತವಾಗಿರುವ ವರೆಗೆ. ಸಿದ್ದರಾಮಯ್ಯ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಮೈತ್ರಿ ಸರಕಾರ ಅಸ್ಥಿರಗೊಳಿಸುವ ತಮ್ಮ ಷಡ್ಯಂತ್ರ ಬಹಿರಂಗಗೊಳ್ಳುತ್ತಿದ್ದಂತೆಯೇ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ. ಬಿಜೆಪಿ ಮುಖಂಡರನ್ನು ಗುರಿಯಾಗಿಸಿ ಅವಹೇಳನ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಮಾನ-ಮರ್ಯಾದೆ, ನಾಚಿಕೆ ಇಲ್ಲದ ವ್ಯಕ್ತಿ. ಅವರು ಮತ್ತೂಮ್ಮೆ ಸಿಎಂ ಆಗಲು ಸಾಧ್ಯವಿಲ್ಲ ಎಂದರು.

ಹಿಂದಿನ ಚುನಾವಣೆಯಲ್ಲಿ ಪರಮೇಶ್ವರ ಸೋಲಲು ಸಿದ್ದರಾಮಯ್ಯ ಕಾರಣ. ಹಾಸನ, ಮಂಡ್ಯ ಹಾಗೂ ತುಮಕೂರು ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್‌ ಅಭ್ಯರ್ಥಿಗಳು ಸೋತರೆ ಅದಕ್ಕೆ ಸಿದ್ದರಾಮಯ್ಯ ಕಾರಣರೆಂಬುದು ಜಗಜ್ಜಾಹೀರಾಗಿದೆ. ಸಿದ್ದರಾಮಯ್ಯ ಷಡ್ಯಂತ್ರವನ್ನು ಅರಿತ ದೇವೇಗೌಡರು ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ ಮೈತ್ರಿ ಸರಕಾರವನ್ನು ಅಸ್ಥಿರಗೊಳಿಸಲು ಸಿದ್ದರಾಮಯ್ಯ ಪ್ರಯತ್ನಿಸುವ ಕುರಿತು ಪತ್ರ ಬರೆದಿದ್ದಾರೆ. ಇದರಿಂದ ಸಿದ್ದರಾಮಯ್ಯಗೆ ನಡುಕ ಶುರುವಾಗಿದೆ ಎಂದರು.

ಕಾನೂನು ತಜ್ಞರು ಹೇಳಿಕೆ ನೀಡಲಿ: ಕುಂದಗೋಳ ಚುನಾವಣೆ ಪ್ರಚಾರ ಕೊನೆಗೊಳ್ಳುವ ಸಂದರ್ಭದಲ್ಲಿ ಕಾಂಗ್ರೆಸ್‌ ಮುಖಂಡರು ಮಹದಾಯಿ ಬಗ್ಗೆ ಪ್ರಸ್ತಾಪ ಮಾಡುತ್ತಿದ್ದಾರೆ. ನೋಟಿಫಿಕೇಶನ್‌ ನೀಡಿಲ್ಲ ಎಂದು ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುವ ಯತ್ನ ಮಾಡುತ್ತಿದ್ದಾರೆ. ಗೋವಾ ಸರಕಾರ ಪಿಟಿಷನ್‌ ಸಲ್ಲಿಸಿದ್ದರಿಂದ ನೋಟಿಫಿಕೇಶನ್‌ ನೀಡಲು ಬರುವುದಿಲ್ಲ. ಸರ್ವ ಪಕ್ಷ ನಿಯೋಗದೊಂದಿಗೆ ಪ್ರಧಾನಿ ಭೇಟಿ ಮಾಡಬೇಕೆಂದು ಹಲವು ಬಾರಿ ಹೇಳಿದರೂ ಅದಕ್ಕೆ ಸ್ಪಂದಿಸಿಲ್ಲ. ಮಹದಾಯಿ ಕುರಿತು ಕಾಂಗ್ರೆಸ್‌ ಮುಖಂಡರು ಹೇಳಿಕೆ ನೀಡಿ ಜನರಲ್ಲಿ ಗೊಂದಲ ಸೃಷ್ಟಿಸದೇ ಕಾನೂನು ತಜ್ಞರು ಹೇಳಿಕೆ ನೀಡುವುದು ಸೂಕ್ತ ಎಂದು ಹೇಳಿದರು.

ಗೋಡ್ಸೆಗೂ ಬಿಜೆಪಿಗೂ ಸಂಬಂಧವಿಲ್ಲ: ಮಹಾತ್ಮಾ ಗಾಂಧಿಯನ್ನು ಹತ್ಯೆ ಮಾಡಿದ ಗೋಡ್ಸೆಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ನಾವು ಎಂದಿಗೂ ಗೋಡ್ಸೆಯನ್ನು ಒಪ್ಪಿಕೊಂಡಿಲ್ಲ ಎಂದರು.

ಮುಂದಿನ ಮುಖ್ಯಮಂತ್ರಿ ನಾನೇ ಎಂದು ಪರಸ್ಪರ ಕಿತ್ತಾಡಿಕೊಳ್ಳುತ್ತಿರುವ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರಕಾರ ಪತನವಾಗುವುದು ಶತಸಿದ್ಧ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ಹೇಳಿದರು.

ದೇವನೂರ ಗ್ರಾಮದಲ್ಲಿ ಶುಕ್ರವಾರ ರೋಡ್‌ ಶೋ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಸರಕಾರ ಇದೆಯೋ ಇಲ್ಲವೂ ಎಂಬುದೇ ತಿಳಿಯುತ್ತಿಲ್ಲ. ಆಡಳಿತ ನಡೆಸಬೇಕಾದವರು ಅವರಿವರ ಕಾಲು ಎಳೆಯುವ ಕೆಲಸದಲ್ಲಿ ಮಗ್ನರಾಗಿದ್ದು, ನಾಡಿನಲ್ಲಿ ಸರಕಾರವೇ ಇಲ್ಲದಂತಾಗಿದೆ. ಈ ಹಿಂದೆ ಬಿಜೆಪಿ ಸರಕಾರವಿದ್ದಾಗ, ಹಲವಾರು ಜನಪರ ಯೋಜನೆಗಳನ್ನು ತರುವ ಮೂಲಕ ಎಲ್ಲರಿಗೂ ಸಮಪಾಲು-ಸಮಬಾಳು ಎಂಬ ಧ್ಯೇಯವಾಕ್ಯದೊಂದಿಗೆ ಆಡಳಿತ ನೀಡಲಾಗಿತ್ತು. ಕುಂದಗೋಳ ಕ್ಷೇತ್ರದಲ್ಲಿ ಎಸ್‌.ಐ. ಚಿಕ್ಕನಗೌಡರ ಅತೀ ಹೆಚ್ಚು ಅಭಿವೃದ್ಧಿ ಕೆಲಸ ಮಾಡುವ ಮೂಲಕ ಕ್ಷೇತ್ರದಲ್ಲಿ ಉತ್ತಮ ಆಡಳಿತ ನೀಡಿದ್ದರು. ಇದೀಗ ಮತ್ತೂಮ್ಮೆ ಅವರಿಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದರು. ಗ್ರಾಮದ ಹಲವು ಕಾರ್ಯಕರ್ತರು ಪಕ್ಷಕ್ಕೆ ಸೇರ್ಪಡೆಗೊಂಡರು. ಮುಖಂಡರಾದ ಮಾ. ನಾಗರಾಜ, ಮಂಜುನಾಥ ಕುನ್ನೂರ, ರಂಗಾ ಬದ್ದಿ, ಶಿವಾನಂದ ಮುತ್ತಣ್ಣವರ ಇನ್ನಿತರರಿದ್ದರು.

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.