ಜಿಲ್ಲೆಯಲ್ಲಿವೆ ಸಾವಿರಾರು ನಿರುಪಯುಕ್ತ ಕೊಳವೆ ಬಾವಿಗಳು

Team Udayavani, May 21, 2019, 6:10 AM IST

kolave-bavi

ಉಡುಪಿ: ಉಡುಪಿ ನಗರ ಸೇರಿದಂತೆ ಐದು ನಗರ ಸ್ಥಳೀಯ ಸಂಸ್ಥೆಗಳು ಮತ್ತು 158 ಗ್ರಾ.ಪಂ.ಗಳಲ್ಲಿ ಕುಡಿಯುವ ನೀರಿನ ಹಾಹಾಕಾರ ಕೇಳುತ್ತಿರುವಂತೆ ಜಿಲ್ಲೆಯಲ್ಲಿ ಐದಾರು ಸಾವಿರ ಕೊಳವೆಬಾವಿಗಳು ನಿರುಪಯುಕ್ತವಾಗಿ ಬಿದ್ದಿರುವುದು ಮತ್ತು ಶೇ.20 ಕೊಳವೆಬಾವಿಗಳೂ ಉಪಯೋಗಕ್ಕೆ ಬಾರದೆ ಇರುವುದು ತಿಳಿದುಬಂದಿದೆ.

ಇದಕ್ಕೆ ಕಾರಣ ಸರಕಾರದ ಆಡಳಿತಾತ್ಮಕ ದೋಷ. ನಾಲ್ಕೈದು ಹಿಂದೆ ತಾಲೂಕು ಕೇಂದ್ರದಲ್ಲಿ ತಾ.ಪಂ. ಸುಪರ್ದಿಯಲ್ಲಿ ಇದರ ನಿರ್ವಹಣೆ ನಡೆಯುತ್ತಿತ್ತು. ಈಗ ಕೊಳವೆಬಾವಿಗಳ ನಿರ್ವಹಣಾ ಜವಾಬ್ದಾರಿಯನ್ನು ಗ್ರಾ.ಪಂ.ಗೆ ವಹಿಸಿಕೊಡಲಾಗಿದೆ. ಹಿಂದೆ ಕೈಪಂಪು ತುಂಡಾಗಿದ್ದರೆ, ಪಂಪು ಕೆಟ್ಟು ಹೋಗಿದ್ದರೆ ಹೀಗೆ ಎಲ್ಲೆಲ್ಲಿ ಸಮಸ್ಯೆ ಇದೆ ಎಂದು ತಿಳಿದುಬಂದ ಕೂಡಲೇ ಅಲ್ಲಿಗೆ ನಿರ್ವಹಣಾ ವ್ಯಕ್ತಿಗಳು ಹೋಗಿ ದುರಸ್ತಿ ಮಾಡುತ್ತಿದ್ದರು.

ಇದಕ್ಕೆ ಬೇಕಾದ ಮಾನವ ಮತ್ತು ಯಾಂತ್ರಿಕ ಸಂಪನ್ಮೂಲ ತಾಲೂಕು ಕೇಂದ್ರಗಳಲ್ಲಿತ್ತು. ಇದರ ಖರ್ಚನ್ನು ಗ್ರಾ.ಪಂ. ವಹಿಸಿಕೊಳ್ಳುತ್ತಿತ್ತು. ಆಗ ಜಿ.ಪಂ. ಮೂಲಕ ತಾ.ಪಂ.ಗೆ, ತಾ.ಪಂ. ಮೂಲಕ ಗ್ರಾ.ಪಂ.ಗೆ ನಿರ್ವಹಣಾ ಅನುದಾನ ಬರುತ್ತಿತ್ತು. ಈಗ ಇದಕ್ಕಾಗಿ ಪ್ರತ್ಯೇಕ ಅನುದಾನ ಬರುತ್ತಿಲ್ಲ. ಕೇಂದ್ರ ಸರಕಾರದಿಂದ ಬರುವ 14ನೆಯ ಹಣಕಾಸು ಆಯೋಗದ ಅನುದಾನದಲ್ಲಿ ಕುಡಿಯುವ ನೀರಿನ ನಿರ್ವಹಣೆ ನೋಡಿಕೊಳ್ಳಲು ಸೂಚನೆ ಬಂದಿದೆ. ಹೀಗಾಗಿ ರಾಜ್ಯ ಸರಕಾರವೂ ವಿಶೇಷ ಆದ್ಯತೆ ಕೊಟ್ಟಿಲ್ಲ. ಕನಿಷ್ಠ ಶೇ.20 ಅನುದಾನವನ್ನು ಇರಿಸಿಕೊಳ್ಳಬಹುದೆಂದು ಸೂಚಿಸಲಾಗಿದೆಯಾದರೂ ಬಹುತೇಕ ಮೊತ್ತವನ್ನು ಹೊಸ ಕಾಮಗಾರಿಗಳಿಗೆ ಗ್ರಾ.ಪಂ. ಉಪಯೋಗಿಸುತ್ತಿದೆ. ಇದರಿಂದ ಹಳೆ ಕೊಳವೆಬಾವಿ ದುರಸ್ತಿ ಅಷ್ಟಕ್ಕಷ್ಟೆ ನಡೆಯುತ್ತಿದೆ.

ಮಾನವ ಸಂಪನ್ಮೂಲದ ಕೊರತೆ
ಗ್ರಾ.ಪಂ. ಮಟ್ಟದಲ್ಲಿ ಕೊಳವೆಬಾವಿ ದುರಸ್ತಿ ಮಾಡುವ ವ್ಯಕ್ತಿಗಳ ಕೊರತೆ ಇದೆ. ಹಿಂದೆ ತಾಲೂಕು ಮಟ್ಟದಲ್ಲಿ ಒಂದಿಬ್ಬರು ಮಾನವ ಸಂಪನ್ಮೂಲ ವ್ಯಕ್ತಿಯನ್ನು ಗುರುತಿಸಿ ಇಡುತ್ತಿದ್ದರು. ಅವರಿಗೆ ತಿಳಿಸಿದಾಗ ಬಂದು ಮಾಡಿ ಹೋಗುತ್ತಿದ್ದರು. ಈಗ ಕೊಳವೆಬಾವಿಗಳ ಸಂಖ್ಯೆ ಹೆಚ್ಚಿದೆ. ಇನ್ನೊಂದೆಡೆ ಕೊಳವೆಬಾವಿ ದುರಸ್ತಿ ಮಾಡುವ ವ್ಯಕ್ತಿಗಳು ಕಡಿಮೆ ಸಂಖ್ಯೆಯಲ್ಲಿದ್ದಾರೆ. ಹೀಗಾಗಿ ಕೆಟ್ಟು ಹೋದ ಕೊಳವೆಬಾವಿಯನ್ನು ಮುಟ್ಟುವವರು ಇಲ್ಲವಾಗಿದೆ. ಒಟ್ಟಾರೆ ಲಕ್ಷಾಂತರ ರೂ. ವೆಚ್ಚ ಮಾಡಿ ಕೊರೆಸಿದ ಕೊಳವೆಬಾವಿಗಳು ಪಾಳುಬಿದ್ದಿವೆ.

ಉಪಯೋಗಿಸದಿದ್ದರೆ ನಿರುಪಯುಕ್ತ
ಕೊಳವೆಬಾವಿಗಳು ಬಳಸುತ್ತಿದ್ದರೆ ಮಾತ್ರ ಅದರಿಂದ ಬರುವ ನೀರನ್ನು ಉಪಯೋಗಿಸುವುದು ಸಾಧ್ಯ. ಬಳಸದೆ ಇದ್ದರೆ ಕಬ್ಬಿಣದ ಕೊಳವೆಯಿಂದ ಕಬ್ಬಿಣದ ಅಂಶ ಸೇರಿ ನೀರು ಕೆಂಪು ಬಣ್ಣಕ್ಕೆ ತಿರುಗುತ್ತದೆ. ಕೆಲವು ಬಾರಿ ಕೆಸರು ಸೇರಿಕೊಂಡು ಕೆಂಪು ಬಣ್ಣಕ್ಕೆ ತಿರುಗುತ್ತದೆ. ಇಂತಹ ನೀರನ್ನು ಹೊರಗೆ ಹಾಕಿದರೆ ಮಾತ್ರ ಕುಡಿಯಲು ಯೋಗ್ಯವಾಗಿರುತ್ತದೆ. ಇಂತಹ ಕೆಲಸ ನಡೆಯುತ್ತಿಲ್ಲವಾದ ಕಾರಣ ಕೊಳವೆಬಾವಿಗಳು ನಿರುಪಯುಕ್ತವಾಗಿವೆ. ಒಂದು ಕೊಳವೆಬಾವಿ ಅವಧಿ 10ರಿಂದ 15 ವರ್ಷ. ಹೀಗೆ ನಿರುಪಯುಕ್ತವಾಗಿದ್ದರೆ ಅದನ್ನು ಮರು ಉಪಯೋಗಗೊಳಿಸುವುದೂ ಕಷ್ಟಸಾಧ್ಯ.

ಗ್ರಾ.ಪಂಗೆ ವಹಿಸಿಕೊಡಲಾಗಿದೆ
ಯಾರು ಬಳಕೆದಾರರೋ ಅವರೇ ಅದರ ನಿರ್ವಹಣಾ ಜವಾಬ್ದಾರಿ ವಹಿಸಿಕೊಳ್ಳುವುದು ಉತ್ತಮ. ಈ ಕಾರಣಕ್ಕಾಗಿ ಗ್ರಾ.ಪಂ.ಗೆ ವಹಿಸಿಕೊಡಲಾಗಿದೆ. ಎಲ್ಲೆಲ್ಲಿ ಸಮಸ್ಯೆ ಇದೆ ಎಂದು ತಿಳಿದು ಬಗೆಹರಿಸಲು ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳಿಗೂ ಸೂಚನೆ ಕೊಡಲಾಗಿದೆ. ಸಮನ್ವಯದ ದೃಷ್ಟಿಯಿಂದ ಸಮಸ್ಯೆ ಇದ್ದಲ್ಲಿ ಪರಿಹರಿಸಲು ಗಮನಹರಿಸುತ್ತೇವೆ.
– ಸಿಂಧು ಬಿ. ರೂಪೇಶ್‌, ಉಡುಪಿ ಜಿ.ಪಂ. ಸಿಇಒ.

ಸಲಹೆ
ಪ್ರತಿ ತಾಲೂಕಿನಲ್ಲಿ ಕೊಳವೆಬಾವಿ ದುರಸ್ತಿಪಡಿಸುವ ಮಾನವ ಸಂಪನ್ಮೂಲ ಕೋಶ ಸಿದ್ಧಪಡಿಸಿ ಗ್ರಾ.ಪಂ.ಗಳಿಗೆ ಕಳುಹಿಸಿದರೆ ಅವರು ಅಗತ್ಯವಿದ್ದಾಗ ಅವರಿಗೆ ತಿಳಿಸಬಹುದು. ಈಗ ಕೊಳವೆಬಾವಿ ದುರಸ್ತಿಪಡಿಸುವ ಮಾನವ ಸಂಪನ್ಮೂಲದ ಕೊರತೆ ಇದೆ. ಹೀಗಾಗಿ ಪ್ರತಿ ಗ್ರಾ.ಪಂ.ನಲ್ಲಿರುವ ಕುಡಿಯುವ ನೀರಿಗೆ ಸಂಬಂಧಿಸಿದ ಸಿಬಂದಿಗೆ ಜಿಲ್ಲಾ ಅಥವಾ ರಾಜ್ಯ ಮಟ್ಟದಲ್ಲಿ ತರಬೇತಿ ಕೊಡಿಸಿದರೆ ಇವರನ್ನೇ ಕೊಳವೆಬಾವಿ ದುರಸ್ತಿಗೆ ಮಾನವ ಸಂಪನ್ಮೂಲವಾಗಿ ಬಳಸಿಕೊಳ್ಳಬಹುದು. ಸದ್ಯ ಈ ಕೆಲಸ ನಡೆಯುತ್ತಿಲ್ಲ. ಜಿಲ್ಲಾ ಮಟ್ಟದಲ್ಲಿ ಜಿ.ಪಂ. ಆಸಕ್ತಿ ವಹಿಸಿ ತರಬೇತಿ ಕಾರ್ಯಾಗಾರ ನಡೆಸಿದರೆ ಹೆಚ್ಚು ಅನುಕೂಲವಾಗುತ್ತದೆ ಎಂಬ ಅಭಿಪ್ರಾಯವಿದೆ. ಇಲ್ಲವಾದರೆ ನಮ್ಮದೇ ತೆರಿಗೆ ಹಣ ಪೋಲಾಗಿ ಹೋಗುತ್ತದೆ.

– ಮಟಪಾಡಿ ಕುಮಾರಸ್ವಾಮಿ

ಟಾಪ್ ನ್ಯೂಸ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.