ಪಾಲೋಳಿ: ಸರ್ವಋತು ಸೇತುವೆ ನಿರ್ಮಾಣಕ್ಕೆ ಸಾಧ್ಯತಾ ವರದಿ ಸಲ್ಲಿಕೆ

ಲೋಕೋಪಯೋಗಿ ಇಲಾಖೆಯಿಂದ 23.38 ಕೋಟಿ ರೂ. ಅಂದಾಜು ಪಟ್ಟಿ

Team Udayavani, May 23, 2019, 6:00 AM IST

s-4

ಪ್ರಸ್ತುತ ಪಾಲೋಳಿಯಲ್ಲಿ ಜನರು ಉಪಯೋಗಿಸುತ್ತಿರುವ ತಾತ್ಕಾಲಿಕ ಸೇತುವೆ.

ಕಡಬ: ಕುಮಾರಧಾರಾ ಹೊಳೆಗೆ ಕಡಬ ಗ್ರಾಮದ ಪಿಜಕಳದ ಪಾಲೋಳಿಯಲ್ಲಿ ಸರ್ವಋತು ಸೇತುವೆ ನಿರ್ಮಿಸುವ ನಿಟ್ಟಿನಲ್ಲಿ ಲೋಕೋಪಯೋಗಿ ಇಲಾಖಾಧಿಕಾರಿಗಳು 23.38 ಕೋಟಿ ರೂ.ಗಳ ಅಂದಾಜು ಪಟ್ಟಿಯೊಂದಿಗೆ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮಕ್ಕೆ (ಕೆಆರ್‌ಡಿಸಿಎಲ್‌) ಸಾಧ್ಯತಾ ವರದಿ ಸಲ್ಲಿಸಿದ್ದಾರೆ.

ಪಾಲೋಳಿಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಕುಮಾರಧಾರಾ ನದಿಗೆ ಸರ್ವಋತು ಸೇತುವೆ ನಿರ್ಮಿಸಬೇಕು ಎನ್ನುವ ಗ್ರಾಮಸ್ಥರ ಬೇಡಿಕೆಯಂತೆ ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ ಅವರ ಸೂಚನೆಯ ಮೇರೆಗೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಈ ಹಿಂದೆಯೇ ಸ್ಥಳ ಪರಿಶೀಲನೆ ನಡೆಸಿ ಅಂದಾಜು ಪಟ್ಟಿಯನ್ನು ಸಲ್ಲಿಸಿದ್ದರು.

ಕೆಆರ್‌ಡಿಸಿಎಲ್‌ಗೆ ಕಾಮಗಾರಿ
ಪಾಲೋಳಿ ಸೇತುವೆಯ ನಿರ್ಮಾಣ ಕಾಮಗಾರಿಯನ್ನು ಹೊಸಮಠ ಸೇತುವೆಯ ಕಾಮಗಾರಿ ನಿರ್ವಹಿಸಿದ ಕೆಆರ್‌ಡಿಸಿಎಲ್‌ಗೆ ವಹಿಸುವ ಸಾಧ್ಯತೆಗಳಿದ್ದು, ಸರಕಾರದ ಸೂಚನೆಯಂತೆ ಕೆಲ ಸಮಯದ ಹಿಂದೆ ಕಂದಾಯ ಅಧಿಕಾರಿಗಳ ಜತೆಗೆ ಸ್ಥಳಕ್ಕೆ ಭೇಟಿ ನೀಡಿದ ಲೋಕೋಪಯೋಗಿ ಇಲಾಖಾ ಅಧಿಕಾರಿಗಳು ಕೆಆರ್‌ಡಿಸಿಎಲ್‌ಗೆ ಸಾಧ್ಯತಾ ವರದಿ ಸಲ್ಲಿಸಿದ್ದಾರೆ. ನೂತನ ಸೇತುವೆ ಹಾಗೂ ಸೇತುವೆಗೆ ಕಡಬ ಹಾಗೂ ಎಡಮಂಗಲ ಭಾಗದಿಂದ ಸಂಪರ್ಕ ರಸ್ತೆ ನಿರ್ಮಿಸಲು ಬೇಕಾಗುವ ಜಮೀನಿನ ಲಭ್ಯತೆ ಇತ್ಯಾದಿ ವಿಚಾರಗಳ ಕುರಿತು ಈ ಸಾಧ್ಯತಾ ವರದಿಯಲ್ಲಿ ವಿವರಗಳನ್ನು ಸಲ್ಲಿಸಲಾಗಿದೆ.

ಹಲವು ವರ್ಷಗಳ ಬೇಡಿಕೆಗೆ ಸ್ಪಂದನೆ
ಪಾಲೋಳಿಯಲ್ಲಿ ಸರ್ವಋತು ಸೇತುವೆ ನಿರ್ಮಾಣವಾಗಬೇಕೆಂದು ಕಳೆದ 30 ವರ್ಷಗಳ ಬೇಡಿಕೆ. ಸ್ಥಳೀಯರು ಸೇರಿಕೊಂಡು ಸಂಘಟನಾತ್ಮಕವಾಗಿ ಹೋರಾಟವನ್ನು ರೂಪಿಸುವ ಸಲುವಾಗಿ ನಿವೃತ್ತ ಶಿಕ್ಷಕ ಸಾಂತಪ್ಪ ಗೌಡ ಪಿಜಕಳ ಅವರ ಅಧ್ಯಕ್ಷತೆಯಲ್ಲಿ ಪಾಲೋಳಿ ಕುಮಾರಧಾರಾ ಶಾಶ್ವತ ಸೇತುವೆ ಹೋರಾಟ ಸಮಿತಿ ಎನ್ನುವ ಹೆಸರಿನಲ್ಲಿ ಸಂಘಟನೆಯನ್ನು ರೂಪಿಸಿ ಹೋರಾಟ ಆರಂಭಿಸಿದ್ದರು. ಕಡಬದ ರಾಜಕೀಯ ಮುಂದಾಳು, ಜಿಲ್ಲಾ ಪರಿಷತ್‌ನ ಮಾಜಿ ಸದಸ್ಯ ಸಯ್ಯದ್‌ ಮೀರಾ ಸಾಹೇಬ್‌ ಅವರು ಲೋಕೋಪಯೋಗಿ ಸಚಿವರನ್ನು ಭೇಟಿ ಮಾಡಿ ಪಾಲೋಳಿ ಸೇತುವೆ ನಿರ್ಮಾಣದ ಅಗತ್ಯವನ್ನು ಮನವರಿಕೆ ಮಾಡಿದ ಪರಿಣಾಮ ಗ್ರಾಮಸ್ಥರ ಹೋರಾಟಕ್ಕೆ ಸರಕಾರದ ಮಟ್ಟದಲ್ಲಿ ಸ್ಪಂದನೆ ಲಭಿಸಿದೆ.

15 ಕಿ.ಮೀ. ಸುತ್ತು ಬಳಸುವುದು ತಪ್ಪುತ್ತದೆ
ಪಾಲೋಳಿ ಮತ್ತು ಎಡಮಂಗಲ ಪೇಟೆಯ ಮಧ್ಯೆ ಇರುವುದು ಕೇವಲ 2 ಕಿ.ಮೀ.ಗಳ ಅಂತರ. ಆದರೆ ಮಧ್ಯೆ ಕುಮಾರಧಾರಾ ಹೊಳೆ ಹರಿಯುತ್ತಿರುವುದರಿಂದ ಪಾಲೋಳಿ- ಪಿಜಕ್ಕಳದ ಜನರು ಎಡಮಂಗಲವನ್ನು ತಲುಪಬೇಕಾದರೆ ಕಡಬ- ಕೋಡಿಂಬಾಳ- ಪುಳಿಕುಕ್ಕು ಮೂಲಕ 15 ಕಿ.ಮೀ.ಗಳಷ್ಟು ದೂರ ಸುತ್ತು ಬಳಸಿ ಪ್ರಯಾಣಿಸಬೇಕಿದೆ. ಅದೂ ಸಮರ್ಪಕ ಬಸ್‌ ಸೌಕರ್ಯ ಇಲ್ಲದಿರುವುದರಿಂದ ಸುಲಭದ ದಾರಿ ಇಲ್ಲ. ಪಾಲೋಳಿಯಲ್ಲಿ ಸೇತುವೆ ನಿರ್ಮಾಣವಾದರೆ ಕಡಬದಿಂದ ಕೇವಲ 5 ಕಿ.ಮೀ. ಸಂಚರಿಸಿ ಎಡಮಂಗಲ ತಲುಪಬಹುದು.

ತಾತ್ಕಾಲಿಕ ಸೇತುವೆಯ ಮೊರೆ
ಕಳೆದ ಕೆಲವು ವರ್ಷಗಳಿಂದ ಊರವರೇ ಸೇರಿಕೊಂಡು ಶ್ರಮದಾನದ ಮೂಲಕ ಇಲ್ಲಿ ತಾತ್ಕಾಲಿಕ ನೆಲೆಯ ಸೇತುವೆ ನಿರ್ಮಾಣ ಮಾಡುತ್ತಿದ್ದಾರೆ. 4 ವರ್ಷಗಳ ಹಿಂದೆ ದಾನಿಗಳ ಆರ್ಥಿಕ ನೆರವಿನಿಂದ ಎಡಮಂಗಲ ಹಾಗೂ ಪಿಜಕಳ ಪರಿಸರದ ಜನರ ಶ್ರಮದಾನದ ಫಲವಾಗಿ ಸುಮಾರು 120 ಮೀ. ಉದ್ದ ಹಾಗೂ 10 ಮೀ. ಅಗಲದ ಸೇತುವೆ ನಿರ್ಮಿಸಲಾಗಿತ್ತು. ಆದರೆ ಮಳೆಗಾಲದಲ್ಲಿ ನೀರಿನ ಹೊಡೆತಕ್ಕೆ ಸಿಲುಕಿ ಕೊಚ್ಚಿ ಹೋಗುವ ಸೇತುವೆಯನ್ನು ಪ್ರತೀ ಬೇಸಗೆಯಲ್ಲಿ ಊರವರು ಪುನರ್‌ ನಿರ್ಮಾಣ ಮಾಡಿ ಉಪಯೋಗಿಸುತ್ತಿದ್ದಾರೆ. ಈ ಬಾರಿಯೂ ಹಾನಿಯಾಗಿರುವ ತಾತ್ಕಾಲಿಕ ಸೇತುವೆಯನ್ನು ಶ್ರಮದಾನದ ಮೂಲಕ ದುರಸ್ತಿಗೊಳಿಸಿ ಸಾರ್ವಜನಿಕರು ಉಪಯೋಗಿಸುತ್ತಿದ್ದಾರೆ.

ಪಟ್ಟಿಯಲ್ಲಿ  ಸೇರ್ಪಡೆ
ಪಾಲೋಳಿ ಸೇತುವೆಗೆ ಅಂದಾಜುಪಟ್ಟಿ ತಯಾರಿಸಲಾಗಿದೆ. ಸರಕಾರದ ಸೂಚನೆಯಂತೆ ಕೆಆರ್‌ಡಿಸಿಎಲ್‌ಗೆ ಸೇತುವೆ ನಿರ್ಮಾಣಕ್ಕೆ ಬೇಕಾದ ಜಮೀನಿನ ಮಾಹಿತಿ, ಇತರ ವಿವರಗಳುಳ್ಳ ಸಾಧ್ಯತಾ ವರದಿ ಸಲ್ಲಿಸಿ ದ್ದೇವೆ. ಕೆಆರ್‌ಡಿಸಿಎಲ್‌ನ 2019-20ನೇ ಸಾಲಿನ ಕಾಮಗಾರಿಗಳ ಪಟ್ಟಿಗೆ ಪಾಲೋಳಿ ಸೇತುವೆಯನ್ನೂ ಸೇರಿಸಿದೆ. ಪ್ರಕ್ರಿಯೆಗಳ ಬಳಿಕ ಟೆಂಡರ್‌ ಆಗಬೇಕಿದೆ.
– ಪ್ರಮೋದ್‌ ಕುಮಾರ್‌ ಕೆ.ಕೆ., ಪಿಡಬ್ಲ್ಯೂಡಿ ಎಇ, ಪುತ್ತೂರು

ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Dengue Fever; ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.