ಸೊಳ್ಳೆಗಳು ಉತ್ಪತ್ತಿಯಾಗದಂತೆ ನೋಡಿಕೊಳ್ಳಿ

ಡೆಂಘೀ, ಚಿಕೂನ್‌ಗುನ್ಯಾ ಕುರಿತು ಜಾಗೃತಿ ಜಾಥಾ

Team Udayavani, May 23, 2019, 8:21 AM IST

br-tdy-2..

ದೇವನಹಳ್ಳಿ: ಸಾರ್ವಜನಿಕರು ನೀರಿನ ತೊಟ್ಟಿ ಗಳನ್ನು ತೆರದಿಡಬಾರದು. ಮುಚ್ಚಳ ಮುಚ್ಚಿ ಸಂಗ್ರ ಹಿಸಿ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟು ಕೊಂಡು ಸೊಳ್ಳೆಗಳು ಉತ್ಪತ್ತಿಯಾಗದಂತೆ ನೋಡಿ ಕೊಳ್ಳಬೇಕೆಂದು ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಧರ್ಮೇಂದ್ರ ತಿಳಿಸಿದರು.

ನಗರದ ಬಿಬಿ ರಸ್ತೆಯಲ್ಲಿರುವ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಆವರಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಡೆದ ಡೆಂಘೀ ಮತ್ತು ಚಿಕೂನ್‌ಗುನ್ಯಾ ನಿಯಂತ್ರಣದ ಜಾಗೃತಿ ಜಾಥಾದಲ್ಲಿ ಅವರು ಮಾತನಾಡಿದರು.

ಸೂಕ್ತ ಚಿಕಿತ್ಸೆ ಪಡೆಯಿರಿ: ಡೆಂಘೀ ಜ್ವರ ಬರದಂತೆ ಸಾರ್ವಜನಿಕರು ಮುಂಜಾಗೃತ ಹಾಗೂ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕು. ಡೆಂಘೀ ಜ್ವರದ ವೈರಸ್‌ನಿಂದ ಉಂಟಾಗುವ ಖಾಯಿಲೆ ಈಡೀಸ್‌ ಈಜಿಪ್ಟೆ ಸೊಳ್ಳೆ ಕಚ್ಚುವುದರಿಂದ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ. ಈ ಸೊಳ್ಳೆ ಸಾಮಾನ್ಯವಾಗಿ ಸ್ವಚ್ಛ ನೀರಿನಿಂದ ಸಂತಾನ ಅಭಿವೃದ್ಧಿ ಮಾಡುತ್ತದೆ. ಹಗಲು ಹೊತ್ತಿನಲ್ಲಿ ಮನುಷ್ಯನನ್ನು ಕಚ್ಚುತ್ತದೆ. ಮೂರಕ್ಕಿಂತ ಹೆಚ್ಚು ದಿನಗಳಿಂದ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗ, ಮಾಂಸಖಂಡ ಹಾಗೂ ಕೀಳುಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ತಕ್ಷಣ ಆರೋಗ್ಯ ಕಾರ್ಯಕರ್ತೆಯರನ್ನು ಸಂಪ ರ್ಕಿಸಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪರೀಕ್ಷೆ ಮಾಡಿಕೊಂಡು ಚಿಕಿತ್ಸೆ ಪಡೆಯಬೇಕು ಎಂದು ಸಲಹೆ ನೀಡಿದರು.

ಸ್ವಚ್ಛತೆಗೆ ಆದ್ಯತೆ ನೀಡಿ: ಡೆಂಘೀ ಮತ್ತು ಚಿಕೂನ್‌ಗುನ್ಯಾ ನಿಯಂತ್ರಣ ತಡೆಗಟ್ಟಲು ಅಗತ್ಯವಿರುವ ಜಾಗೃತಿ ಕಾರ್ಯಕ್ರಮಗಳಿಗೆ ಸಹಕಾರ ನೀಡಲಾ ಗುತ್ತಿದೆ. ನೀರು ನಿಲ್ಲದಂತೆ ಹಾಗೂ ಚರಂಡಿ ಇತ್ಯಾದಿ ಕಡೆ ಸೊಳ್ಳೆಗಳ ನಿರ್ಮೂಲನೆಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಹೇಳಿದರು.

ಪರಿಸರ ಸಂರಕ್ಷಣೆ ಅಗತ್ಯ: ತಾಲೂಕು ಆರೋಗ್ಯಾಧಿಕಾರಿ ಸಂಜಯ್‌ ಮಾತನಾಡಿ, ತಾಲೂ ಕಿನಲ್ಲಿ ಡೆಂಘೀ ಮತ್ತು ಚಿಕೂನ್‌ಗುನ್ಯಾ ಜ್ವರದ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕಾರ್ಯ ಮಾಡ ಲಾಗುತ್ತಿದೆ. ಪ್ರತಿಯೊಬ್ಬರಲ್ಲೂ ಸ್ವಚ್ಛತೆ ಬಗ್ಗೆ ಅರಿವು ಮೂಡಬೇಕು. ಪ್ರತಿಯೊಂದು ಕಡೆ ಪರಿಸರ ಸಂರ ಕ್ಷಣೆ ಬಗ್ಗೆ ಜಾಗೃತಿ ಮೂಡಿದಾಗ ಮಾತ್ರ ಸಾಂಕ್ರಾ ಮಿಕ ರೋಗ ತಡೆಗಟ್ಟಲು ಸಾಧ್ಯವಾಗುತ್ತದೆ ಎಂದರು.

ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ರೇವಣ್ಣ ಮಾತನಾಡಿ, ಸೊಳ್ಳೆ ಪರದೆ ಉಪಯೋಗಿಸಿಕೊಳ್ಳ ಬೇಕು. ವಾರದಲ್ಲಿ ಒಂದು ದಿನ ಒಣ ದಿನ ಆಚರಿ ಸಬೇಕು. ಸೊಳ್ಳೆಗಳ ಉತ್ಪತ್ತಿ ಮೂಲವನ್ನು ನಾಶ ಮಾಡಬೇಕು ಎಂದರು.

ವಾರಕ್ಕೊಮ್ಮೆಯಾದರೂ ನೀರು ಸಂಗ್ರಹಿಸುವ ಪರಿಕರಗಳನ್ನು ಸ್ವಚ್ಛವಾಗಿ ತೊಳೆದು ನೀರು ಸಂಗ್ರಹಿಸಿ ಮುಚ್ಚಳ ಮುಚ್ಚಬೇಕು. ಶುದ್ಧ ನೀರಿನಲ್ಲಿ ಸೊಳ್ಳೆಗಳು ಸಂತತಿ ಮಾಡುವುದರಿಂದ ತೆರೆದ ಪರಿಕರಗಳಲ್ಲಿ ನೀರು ಸಂಗ್ರಹಿಸಬಾರದು. ಡೆಂಘೀ ಮತ್ತು ಚಿಕೂನ್‌ಗುನ್ಯಾ ನಿಯಂತ್ರಣಕ್ಕೆ ಸಾರ್ವಜ ನಿಕರು ಇಲಾಖೆಯೊಂದಿಗೆ ಕೈಜೋಡಿಸಬೇಕು. ಹಠಾತ್ತನೆ ಜ್ವರ, ತೀವ್ರ ತಲೆನೋವು ಕಾಣಿಸಿಕೊಂಡರೆ ತಕ್ಷಣ ಸರಕಾರಿ ಆಸ್ಪತ್ರೆಯಲ್ಲಿ ಪರೀಕ್ಷಿಸಿಕೊಳ್ಳ ಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.