ವರ್ಕೌಟ್‌ ಆದ ಕೆಮಿಸ್ಟ್ರಿ

ಕರಿಯಪ್ಪನಿಗೆ 63ರ ಖುಷಿ

Team Udayavani, May 24, 2019, 6:00 AM IST

q-23

ಎರಡು ತಿಂಗಳ ಹಿಂದಷ್ಟೇ ಬಿಡುಗಡೆಯಾದ “ಕೆಮಿಸ್ಟ್ರಿ ಆಫ್ ಕರಿಯಪ್ಪ’ ಚಿತ್ರ ನಿಮಗೆ ನೆನಪಿರಬಹುದು. ತಬಲನಾಣಿ, ಚಂದನ್‌ ಆಚಾರ್‌, ಅಪೂರ್ವ, ಸಂಜನಾ ಆನಂದ್‌ ಮೊದಲಾದ ಕಲಾವಿದರು ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದ ಕೌಟುಂಬಿಕ ಕಥಾಹಂದರ ಹೊಂದಿದ್ದ ಈ ಚಿತ್ರ ಇದೀಗ ಸದ್ದಿಲ್ಲದೆ 63 ದಿನಗಳ ಯಶಸ್ವಿ ಪ್ರದರ್ಶನವನ್ನು ಪೂರೈಸಿದೆ. ಇದೇ ವೇಳೆ “ಕೆಮಿಸ್ಟ್ರಿ ಆಫ್ ಕರಿಯಪ್ಪ’ ಚಿತ್ರದ ಗೆಲುವಿನ ಸಂಭ್ರಮವನ್ನು ಹಂಚಿಕೊಳ್ಳಲು ಚಿತ್ರತಂಡ, ಇತ್ತೀಚೆಗೆ ಸಮಾರಂಭವನ್ನು ಆಯೋಜಿಸಿತ್ತು.

ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದ ಆಡಿಟೋರಿಯಂನಲ್ಲಿ ನಡೆದ ಸಮಾರಂಭದಲ್ಲಿ, ಚಿತ್ರದ ಯಶಸ್ಸಿಗೆ ಕಾರಣರಾದ ಕಲಾವಿದರು ಮತ್ತು ತಂತ್ರಜ್ಞರನ್ನು ಅಭಿನಂದಿಸಲಾಯಿತು. ನಟ ನೀನಾಸಂ ಸತೀಶ್‌, ನಿರ್ಮಾಪಕ ಸುಪ್ರೀತ್‌, ನಿರ್ದೇಶಕ ಬಹದ್ದೂರ್‌ ಚೇತನ್‌, ನಿರ್ದೇಶಕ‌ ಮಹೇಶ್‌ ಕುಮಾರ್‌, ಗಾಯಕ ನವೀನ್‌ ಸಜ್ಜು ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಚಿತ್ರಕ್ಕಾಗಿ ದುಡಿದ ಕಲಾವಿದರು ಮತ್ತು ತಂತ್ರಜ್ಞರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಿದರು.

ಇದೇ ವೇಳೆ ಮಾತನಾಡಿದ ನಟ ನೀನಾಸಂ ಸತೀಶ್‌, “ಕಡಿಮೆ ಬಜೆಟ್‌ನಲ್ಲಿ ಒಳ್ಳೆಯ ಸಿನಿಮಾ ಮಾಡಿ ಗೆಲ್ಲಿಸುವುದು ಕಷ್ಟ. ಅಂತಹ ಕೆಲಸವನ್ನು ಈ ತಂಡ ಮಾಡಿದೆ. ಒಂದು ಸಿನಿಮಾಗೆ ಬೇಕಿರುವುದು ಒಳ್ಳೆಯ ಕಥೆ. ಅದಕ್ಕೆ ತಕ್ಕಂತೆ ಜೀವ ತುಂಬುವ ಕಲಾವಿದರು. ಈ ಚಿತ್ರದಲ್ಲಿ ಅದೆಲ್ಲವೂ ಒಟ್ಟಾಗಿರುವುದರಿಂದ ಚಿತ್ರ ಗೆದ್ದಿದೆ. ಚಿತ್ರದ ಕಲಾವಿದರು, ತಂತ್ರಜ್ಞರು ಒಟ್ಟಾಗಿ ಎಫ‌ರ್ಟ್‌ ಹಾಕಿ ಚಿತ್ರವನ್ನು ಗೆಲ್ಲಿಸಿದ್ದಾರೆ’ ಎಂದರು.

ನಿರ್ದೇಶಕ ಚೇತನ್‌ ಕುಮಾರ್‌ ಮಾತನಾಡಿ, “ಒಬ್ಬ ನಿರ್ದೇಶಕನಿಗೆ ತನ್ನ ಪ್ರತಿ ಚಿತ್ರವೂ ಸವಾಲಾಗಿರುತ್ತದೆ. ಆ ಸವಾಲುಗಳನ್ನು ಗೆದ್ದು ನಿರ್ದೇಶಕ ಕುಮಾರ್‌ ತಮ್ಮ ನಿರ್ಮಾಪಕರನ್ನು ಸೇಫ್ ಮಾಡಿದ್ದಾರೆ’ ಎಂದರು. ಇದೇ ವೇಳೆ ಮಾತ­ನಾಡಿದ ನಟ ತಬಲ ನಾಣಿ, ನಿರ್ಮಾಪಕರ ಮೊದಲ ಚಿತ್ರ “ಸಂಯುಕ್ತ-2’ನಲ್ಲಿ ನಾನು ಅಭಿನಯಿಸಿದ್ದೆ. ನಿರ್ದೇಶಕ ಕುಮಾರ್‌ ಈ ಕಥೆ ಹೇಳಿದಾಗ ತುಂಬಾ ಇಷ್ಟವಾಗಿ ಪಾತ್ರಕ್ಕೆ ಒಪ್ಪಿದೆ. ನಿರ್ಮಾಪಕರು ಕೊಟ್ಟ ಬಜೆಟ್‌ನಲ್ಲೇ ಚಿತ್ರ ಮಾಡಿದ್ದಾರೆ. ಈ ಚಿತ್ರದಲ್ಲಿ ಅಭಿನಯಿಸಿದ ಎಲ್ಲರಿಗೂ ಒಳ್ಳೊಳ್ಳೆ ಅವಕಾಶಗಳು ಸಿಗುತ್ತಿವೆ’ ಎಂದು ಹೇಳಿದರು.

ನಾಯಕಿ ಸಂಜನಾ ಮಾತನಾಡಿ, “ಒಂದು ಚಿತ್ರ ಯಶಸ್ವಿಯಾಗಿ 63 ದಿನ ಪೂರೈಸಿದೆ ಎಂದರೆ ಅದು ತಮಾಷೆಯ ಮಾತಲ್ಲ. ಅದರಲ್ಲೂ ನನ್ನ ಮೊದಲ ಚಿತ್ರಕ್ಕೆ ಇಷ್ಟೊಂದು ಬಿಗ್‌ ರೆಸ್ಪಾನ್ಸ್‌ ಸಿಗುತ್ತಿರುವುದು ಖುಷಿಯ ವಿಚಾರ. ಚಿತ್ರತಂಡದಿಂದ ಸಿಕ್ಕ ಪ್ರೋತ್ಸಾಹ, ಸಹಕಾರದಿಂದ ಇದು ಸಾಧ್ಯವಾಯಿತು’ ಎಂದರು. ಕಾರ್ಯಕ್ರಮದಲ್ಲಿ ಹಾಜರಿದ್ದ ನಿರ್ಮಾಪಕ ಡಿ.ಎಸ್‌ ಮಂಜುನಾಥ್‌, ನಿರ್ದೇಶಕ ಕುಮಾರ್‌, ವಿತರಕ ವಿಜಯ್‌ಕುಮಾರ್‌ ಸೇರಿದಂತೆ ಹಲವರು ಚಿತ್ರದ ಬಗ್ಗೆ ತಮ್ಮ ಅನಿಸಿಕೆ-ಅಭಿಪ್ರಾಯಗಳನ್ನು ಹಂಚಿಕೊಂಡರು.

ಟಾಪ್ ನ್ಯೂಸ್

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.