ಸಿದ್ದರಾಮಯ್ಯಗೆ ಜನತೆ ದಿಟ್ಟ ಉತ್ತರ: ಪ್ರತಾಪ ಸಿಂಹ

Team Udayavani, May 24, 2019, 3:00 AM IST

siddaramaia

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಪದೇ ಪದೆ ತಮ್ಮ ಮಾತಿನಲ್ಲಿ ಪ್ರಧಾನಿ ಮೋದಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಬಗ್ಗೆ ತುಚ್ಯವಾಗಿ ಮಾತನಾಡುತ್ತಿದ್ದರು. ಇಂದು ಕರ್ನಾಟಕದ ಜನತೆ ಅವರಿಗೆ ದಿಟ್ಟ ಉತ್ತರ ನೀಡಿದ್ದಾರೆ ಎಂದು ಸಂಸದ ಪ್ರತಾಪ್‌ಸಿಂಹ ಹೇಳಿದರು.

ನಗರದ ಚಾಮರಾಜಪುರಂನ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು ಮತ್ತು ಬಿಜೆಪಿ ಮುಖಂಡರೊಮದಿಗೆ ವಿಜಯೋತ್ಸವ ಆಚರಿಸುವ ವೇಳೆ ಮಾತನಾಡಿದರು.

ರಾಜ್ಯದಲ್ಲಿ ಬಿಜೆಪಿ 25 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಇನ್ನು ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಹಾಗೂ ಹಿರಿಯರಾದ ವಿ.ಶ್ರೀನಿವಾಸಪ್ರಸಾದ್‌ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಪಕ್ಷೇತರಕ್ಕೆ ತಲಾ ಒಂದೊಂದು ಸ್ಥಾನ ಲಭಿಸಿದೆ. ಮೋದಿ ಅವರು ಮೈಸೂರಿಗೆ ಬಂದಾಗ ಮಹಾರಾಜ ಮೈದಾನದಲ್ಲಿ ಸುಮಲತಾ ಅಂಬರೀಷ್‌ ಅವರನ್ನು ಗೆಲ್ಲಿಸಿ ಎಂದು ಮಂಡ್ಯ ಜನರಲ್ಲಿ ಮನವಿ ಮಾಡಿಕೊಂಡಿದ್ದರು. ಈಗ ಮಂಡ್ಯ ಜನತೆ ಸುಮಲತಾ ಅವರನ್ನು ಗೆಲ್ಲಿಸಿದ್ದಾರೆಂದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತು ಮಾತಿಗೂ ಪ್ರಧಾನಿ ಮೋದಿ ಹಾಗೂ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರ ಬಗ್ಗೆ ತುಚ್ಯವಾಗಿ ಮಾತನಾಡುತ್ತಿದ್ದರು. ಇಂದು ಕರ್ನಾಟಕದ ಜನತೆ ಅವರಿಗೆ ದಿಟ್ಟ ಉತ್ತರ ನೀಡಿದ್ದಾರೆ. ಇನ್ನು ಮುಂದೆ ಮೈಸೂರು-ಕೊಡಗು ಹಾಗೂ ಚಾಮರಾಜನಗರದಲ್ಲಿ ಮೋದಿ ಆಡಳಿತ ನಡೆಯುತ್ತದೆ ಎಂದು ಹೇಳಿದರು.

ನಾನು ರಾಜಕಾರಣಿಯಾದಾಗ ದ್ವೇಷಿಸಿದಿರಿ. ಇದರಲ್ಲಿ ತನ್ನ ತಪ್ಪುಗಳಿವೆ. ಆ ತಪ್ಪುಗಳನ್ನು ತಿದ್ದುಕೊಳ್ಳಬೇಕಿತ್ತು. ಕಾರ್ಯಕರ್ತರೊಂದಿಗೆ ಕಟುವಾಗಿ, ಒರಟಾಗಿ ವರ್ತಿಸಿದ್ದೇನೆ. ಇನ್ನುಮುಂದೆ ಈ ರೀತಿ ಮಾಡುವುದಿಲ್ಲ. ಪಕ್ಷದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸೋಣ ಎಂದರು.

2024ರ ಹೊತ್ತಿಗೆ ಮೈಸೂರು ಬೆಂಗಳೂರು ದಶಪಥ ಹಾಗೂ ಮೈಸೂರು ಮಡಿಕೇರಿ ಹೆದ್ದಾರಿ ಹಾಗೂ ಮೈಸೂರಿಗೆ ಹೊಸ ಸ್ಯಾಟಲೈಟ್‌ ರೈಲು ನಿಲ್ದಾಣ, ಏರ್‌ಪೋರ್ಟ್‌ ಅಭಿವೃದ್ಧಿಯನ್ನು ಸಾಧಿಸಲಾಗುವುದು. ಮೈಸೂರಿನಲ್ಲಿ ಮೋದಿ ಹೆಸರು ಚಿರಸ್ಥಾಯಿಯಾಗಿ ಉಳಿದುಕೊಳ್ಳುವಂತೆ ಮಾಡುತ್ತೇವೆಂದು ಭರವಸೆ ನೀಡಿದರು.

ಟಾಪ್ ನ್ಯೂಸ್

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.