ಹೆಗಡೆ ಆದರ್ಶ ಮಾರ್ಗವೇ ನನ್ನ ರಾಜಕೀಯ ಶ್ರೀರಕ್ಷೆ: ಜಿಗಜಿಣಗಿ

Team Udayavani, May 24, 2019, 4:13 PM IST

Udayavani Kannada Newspaper

ವಿಜಯಪುರ: ನನ್ನ ರಾಜಕೀಯ ಗುರುಗಳಾದ ರಾಮಕೃಷ್ಣ ಹೆಗಡೆ ಅವರ
ರಾಜಕೀಯ ಗರಡಿಯಲ್ಲಿ ಬೆಳೆದ ನಾನು, ಜಾತಿ ರಹಿತ ರಾಜಕೀಯ ಮಾಡುವುದಕ್ಕೆ ಹಾಕಿಕೊಟ್ಟಿರುವ ಸಭ್ಯ ರಾಜಕೀಯವೇ ನನ್ನ ಶ್ರೀರಕ್ಷೆ. ಅವರ ಆದರ್ಶ ರಾಜಕೀಯ ಮಾರ್ಗದಲ್ಲೇ ನಾನು ನಡೆಯುತ್ತಿರುವುದೇ ನನ್ನ ವಿಜಯಕ್ಕೆ ಕಾರಣವಾಗಿದೆ. ಇದು ಪರಿಶಿಷ್ಟ ಜಾತಿಗೆ ಮೀಸಲಾಗಿರುವ ವಿಜಯಪುರ ಲೋಕಸಭೆ ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ವಿಜಯ ಸಾಧಿಸಿ, ಹ್ಯಾಟ್ರಿಕ್‌ ಬಾರಿಸಿರುವ ಕೇಂದ್ರ ಸಚಿವ ರಮೇಶ ಜಿಗಜಿಣಗಿ ಅವರ ಪ್ರತಿಕ್ರಿಯೆ.

ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಮಾಡಿರುವ ಸಾಧನೆಗಳು,
ದೇಶವನ್ನು ಬಲಿಷ್ಠಗೊಳಿಸಲು ಮುಂದಾದ ಕ್ರಮಗಳು, ರಾಜಕೀಯದ ಆಧಿಕಾರದಲ್ಲಿದ್ದರೂ ಸಭ್ಯತೆ ಮೆರೆಯದ ನಾನು ಜನತೆಯ ಮಟ್ಟಿಗೆ ಸಾಮಾನ್ಯ
ವ್ಯಕ್ತಿಯಂತೆ ಇದ್ದೇನೆ.

ರಾಜ್ಯ ರಾಜಕಾರಣದಿಂದ ರಾಷ್ಟ್ರ ರಾಜಕಾರಣಕ್ಕಾಗಿ ಚಿಕ್ಕೋಡಿ ಕ್ಷೇತ್ರಕ್ಕೆ ಕಾಲಿಟ್ಟ ನನಗೆ ಅಲ್ಲಿನ ಜನತೆ ಜನತೆ ಬುನಾದಿ ಹಾಕಿದರು. ನಂತರ ತವರು
ಕ್ಷೇತ್ರ ವಿಜಯಪುರ ಜಿಲ್ಲೆಯ ಮತದಾರ ನನ್ನ ರಾಜಕೀಯ ಜೀವನದ ಬೃಹತ್‌
ವ್ಯಕ್ತಿತ್ವ ರೂಪಿಸುವಲ್ಲಿ ನೆರವಾದರು. ಹೀಗಾಗಿ ನನ್ನ ಗೆಲುವು ಜಿಲ್ಲೆಯ ಜನತೆಯ ಗೆಲುವು, ಕಾರ್ಯಕರ್ತರ ಗೆಲುವು ಎಂದು ಸಮರ್ಪಣಾ ಭಾವ ತೋರಿದರು. ದೇಶವನ್ನು ಅತ್ಯಂತ ಸಮರ್ಥವಾಗಿ ಮುನ್ನಡೆಸಿ ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ವಿಶಿಷ್ಟ ಗೌರವ ತಂದುಕೊಟ್ಟವರು ಪ್ರಧಾನಿ ನರೇಂದ್ರ ಮೋದಿ. ದೇಶ ಶುದ್ಧ ಹಸ್ತ ಪ್ರಧಾನಿಯನ್ನು ಚೋರ್‌ ಎಂದು ಜರಿದ ಕಾಂಗ್ರೆಸ್‌ ಪಕ್ಷಕ್ಕೆ ದೇಶದ ಮತದಾರ ತಕ್ಕ ಪಾಠ ಕಲಿಸಿದ್ದಾನೆ. ಮೋದಿ ಅಲೆಯಲ್ಲಿ ಕಾಂಗ್ರೆಸ್‌ ಮಣ್ಣು ಮುಕ್ಕುವ ಮೂಲಕ ಇದೀಗ ಕಾಂಗ್ರೆಸ್‌ ಮುಕ್ತ ಭಾರತಕ್ಕೆ ಮತದಾರ ಜನಾದೇಶ ನೀಡಿದ್ದಾನೆ. ಸೋಲಿನ ಸಂಕಷ್ಟ ಅರಗಿಸಿಕೊಳ್ಳಲಾಗದೇ ಮತಯಂತ್ರದ ಲೋಪ-ದೋಷ ಎಂದೆಲ್ಲ ದೂರಲು ಮುಂದಾಗಿದ್ದಾರೆ ಎಂದು ಟೀಕಿಸಿದರು.

ದೇಶದ ಮಹಾ ಜನತೆ ಜೆಡಿಎಸ್‌ ವರಿಷ್ಠ-ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ, ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ರಾಹುಲ್‌ ಗಾಂಧಿ, ಲೋಕಸಭೆಯ ಕಾಂಗ್ರೆಸ್‌ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಸತತ 6 ಬಾರಿ ಸಂಸದರಾಗಿದ್ದ ಕೆ.ಎಚ್‌. ಮುನಿಯಪ್ಪ, ಕೇಂದ್ರ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ವೀರಪ್ಪ ಮೋಯ್ಲಿ ಅವರಂಥ ನಾಯಕರನ್ನೆಲ್ಲ ಈ ಚುನಾವಣೆಯಲ್ಲಿ ಮನೆಗೆ ಕಳಿಸುವ ಮೂಲಕ ದೇಶಕ್ಕೆ ಅಭಿವೃದ್ಧಿ ಬೇಕು ಎಂಬುದನ್ನು ಮತ್ತೊಮ್ಮೆ ತೀರ್ಪು ನೀಡಿದ್ದಾರೆ ಎಂದರು.

ಕಲಬುರಗಿ ಕ್ಷೇತ್ರದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ನಿರಂತರ ಬೆಂಬಲಿಸುತ್ತ ಬಂದಿದ್ದ ಕಬ್ಬಲಿಗರು, ಬಂಜಾರಾ ಹಾಗೂ ಮುಸ್ಲಿಂ ಸಮುದಾಯ ಕೈ ಬಿಡುವ ಮೂಲಕ ತಕ್ಕ ಪಾಠ ಕಲಿಸಿದೆ. ತಮ್ಮ ಸಮುದಾಯವನ್ನು ಎಸ್ಟಿ ಮೀಸಲು ಸೌಲಭ್ಯ ಕಲ್ಪಿಸದ್ದಕ್ಕೆ ಕಬ್ಬಲಿಗರು, ಖಮರುಲ್‌ ಇಸ್ಲಾಂ ಅವರನ್ನು ಸಚಿವರನ್ನಾಗಿ ಮಾಡದ ಕಾರಣ ಅಸಮಧಾನಗೊಂಡ ಮುಸ್ಲಿಂ ಸಮುದಾಯ ಹಾಗೂ ಈ ಬಾರಿ ಬಂಜರಾ ಸಮುದಾಯದ ಪ್ರಭಲ ಅಭ್ಯರ್ಥಿ ಕಣಕ್ಕೆ ಇಳಿದ ಕಾರಣ ಲಂಬಾಣಿಗರು ಕೈಕೊಟ್ಟರು. ಈ ಕಾರಣಗಳಿಂದ ಖರ್ಗೆ ಅವರು ಸೋಲುವ ದುಸ್ಥಿತಿ ಬಂತು ಎಂದು ವಿಶ್ಲೇಷಿದರು.

ಇನ್ನು ಮುಖ್ಯಮಂತ್ರಿ ಅಧಿಕಾರದ ಆಸೆಗೆ ಕಾಂಗ್ರೆಸ್‌ ಜೊತೆ ಕೈ ಜೋಡಿಸಿದ ಜೆಡಿಎಸ್‌ ನಾಯಕರು ಹಾಗೂ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಮಣ್ಣು
ಮುಕ್ಕಿದರು. ಈ ಹಂತದಲ್ಲಿ ರಾಜ್ಯದ ದುರ್ಬಲ ಸರ್ಕಾರವನ್ನು ಯಾರೂ ಪತನಾ ಮಾಡಲು ಯತ್ನಿಸಬೇಕಿಲ್ಲ. ಈ ಸರ್ಕಾರ ತಾನೇ ತಾನಾಗಿ ಬೀಳಲಿರುವ ಕಾರಣ ಇದನ್ನು ಸೋಲಿಸಲು ಯಾರೂ ಪ್ರಯತ್ನಿಸಬೇಕಿಲ್ಲ ಎಂದರು. ಈಗಾಗಲೇ ನಾನು ರಾಜ್ಯದಲ್ಲಿ ಹಾಗೂ ಕೇಂದ್ರದಲ್ಲಿ ಸಚಿವನಾಗಿ ಸೇವೆ ಸಲ್ಲಿಸಿರುವ ಕಾರಣ ಮತ್ತೆ ಸಚಿವನನ್ನಾಗಿ ಮಾಡಿ ಎಂದು ಕೇಳುವುದಿಲ್ಲ. ಯಾರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಪಕ್ಷದ ನಾಯಕರು ನಿರ್ಧರಿಸಲಿದ್ದಾರೆ. ಹೀಗಾಗಿ ಮತ್ತೆ ಮಂತ್ರಿ ಆಗುವ ಆಸೆ ನನಗಿಲ್ಲ. ಪಕ್ಷ ನನಗೆ ಎಲ್ಲವನ್ನೂ ನೀಡಿದ್ದು, ಸಚಿವ ಸ್ಥಾನ ಕೊಡದಿದ್ದರೆ ಬೇಸರವೂ ಇಲ್ಲ ಎಂದು ಪ್ರತಿಕ್ರಿಯಿಸಿದರು.

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.