ಮತಯಂತ್ರಗಳಿಗೆ ಇನ್ನೂ 45 ದಿನ ಭದ್ರತೆ !

Team Udayavani, May 25, 2019, 6:00 AM IST

2405MLR101-STRONGROOM

ಮಂಗಳೂರು: ದೇಶದ ಎಲ್ಲ ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಮೇ 23ರಂದು ಪೂರ್ಣಗೊಂಡು ಫಲಿತಾಂಶ ಹೊರ ಪ್ರಕಟವಾಗಿದ್ದರೂ ಮತಯಂತ್ರಗಳಿಗೆ ಮುಂದಿನ 45 ದಿನಗಳ ಕಾಲ ವಿಶೇಷ ಭದ್ರತೆ ಮುಂದುವರಿಯಲಿದೆ.

ಫಲಿತಾಂಶದ ಬಗ್ಗೆ ರಾಜಕೀಯ ಪಕ್ಷಗಳು 45 ದಿನಗಳೊಳಗೆ ನ್ಯಾಯಾಲಯಕ್ಕೆ ಆಕ್ಷೇಪಣೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಆ ಬಳಿಕ ಆಕ್ಷೇಪಣೆಗೆ ಅವಕಾಶವಿರುವುದಿಲ್ಲ. ಒಂದುವೇಳೆ 45 ದಿನದೊಳಗೆ ನ್ಯಾಯಾಲಯಕ್ಕೆ ಯಾರಾದರೂ ಆಕ್ಷೇಪಣೆ ಸಲ್ಲಿಸಿ, ನ್ಯಾಯಾಲಯವು ವಿಚಾರಣೆಯನ್ನು ಕೈಗೆತ್ತಿಕೊಂಡರೆ ಆ ಕ್ಷಣದಿಂದ ಆ ಲೋಕಸಭಾ ಕ್ಷೇತ್ರದ ಮತಯಂತ್ರಗಳನ್ನು ಜಿಲ್ಲಾಡಳಿತವು ಅತ್ಯಂತ ಭದ್ರತೆಯಿಂದ ನೋಡಿಕೊಳ್ಳಬೇಕು. ವಿಚಾರಣೆ ಪೂರ್ಣಗೊಳ್ಳುವವರೆಗೆ ಆ ಯಂತ್ರಗಳ ಮತಗಳನ್ನು ಅಳಿಸುವುದು ಅಥವಾ ಇತರ ಚುನಾವಣೆಗೆ ಬಳಸುವಂತಿಲ್ಲ. ಒಂದುವೇಳೆ ನ್ಯಾಯಾಲಯವು ಮರು ಎಣಿಕೆ ಮಾಡಲು ಸೂಚಿಸಿದರೆ ಅದಕ್ಕೆ ಕ್ರಮ ಕೈಗೊಳ್ಳಬೇಕಾಗಿದೆ.

ದ.ಕ. ಲೋಕಸಭಾ ಕ್ಷೇತ್ರದ ಮತ ಎಣಿಕೆ ಗುರುವಾರ ಸಂಜೆ ವೇಳೆಗೆ ಸುರತ್ಕಲ್‌ನ ಎನ್‌ಐಟಿಕೆಯಲ್ಲಿ ಪೂರ್ಣಗೊಂಡಿತ್ತು. ಫಲಿತಾಂಶ ಘೋಷಣೆಯಾದ ಬಳಿಕ ಮತ ಯಂತ್ರಗಳನ್ನು ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿರುವ (ಹಳೆಯ ಕಟ್ಟಡ) ಸ್ಟ್ರಾಂಗ್‌ರೂಂನಲ್ಲಿಇರಿಸಲಾಗಿತ್ತು. ಜಿಪಿಎಸ್‌ ಹೊಂದಿರುವ ವಾಹನ ಹಾಗೂ ಪೊಲೀಸ್‌ ಭದ್ರತೆಯ ಜತೆಗೆ ಲಾರಿಗಳ ಮೂಲಕಮತಯಂತ್ರಗಳನ್ನು ತರಲಾಗಿತ್ತು. ಕಂಟ್ರೋಲಿಂಗ್‌ ಯುನಿಟ್‌, ಬ್ಯಾಲೆಟ್‌ಯುನಿಟ್‌ ಹಾಗೂ ವಿವಿ ಪ್ಯಾಟ್‌ ಸೇರಿ
ದಂತೆ ಸುಮಾರು 7,000 ಮತಯಂತ್ರಗಳು ಇಲ್ಲಿವೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಸ್ಟ್ರಾಂಗ್‌ ರೂಂ ವ್ಯಾಪ್ತಿಯಲ್ಲಿ ಮುಂದಿನ ದಿನದಲ್ಲಿ ಬಿಗಿಭದ್ರತೆ ಇರುತ್ತದೆ. ಕೊಠಡಿ ಸುತ್ತ ಸಿಸಿ ಕೆಮರಾ ಅಳವಡಿಸಲಾಗಿದೆ. ವಿಧಾನಸಭಾವಾರು ಮತಯಂತ್ರ ಗಳನ್ನು ಜೋಡಿಸಿಡಲಾಗಿದ್ದು, 24 ಗಂಟೆಯೂ ಬಿಗಿ ಪೊಲೀಸ್‌ ಭದ್ರತೆ ಇರಲಿದೆ. ಯಾವುದೇ ಕಾರಣಕ್ಕೂ ಸ್ಟ್ರಾಂಗ್‌ ರೂಂ ತೆರೆಯುವಂತಿಲ್ಲ. ತೆರೆಯಲೇ ಬೇಕಾದರೆ ಎಲ್ಲ ರಾಜಕೀಯ ಪಕ್ಷಗಳವರ ಗಮನಕ್ಕೆ ತರಲಾಗುತ್ತದೆ.
ವಿಧಾನಸಭೆ ಹಾಗೂ ಲೋಕಸಭೆಗೆ ಬಳಸುವ ಮತಯಂತ್ರಗಳನ್ನು ಸ್ಥಳೀಯ ಚುನಾವಣೆಗೆ ಬಳಸುವುದಿಲ್ಲ. ಮತ ಎಣಿಕೆ ಆದ ಬಳಿಕ ನ್ಯಾಯಾ ಲಯದಲ್ಲಿ ಆಕ್ಷೇಪಣೆ ಇಲ್ಲದ ಮತಯಂತ್ರಗಳನ್ನು ಮತ್ತೂಂದು ಚುನಾವಣೆಗೆ ಬಳಸಲಾಗುತ್ತದೆ.

ಮಂಗಳೂರು ದ. ಇವಿಎಂಗೆ ಈಗಲೂ ಭದ್ರತೆ!
ಕಳೆದ ವರ್ಷ ನಡೆದ ಮಂಗಳೂರು ಉತ್ತರ ಹಾಗೂ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತ ಎಣಿಕೆಯನ್ನು ಪ್ರಶ್ನಿಸಿ ಕಾಂಗ್ರೆಸ್‌ ಅಭ್ಯರ್ಥಿಗಳಾದ ಮೊದಿನ್‌ ಬಾವಾ ಹಾಗೂ ಜೆ.ಆರ್‌.ಲೋಬೋ ಅವರು ನ್ಯಾಯಾಲಯದ ಮೊರೆಹೋಗಿದ್ದರು. ಹೀಗಾಗಿ ಮತ ಎಣಿಕೆಯಾದ ಅನಂತರವೂ ಮತಯಂತ್ರಗಳನ್ನು ಬಿಗಿ ಭದ್ರತೆಯಲ್ಲಿ ಇಡಲಾಗಿತ್ತು. ಈ ಪೈಕಿ ಮೊದಿನ್‌ ಬಾವಾ ಅವರ ಪ್ರಕರಣ ಇತ್ಯರ್ಥವಾಗಿದ್ದರೆ, ಜೆ.ಆರ್‌. ಲೋಬೋ ಅವರ ಪ್ರಕರಣ ವಿಚಾರಣೆಯ ಹಂತದಲ್ಲಿದೆ. ಈ ಕಾರಣಕ್ಕಾಗಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಎಲ್ಲ ಮತಯಂತ್ರಗಳನ್ನು ಈಗಲೂ ಮಂಗಳೂರಿನಲ್ಲಿ ಬಿಗಿಭದ್ರತೆಯಲ್ಲಿ ಕಾಯಲಾಗುತ್ತಿದೆ.

“ಆಕ್ಷೇಪಣೆ ಇಲ್ಲವಾದರೆ ಮತ ಯಂತ್ರ ಬಳಕೆ’
ಮತ ಎಣಿಕೆ ನಡೆದ ಬಳಿಕ 45 ದಿನಗಳವರೆಗೆ ಎಲ್ಲ ಮತಯಂತ್ರಗಳಿಗೆ ಬಿಗಿಭದ್ರತೆ ನೀಡಲಾಗುತ್ತದೆ. ಅಲ್ಲಿಯವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಒಂದು ವೇಳೆ ಯಾರಿಂದಲೂ ಆಕ್ಷೇಪಣೆ ಬಾರದಿದ್ದರೆ ಅಂತಹ ಮತಯಂತ್ರಗಳನ್ನು ಇತರ ಚುನಾವಣೆಗೆ ಬಳಸಲಾಗುತ್ತದೆ. ಆಕ್ಷೇಪಣೆಯಿದ್ದರೆ ನ್ಯಾಯಾಲಯದ ಮಾರ್ಗದರ್ಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ.
– ಶಶಿಕಾಂತ ಸೆಂಥಿಲ್‌, ದ.ಕ. ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.