ಮ್ಯಾನ್‌ ಆಫ್ ದಿ ಮ್ಯಾಚ್‌ ಗೋಸ್‌ ಟು…


Team Udayavani, May 25, 2019, 5:00 AM IST

man-of

ಪ್ರಧಾನಿ ನರೇಂದ್ರ ಮೋದಿ ಭಾರತದ ಜನಮೆಚ್ಚಿದ ನಾಯಕ ಎನ್ನುವುದರಲ್ಲಿ ಎರಡು ಮಾತಿಲ್ಲ. ಆದರೆ, ಆ ವೈಯಕ್ತಿಕ ವರ್ಚಸ್ಸು ಹಾಗೂ ಜನಪ್ರಿಯತೆಯನ್ನು ರಾಜಕೀಯ ಜಯಭೇರಿಯಾಗಿ ಪರಿವರ್ತಿಸುವಲ್ಲಿ ಯಶಸ್ವಿಯಾಗಿದ್ದು ಕಾರ್ಯತಂತ್ರ ನಿಪುಣ ಅಮಿತ್‌ ಶಾ. ಬಿಜೆಪಿಯ ಅಮೋಘ ಗೆಲುವಿನ ಹಿಂದೆ ಅಮಿತ್‌ ಶಾ ರೂಪಿಸಿದ ತಂತ್ರಗಾರಿಕೆಯೇ ಪ್ರಮುಖ ಪಾತ್ರ ವಹಿಸಿದೆ ಎನ್ನುವುದು ಸತ್ಯ.

2014ರ ಲೋಕಸಭಾ ಚುನಾವಣೆಯಲ್ಲಿ ಯಶಸ್ಸು ಗಳಿಸಿದ ಸಂದರ್ಭದಲ್ಲಿ ಮೋದಿಯವರಿಂದಲೇ “ಮ್ಯಾನ್‌ ಆಫ್ ದಿ ಮ್ಯಾಚ್‌’ ಎಂದು ಹೊಗಳಿಸಿಕೊಂಡಿದ್ದ ಶಾ ಅವರು ಸಂಭ್ರಮಾಚರಣೆಯ ಮನಸ್ಥಿತಿಯಲ್ಲಿರಲಿಲ್ಲ. ಅವರ ದೃಷ್ಟಿ ಆಗಲೇ 2019ರ ಲೋಕಸಭಾ ಚುನಾವಣೆಯ ಮೇಲೆ ಹರಿದಾಗಿತ್ತು¤. ಉತ್ತರ, ಪಶ್ಚಿಮ ಮತ್ತು ಮಧ್ಯಭಾಗದ ರಾಜ್ಯಗಳಲ್ಲಿ ಬಿಜೆಪಿ ಸಾಕಷ್ಟು ಸೀಟುಗಳನ್ನು ಪಡೆದುಕೊಳ್ಳಲು ಕಷ್ಟವಾಗಬಹುದು ಎನ್ನುವುದನ್ನು ಮೊದಲೇ ಊಹಿಸಿದ್ದ ಅಮಿತ್‌ ಶಾ, ಈ ಕೊರತೆಯನ್ನು ಮಿಕ್ಕ ರಾಜ್ಯಗಳಲ್ಲಿ ಸರಿದೂಗಿಸಲು ಮುಂದಾಗಿದ್ದು ಅವರ ದೂರಾಲೋಚನೆಗೆ ಕೈಗನ್ನಡಿ.

ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿ ಅಲೆಯ ಹೊರತಾಗಿಯೂ ಬಿಜೆಪಿ ಕಳೆದುಕೊಂಡಿದ್ದ 120 ಸೀಟುಗಳನ್ನು ವಶಪಡಿಸಿಕೊಳ್ಳಬೇಕೆನ್ನುವುದು ಶಾ ಅವರ ಒತ್ತಾಸೆಯಾಗಿತ್ತು. ಕಡೆಗೆ ಬಿಜೆಪಿ 120ರಲ್ಲಿ 80 ಕ್ಷೇತ್ರಗಳತ್ತ ಗಮನ ಕೇಂದ್ರೀಕರಿಸಿತ್ತು. ಅದರಲ್ಲಿ ಅರ್ಧದಷ್ಟು ಕ್ಷೇತ್ರಗಳನ್ನು ಈ ಬಾರಿ ಬಿಜೆಪಿ ಗೆದ್ದುಕೊಂಡಿದೆ. ಪಶ್ಚಿಮ ಬಂಗಾಳ, ಒಡಿಶಾ, ಕೇರಳ, ತೆಲಂಗಾಣ ಮುಂತಾದ ರಾಜ್ಯಗಳಲ್ಲಿ ಮತದಾರರನ್ನು ಸೆಳೆಯಲು ನಡೆಸಿದ ಪ್ರಯತ್ನ ಒಂದೆರಡಲ್ಲ. ಮಮತಾ ಬ್ಯಾನರ್ಜಿಯ ಭದ್ರಕೋಟೆ ಪಶ್ಚಿಮ ಬಂಗಾಳಕ್ಕೆ ಶಾ 88 ಬಾರಿ ಭೇಟಿ ನೀಡಿದ್ದು ಅದಕ್ಕೊಂದು ಉದಾಹರಣೆ.

ಹಾಗೆಂದು ಬಿಜೆಪಿ ಪ್ರಾಬಲ್ಯವಿರುವ ರಾಜ್ಯಗಳನ್ನು ಎಂದಿಗೂ ಅವರು ಕಡೆಗಣಿಸಲಿಲ್ಲ. ಇತರೆ ಪಕ್ಷಗಳ ಜೊತೆ ಕೈಜೋಡಿಸುವ ಸಂದರ್ಭ ಬಂದಾಗಲೆಲ್ಲಾ ಚಾಣಾಕ್ಷತನ ಮೆರೆದಿದ್ದಾರೆ. ಶಿವಸೇನೆ ಅಥವಾ ನಿತೀಶ್‌ ಕುಮಾರ್‌ ಜತೆಗಿದ್ದ ವೈಮನಸ್ಯ ದೂರ ಮಾಡಿಕೊಂಡಿದ್ದಿರಬಹುದು. ಅವೆಲ್ಲವುಗಳ ಪರಿಣಾಮ ಈ ಬಾರಿಯ ಫ‌ಲಿತಾಂಶದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ. ಅಮಿತ್‌ ಶಾ ಅವರು ಚುನಾವಣೆಯ ಸಮಯದಲ್ಲಿ ಒಟ್ಟು 1.50 ಲಕ್ಷ ಕಿ.ಮೀ. ಸಂಚರಿಸಿದ್ದು, 161 ಸಾರ್ವಜನಿಕ ರ್ಯಾಲಿಗಳನ್ನು ನಡೆಸಿದ್ದಾರಂತೆ.

ಟಾಪ್ ನ್ಯೂಸ್

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2011

ಬೆಂಗಳೂರಿನಲ್ಲೊಂದು ಟೈ ರೋಮಾಂಚನ

rajani-kanth

ಮೋದಿಯೂ ವರ್ಚಸ್ವಿ ನಾಯಕ

smruthi-irani

ಬರಿಗಾಲಲ್ಲೇ ವಿನಾಯಕ ದೇಗುಲಕ್ಕೆ ತೆರಳಿದ್ದ ಸ್ಮತಿ!

Asshivrda

ಮಾಜಿ ರಾಷ್ಟ್ರಪತಿ ಪ್ರಣಬ್ ರ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ

Lalu-head-scratch-700

ರಾಜೀನಾಮೆ ನೀಡುವ ರಾಹುಲ್‌ ನಿರ್ಧಾರ ಆತ್ಮಾಹುತಿಯದ್ದು : ಲಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.