ಗೌಡರ ಭೇಟಿ ಮಾಡಿದ ಮಧು: ಸೋಲಿನ ಬಗ್ಗೆ ಚರ್ಚೆ
Team Udayavani, May 26, 2019, 3:05 AM IST
ಬೆಂಗಳೂರು: ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಧು ಬಂಗಾರಪ್ಪ ಅವರು ಶನಿವಾರ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಚರ್ಚಿಸಿದರು.
ಲೋಕಸಭೆ ಚುನಾವಣೆಯಲ್ಲಿನ ಸೋಲಿನ ಬಗ್ಗೆ ಹಾಗೂ ಸೋಲಿನ ಅಂತರ ಹೆಚ್ಚಾಗಲು ಕಾರಣವಾದ ಅಂಶಗಳ ಬಗ್ಗೆ ಈ ಸಂದರ್ಭದಲ್ಲಿ ಚರ್ಚಿಸಲಾಯಿತು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಹ ಈ ವೇಳೆ ಉಪಸ್ಥಿತರಿದ್ದರು. ಮಧು ಬಂಗಾರಪ್ಪ ಅವರ ಸೋಲಿನ ಬಗ್ಗೆ ದೇವೇಗೌಡರು ಅಚ್ಚರಿ ವ್ಯಕ್ತಪಡಿಸಿದರು.
ನಾಲ್ಕು ಸ್ಥಾನವನ್ನಾದರೂ ಜೆಡಿಎಸ್ ಗೆಲ್ಲಲೇ ಬೇಕಿತ್ತು. ಶಿವಮೊಗ್ಗದಲ್ಲಿ ಸಹ ಗೆಲ್ಲಬಹುದು ಎಂದು ಭರವಸೆ ಹೊಂದಿದ್ದೆ. ಸೋಲಿನ ಬಗ್ಗೆ ತಲೆ ಕೆಡಿಸಿಕೊಳ್ಳದೆ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಿ. ನಿಮಗೆ ಮುಂದೆ ಉತ್ತಮ ಭವಿಷ್ಯವಿದೆ ಎಂದು ದೇವೇಗೌಡರು ಮಧು ಬಂಗಾರಪ್ಪಗೆ ತಿಳಿಸಿದರು ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ