ಶಿಕ್ಷಕರು, ಕೊಠಡಿ, ಪೀಠೊಪಕರಣಗಳ ಕೊರತೆಯ ಆತಂಕ

ವಳಕಾಡು ಸ.ಮಾ.ಹಿ.ಪ್ರಾ.ಶಾಲೆ:1ನೇ ತರಗತಿಯಿಂದ ಆಂಗ್ಲಮಾಧ್ಯಮ

Team Udayavani, May 28, 2019, 6:10 AM IST

korateya-atanka

ಉಡುಪಿ: ಈ ಶೈಕ್ಷಣಿಕ ವರ್ಷದಲ್ಲಿ ಒಂದನೇ ತರಗತಿಯಿಂದಲೇ ಆಂಗ್ಲಮಾಧ್ಯಮ ಶಿಕ್ಷಣ ಆರಂಭವಾಗಲಿರುವ ಶಾಲೆಗಳಲ್ಲಿ ಉಡುಪಿಯ ವಳಕಾಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕೂಡ ಒಂದು. ಶೈಕ್ಷಣಿಕ ಗುಣಮಟ್ಟ, 6ನೇ ತರಗತಿಯಿಂದಲೇ ಆಂಗ್ಲಮಾಧ್ಯಮ ಮೊದಲಾದವುಗಳಿಂದ ಗಮನ ಸೆಳೆದಿರುವ ಈ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಈ ವರ್ಷದಿಂದ ಒಂದನೇ ತರಗತಿಯಿಂದಲೇ ಆಂಗ್ಲಮಾಧ್ಯಮ ಶಿಕ್ಷಣ ಆರಂಭವಾಗಲಿದೆ. ಆದರೆ ಶಾಲೆಯಲ್ಲಿ ಶಿಕ್ಷಕರು, ಕೊಠಡಿ ಮತ್ತು ಪೀಠೊಪಕರಣದ ಕೊರತೆ ಈಗಾಗಲೇ ಇದೆ. ಇದು ಈ ವರ್ಷ ಹೆಚ್ಚಾಗಬಹುದು ಎಂಬ ಆತಂಕವಿದೆ.

ತುಂಬಿ ತುಳುಕುವ ಶಾಲೆ
ವಳಕಾಡು ಸ.ಹಿ.ಪ್ರಾ.ಶಾಲೆಯಲ್ಲಿ ಕಳೆದ ವರ್ಷ ಕೂಡ 647 ಮಂದಿ ವಿದ್ಯಾರ್ಥಿಗಳಿದ್ದರು. ಒಟ್ಟು 17 ವಿಭಾಗಗಳಲ್ಲಿ ತರಗತಿಗಳು ನಡೆದಿವೆ. ಕಳೆದ ವರ್ಷ ಒಂದನೇ ತರಗತಿಗೆ(ಕನ್ನಡ ಮಾಧ್ಯಮ) ಒಟ್ಟು 60 ಮಕ್ಕಳು ದಾಖಲಾಗಿದ್ದರು. ಎ, ಬಿ,ಸಿ ಮತ್ತು ಡಿ ಎಂದು ನಾಲ್ಕು ವಿಭಾಗ ಮಾಡಲಾಗಿತ್ತು. ಈ ವರ್ಷ ಮತ್ತಷ್ಟು ಹೆಚ್ಚು ಮಕ್ಕಳು ದಾಖಲಾತಿ ಪಡೆಯುವ ನಿರೀಕ್ಷೆ ಇದೆ.

ಮೇ 27ರವರೆಗೆ 50ಕ್ಕೂ ಅಧಿಕ ಮಕ್ಕಳು ಒಂದನೇ ತರಗತಿಗೆ ದಾಖಲಾತಿ ಪಡೆದಿದ್ದು ಇದರಲ್ಲಿ ಹೆಚ್ಚಿನ ಮಕ್ಕಳ ಹೆತ್ತವರು ಆಂಗ್ಲ ಮಾಧ್ಯಮವನ್ನೇ ಆಯ್ಕೆ ಮಾಡಿದ್ದಾರೆ. ಒಂದನೇ ತರಗತಿಗೆ ಮಾತ್ರವಲ್ಲದೆ ನಾನಾ ಕಾರಣಗಳಿಂದ ಮೇಲಿನ ತರಗತಿಗಳಿಗೆ ಬೇರೆ ಶಾಲೆಗಳಿಂದ ಬಂದು ಈ ಶಾಲೆಗೆ ಈಗಾಗಲೇ 70 ಮಂದಿ ಸೇರ್ಪಡೆಯಾಗಿದ್ದಾರೆ. ಕಳೆದ ವರ್ಷ ಒಂದನೇ ತರಗತಿ(60) ಮತ್ತು ಇತರ ತರಗತಿಗಳು ಸೇರಿದಂತೆ ಶಾಲೆಗೆ 200 ಮಂದಿ ಮಕ್ಕಳು ದಾಖಲಾಗಿದ್ದರು. ಈ ವರ್ಷ ಆಂಗ್ಲಮಾಧ್ಯಮ ಬೋಧನೆಗಾಗಿ ಇಬ್ಬರು ಶಿಕ್ಷಕರಿಗೆ ತರಬೇತಿ ನಡೆದಿದೆ.

ಶಿಕ್ಷಕರ ಕೊರತೆ
ಪ್ರಸ್ತುತ ಇಲ್ಲಿ 11 ಮಂದಿ ಮಾತ್ರ ಖಾಯಂ ಶಿಕ್ಷಕರಿದ್ದಾರೆ. ವಿದ್ಯಾರ್ಥಿಗಳ ಅನುಪಾತ ಪ್ರಕಾರ 20 ಮಂದಿ ಇರಬೇಕಿತ್ತು. ಕಳೆದ ವರ್ಷ 5 ಮಂದಿ ಅತಿಥಿ ಶಿಕ್ಷಕರು, ಕಂಪ್ಯೂಟರ್‌ ಹಾಗೂ ಗೌರವ ಶಿಕ್ಷಕರ ಸೇವೆಯೊಂದಿಗೆ ತರಗತಿಗಳು ನಡೆದಿದ್ದವು. ಇಲಾಖೆ ಸಹಕರಿಸಿತ್ತು. ಆದರೆ ಈ ಬಾರಿ ಹೇಗೆಂದು ಗೊತ್ತಿಲ್ಲ. ಇನ್ನೂ 9 ಮಂದಿ ಶಿಕ್ಷಕರ ಅಗತ್ಯವಿದೆ. ಶಿಕ್ಷಕರ ಸಂಖ್ಯೆ ಕಡಿಮೆಯಾದರೆ ಅದರಿಂದ ಮೇಲಿನ ತರಗತಿಗಳ ಮೇಲೂ ಪ್ರಭಾವ ಬೀರುತ್ತದೆ. ಕೊಠಡಿಗಳ ಸಂಖ್ಯೆಯೂ ಕಡಿಮೆ ಇದೆ. ಕಳೆದ ವರ್ಷ ಎರಡು ಕೊಠಡಿಗಳನ್ನು ಪ್ರೌಢಶಾಲೆಯವರು ಪಡೆದಿದ್ದರು. ಅದನ್ನು ವಾಪಸ್ಸು ನೀಡಿದರೆ ದೊಡ್ಡ ಸಮಸ್ಯೆಯಾಗದು. ಇಲ್ಲವಾದರೆ ಸಮಸ್ಯೆಯಾಗುತ್ತದೆ ಎನ್ನುತ್ತಾರೆ ಶಾಲೆಯ ಮುಖ್ಯೋಪಾಧ್ಯಾಯರು.

ಖುಷಿಯಾಗಿದೆ
ನನ್ನ ದೊಡ್ಡ ಮಗಳು ವಳಕಾಡು ಶಾಲೆಯಲ್ಲಿ 4ನೇ ತರಗತಿಯಲ್ಲಿ ಕನ್ನಡ ಮಾಧ್ಯಮದಲ್ಲಿ ಓದುತ್ತಿದ್ದಾಳೆ. ಎರಡನೆಯವಳನ್ನು ಕೂಡ ಇದೇ ಶಾಲೆಯಲ್ಲಿ ಓದಿಸಲು ನಿರ್ಧರಿಸಿದ್ದೆ. ಇದೀಗ ಇಲ್ಲಿ ಒಂದನೇ ತರಗತಿಯಿಂದ ಆಂಗ್ಲಮಾಧ್ಯಮ ಆರಂಭವಾಗುತ್ತಿರುವುದು ಖುಷಿಯಾಗಿದೆ. ಆದರೆ ಇಲ್ಲಿ ಕ್ಲಾಸ್‌ರೂಮ್‌, ಶಿಕ್ಷಕರ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಇಲ್ಲಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡುವಾಗಲೂ ಗುಣಮಟ್ಟ ಉತ್ತಮವೇ ಇತ್ತು. ಈ ವರ್ಷ ಒಂದನೇ ತರಗತಿಗೆ ದಾಖಲಾಗುವ ವಿದ್ಯಾರ್ಥಿಗಳ ಸಂಖ್ಯೆ ಇನ್ನೂ ಹೆಚ್ಚಾಗಬಹುದು. ಇದಕ್ಕೆ ಪೂರಕವಾಗಿ ಶಿಕ್ಷಕರು, ಕೊಠಡಿಗಳ ಅಗತ್ಯವಿದೆ. ಇಲಾಖೆಯ ಜತೆಗೆ ದಾನಿಗಳು ಕೂಡ ಸಹಕರಿಸಿದರೆ ಒಳ್ಳೆಯದು.
– ರಶ್ಮಿ, ಹೆತ್ತವರು

ಟಾಪ್ ನ್ಯೂಸ್

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

ಕುಷ್ಟಗಿ: ಪ್ರಜಾಪ್ರಭುತ್ವ ಉಳಿವಿಗೆ ಮತ, ಪರಿಸರಕ್ಕಾಗಿ ಮರ

ಕುಷ್ಟಗಿ: ಪ್ರಜಾಪ್ರಭುತ್ವ ಉಳಿವಿಗೆ ಮತ, ಪರಿಸರಕ್ಕಾಗಿ ಮರ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.