ಜಿಂದಾಲ್‌ಗೆ ಜಮೀನು ಮಾರಾಟಕ್ಕೆ ಒಪ್ಪಿಗೆ

ಸರ್ಕಾರದ ನಿರ್ಧಾರಕ್ಕೆ ಕಾಂಗ್ರೆಸ್‌ ಮುಖಂಡ ಎಚ್.ಕೆ.ಪಾಟೀಲ್ ಆಕ್ಷೇಪ, ರಾಜ್ಯ ಸರ್ಕಾರಕ್ಕೆ ಮುಜುಗರ

Team Udayavani, May 28, 2019, 6:00 AM IST

vidhana-soudha-750

ಬೆಂಗಳೂರು: ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನಲ್ಲಿ ಜೆಎಸ್‌ಡಬ್ಲು (ಜಿಂದಾಲ್) ಸಂಸ್ಥೆಗೆ ಹತ್ತು ವರ್ಷಗಳ ಲೀಸ್‌ಗೆ ನೀಡಿದ್ದ 3,667 ಎಕರೆ ಜಮೀನನ್ನು ಸಂಸ್ಥೆಗೆ ಮಾರಾಟ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.


ಆದರೆ, ಸಂಪುಟದ ಈ ತೀರ್ಮಾನಕ್ಕೆ ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪತ್ರ ಸಹ ಬರೆದಿದ್ದಾರೆ.

ಸಂಪುಟದ ತೀರ್ಮಾನದ ಬೆನ್ನಲ್ಲೇ ಸಮ್ಮಿಶ್ರ ಸರ್ಕಾರದ ಮಿತ್ರಪಕ್ಷ ಕಾಂಗ್ರೆಸ್‌ ಮುಖಂಡ ರಾದ ಎಚ್.ಕೆ.ಪಾಟೀಲ್ ಅವರು ಬಹಿರಂಗ ವಾಗಿಯೇ ಪತ್ರ ಬರೆದು ಅಸಮಾಧಾನ ವ್ಯಕ್ತಪಡಿಸಿರುವುದು ಸರ್ಕಾರಕ್ಕೆ ಒಂದು ರೀತಿಯಲ್ಲಿ ಮುಜುಗರ ಉಂಟಾಗಿದೆ.

ಏನಿದು ಪ್ರಕರಣ?: 2006-07 ರಲ್ಲಿ ಜಿಂದಾಲ್ ಸಂಸ್ಥೆಗೆ ಲೀಸ್‌ ಕಮ್‌ ಸೇಲ್ ಡೀಡ್‌ ಆಧಾರದಲ್ಲಿ ಹತ್ತು ವರ್ಷಗಳ ಅವಧಿಗೆ ಜಮೀನು ನೀಡಲಾಗಿತ್ತು. ಆ ಒಪ್ಪಂದದಂತೆ ಸಂಪುಟ ಸಭೆಯಲ್ಲಿ ಖರೀದಿಗೆ ನೀಡುವ ನಿರ್ಣಯ ಕೈಗೊಳ್ಳಲಾಗಿದೆ .

2006-07 ರಲ್ಲಿ ಜೆಡಿಎಸ್‌ -ಬಿಜೆಪಿ ಮೈತ್ರಿ ಸರ್ಕಾರದ ಅವಧಿಯಲ್ಲಿ 1.22 ಲಕ್ಷ ರೂ.ಗೆ ಒಂದು ಎಕರೆ ಜಮೀನು ಜಿಂದಾಲ್ ಸಂಸ್ಥೆಗೆ ಉಕ್ಕಿನ ಕಾರ್ಖಾನೆ ಸ್ಥಾಪಿಸಲು ಹತ್ತು ವರ್ಷ ಗಳ ಲೀಸ್‌ ಕಮ್‌ ಸೇಲ್ ಆಧಾರದಲ್ಲಿ ಜಮೀನು ನೀಡಲಾಗಿತ್ತು. ಈಗ ಅವರಿಗೆ ಜಮೀನು ನೀಡಿ ಹತ್ತು ವರ್ಷ ಕಳೆದಿರು ವುದರಿಂದ ಜಿಂದಾಲ್ ಸಂಸ್ಥೆಯೊಂದಿಗೆ ಮಾಡಿಕೊಂಡ ಒಪ್ಪಂದದಂತೆ ಅವರಿಗೆ ಜಮೀನು ಮಾರಾಟ ಮಾಡಲು ನಿರ್ಧರಿಸ ಲಾಗಿದೆ. ಜಿಂದಾಲ್ ಸಂಸ್ಥೆ ಆರಂಭದಲ್ಲಿ 18 ಕೋಟಿ ರೂಪಾಯಿ ನೀಡಿತ್ತು. ಈಗ ಖರೀದಿಯ ಲೆಕ್ಕ ಹಾಕಿ ಬಾಕಿ ಹಣವನ್ನು ಸಂಸ್ಥೆಯಿಂದ ಪಡೆಯಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಜಿಂದಾಲ್ ಸಂಸ್ಥೆಗೆ ಜಮೀನು ನೀಡುವ ಕುರಿತಂತೆ ಅಡ್ವೋಕೇಟ್ ಜನರಲ್ ಅವರ ಅಭಿಪ್ರಾಯ ಪಡೆಯಲಾಗಿದ್ದು, 2006ರಲ್ಲಿ ಆಗಿರುವ ಒಪ್ಪಂದದಂತೆ ಸಂಸ್ಥೆ ಈಗಾಗಲೇ ಉದ್ಯಮ ಸ್ಥಾಪಿಸಿ ಕಾರ್ಯನಿರ್ವಹಿಸುತ್ತಿರು ವುದರಿಂದ ಜಮೀನು ಮಾರಾಟ ಮಾಡ ಬಹುದು ಎಂದು ತಿಳಿಸಿದ್ದಾರೆ. ಆಗಿನ ಒಪ್ಪಂದದಂತೆ ಸಂಪುಟ ತೀರ್ಮಾನ ತೆಗೆದು ಕೊಂಡಿದೆ. ಬಿಜೆಪಿ ನಾಯಕ ಜಗದೀಶ್‌ ಶೆಟ್ಟರ್‌ ಆರೋಪಿಸಿರುವಂತೆ ಇದರಲ್ಲಿ ಯಾವುದೇ ಹಗರಣ ನಡೆದಿಲ್ಲ ಎಂದು ಹೇಳಿದರು.

ಬಿಜೆಪಿಯವರ ಅವಧಿಯಲ್ಲಿಯೇ ಈ ಒಪ್ಪಂದವಾಗಿದ್ದು, ಆಗ ಜಗದೀಶ್‌ ಶೆಟ್ಟರ್‌ ಅವರೂ ಸಚಿವರಾಗಿದ್ದರು. ಏನಾದರೂ ಅಕ್ರಮವಾಗಿದ್ದರೇ ಅವರ ಅವಧಿಯಲ್ಲಿಯೇ ನಡೆದಿರಬಹುದು ಎಂದು ತಿರುಗೇಟು ನೀಡಿದರು.

ಸಂಪುಟ ನಿರ್ಣಯಕ್ಕೆ ವಿರೋಧ
ಬೆಂಗಳೂರು
: ಜಿಂದಾಲ್ ಸಂಸ್ಥೆಗೆ 3667 ಎಕರೆ ಜಮೀನು ಮಾರಾಟ ಮಾಡಲು ನಿರ್ಧರಿಸಿರುವ ಸರ್ಕಾರದ ನಿರ್ಧಾರಕ್ಕೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ. ಪಾಟೀಲ್ ವಿರೋಧ ವ್ಯಕ್ತಪಡಿಸಿ ಸಿಎಂ ಕುಮಾರಸ್ವಾಮಿಗೆ ಪತ್ರ ಬರೆದಿದ್ದಾರೆ.

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ ಮತ್ತು ಕರೆಕುಪ್ಪ ಗ್ರಾಮಗಳಲ್ಲಿ 2000.58 ಎಕರೆ ಹಾಗೂ ಮೋಸೆನಾಯಕನಹಳ್ಳಿ ಮತ್ತು ಯರಬನಹಳ್ಳಿಯಲ್ಲಿ 1666.73 ಎಕರೆ ಜಮೀನನ್ನು ಜಿಂದಾಲ್ ಸಂಸ್ಥೆಗೆ ಕ್ರಯ ಪತ್ರ ಮಾಡಿಕೊಡಲು ಸಂಪುಟದಲ್ಲಿ ತೀರ್ಮಾನಿಸಲಾಗಿದೆ. 2013 ರಿಂದ 18ರ ಅವಧಿಯಲ್ಲಿ ಉಕ್ಕು ಮತ್ತು ಗಣಿ ಗಾರಿಕೆ ಕೈಗಾರಿಕೆಗಳಿಗೆ ಜಮೀನು ಮಂಜೂರು ಮಾಡುವ ಸಂದರ್ಭದಲ್ಲಿ ರಾಜ್ಯದ ಬೊಕ್ಕಸಕ್ಕೆ ಆಗುವ ಪರಿಣಾಮಗಳನ್ನು ಪರಿಗಣಿಸ ಬೇಕೆಂದು ಉಪ ಸಮಿತಿ ನಿರ್ಣಯಿಸಿತ್ತು.

ಜಿಂದಾಲ್ ಸಂಸ್ಥೆಯಿಂದ ಸರ್ಕಾರಿ ಸ್ವಾಮ್ಯದ ಎಂ.ಎಸ್‌.ಐ.ಎಲ್ ಸಂಸ್ಥೆಗೆ ನಷ್ಟ ಉಂಟಾಗಿದ್ದು, 1200 ಕೋಟಿ ರೂ.ಬಾಕಿ ಪಾವತಿಸಬೇಕಿದೆ. ಈ ರೀತಿ ರಾಜ್ಯ ಸರ್ಕಾರಕ್ಕೆ ಸಾವಿರಾರು ಕೋಟಿ ರೂ. ಬಾಕಿ ನೀಡಬೇಕಿರುವ ಸಂಸ್ಥೆಯಿಂದ ಬಾಕಿ ಹಣ ವಸೂಲು ಮಾಡದೇ ಜಮೀನು ಮಾರಾಟ ಮಾಡುತ್ತಿರುವುದು ಒಳ್ಳೆಯ ಸಂಗತಿಯಲ್ಲ. ರಾಜ್ಯ ಸರ್ಕಾರದಲ್ಲಿ ಮುಖ್ಯ ಕಾರ್ಯದರ್ಶಿಯಾಗಿದ್ದವರು ನಿವೃತ್ತಿ ನಂತರ ಜಿಂದಾಲ್ ಸಂಸ್ಥೆಯಲ್ಲಿ ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅಂತಹ ಅಧಿಕಾರಿಗಳು ತಾವು ಅಧಿಕಾರದಲ್ಲಿದ್ದಾಗ ಮಂಡಿಸಿದ ಪ್ರಸ್ತಾವನೆಗಳನ್ನು ಮಂಜೂರಾತಿ ಪಡೆಯಲು ಸರ್ಕಾರದ ಮೇಲೆ ಪ್ರಭಾವ ಬೀರಿ, ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡುವ ಪ್ರಸ್ತಾವನೆಗಳ ಕುರಿತು ಮರು ಚಿಂತನೆ ಅಗತ್ಯವೆಂದು ಪತ್ರದಲ್ಲಿ ತಿಳಿಸಿದ್ದಾರೆ.

ಅಲ್ಲದೇ 20014-19 ರ ಕೈಗಾರಿಕಾ ನೀತಿಯಲ್ಲಿ ಕೈಗಾರಿಕೆಗಳಿಗೆ 99 ವರ್ಷ ಅವಧಿಗೆ ಲೀಸ್‌ ಆಧಾರದಲ್ಲಿ ಸರ್ಕಾರದ ಜಮೀನು ಒದಗಿಸಲು ಅವಕಾಶ ಕಲ್ಪಿಸಲಾಗಿದೆ. ಸರ್ಕಾರಿ ಜಮೀನನ್ನು ಮಾರಾಟ ಮಾಡುವ ಉದ್ದೇಶದಿಂದಲೇ ಈ ಅವಕಾಶ ಕಲ್ಪಿಸಲಾಗಿದ್ದು, ಆ ನೀತಿಗೆ ಅನುಗುಣವಾಗಿ ಸರ್ಕಾರ ಕಾರ್ಯ ನಿರ್ವಹಿಸಿದರೆ,ಅಪಾರ ಪ್ರಮಾಣದ ಆಸ್ತಿ ಖಾಸಗಿಯವರ ಪಾಲಾಗುವುದು ತಪ್ಪುತ್ತದೆ. 1.22 ಲಕ್ಷ ರೂ.ಗೆ ಒಂದು ಎಕರೆ ಜಮೀನು ಮಾರಾಟ ಮಾಡುವುದು ಸರ್ಕಾರದ ಬೊಕ್ಕಸಕ್ಕೆ ಭಾರೀ ನಷ್ಟ ಉಂಟಾಗಲಿದ್ದು, ಇಂತಹ ಅಸಮಂಜಸ ನಿರ್ಣಯ ಕೈ ಬಿಡಬೇಕೆಂದು ಎಚ್.ಕೆ. ಪಾಟೀಲ್ ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಶೆಟ್ಟರ್‌ ಅನುಮಾನ: ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಕೂಡ ಸಂಪುಟದ ಈ ತೀರ್ಮಾನದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ಕೋಟ್ಯಂತರ ರೂ.ಬೆಲೆ ಬಾಳುವ ಜಮೀನನ್ನು ಖಾಸಗಿ ಸಂಸ್ಥೆಗೆ ಮಾರಾಟ ಮಾಡಲು ಸರ್ಕಾರ ನಿರ್ಧರಿಸಿರುವುದರ ಹಿಂದೆ ಹಗರಣ ನಡೆದಿರುವ ಸಾಧ್ಯತೆ ಇದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಸಭೆಯ ಪ್ರಮುಖ ನಿರ್ಣಯಗಳು
•ರಾಮನಗರ ಜಿಲ್ಲೆಯ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ವಿವಿಧ ಮೂಲಸೌಕರ್ಯ ಹಾಗೂ ಅಭಿವೃದ್ಧಿ ಕಾಮಗಾರಿಗಾಗಿ 61.24 ಕೋಟಿ ರೂ. ಮಂಜೂರು.

••ಸುಗ್ರೀವಾಜ್ಞೆ ಮೂಲಕ ರಾಯಚೂರು ವಿಶ್ವವಿದ್ಯಾನಿಲಯದ ಸ್ಥಾಪನೆಗಾಗಿ 6.99 ಕೋಟಿ ರೂ.ಗಳನ್ನು ಒದಗಿಸಲು ಅನುಮೋದನೆ ನೀಡಲಾಗಿದೆ.

••ಕಾರ್ಕಳ ಪಟ್ಟಣದ ಹಾಲಿ ಒಳಚರಂಡಿ ಅಭಿವೃದ್ಧಿ ಯೋಜನೆಗಾಗಿ 13 ಕೋಟಿ ರೂ.ಒದಗಿಸಲು ಅನುಮೋದನೆ.

••ಜವಾಹರಲಾಲ್ ನೆಹರೂ ರಾಷ್ಟ್ರೀಯ ನಗರ ನವೀಕರಣ ಮೀಷನ್‌ ಯೋಜನೆಯಡಿ ಮೈಸೂರು ನಗರಕ್ಕೆ 24್ಡ7 ನೀರು ಸರಬರಾಜು ಮಾಡುವ ಯೋಜನೆಗೆ ಕೇಂದ್ರ ಸರ್ಕಾರದ ಅನುದಾನ ಪಾಲು 85.60 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರದಿಂದಲೇ ಒದಗಿಸಲು ಒಪ್ಪಿಗೆ.

••ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ಹಾಸ್ಟೆಲ್ ಕಟ್ಟಡ ನಿರ್ಮಾಣ ಮಾಡಲು 22.89 ಕೋಟಿ ರೂ.ಗಳನ್ನು ಒದಗಿಸಲು ಒಪ್ಪಿಗೆ .

••ಕೃಷ್ಣರಾಜಸಾಗರ ಅಣೆಕಟ್ಟೆಯ ಎಡಭಾಗದ ವಿಶ್ವೇಶ್ವರಯ್ಯ ನಾಲೆಯ ಮುಖ್ಯ ನಾಲೆ ಮತ್ತು ಶಾಖಾ ನಾಲೆಗಳ ಅಭಿವೃದ್ಧಿಗೆ 522.37 ಕೋಟಿ ರೂ.ಗಳ ಕಾಮಗಾರಿ ಕೈಗೊಳ್ಳಲು ಒಪ್ಪಿಗೆ.

••ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಚಾಕೇನಹಳ್ಳಿ ಮತ್ತು 23 ಗ್ರಾಮಗಳ ಹಾಗೂ ಕೋಡಿಹಳ್ಳಿ ಹಾಗೂ ಇತರೆ 13 ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಕಾಮಗಾರಿ ಕೈಗೊಳ್ಳಲು 17.94 ಕೋಟಿ ರೂ.ಗಳಿಗೆ ಆಡಳಿತಾತ್ಮಕ ಅನುಮೋದನೆ.

••ಹಾಸನದಲ್ಲಿ ನೋ ಫ್ರಿಲ್ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಮೆ|| ರೈಟ್ಸ್ ಸಂಸ್ಥೆಗೆ ತಾಂತ್ರಿಕ ಸಹಾಯ ಮತ್ತು ಮೂರನೇ ವ್ಯಕ್ತಿ ಪರಿವೀಕ್ಷಣಾ ಸೇವೆ ಪಡೆಯಲು ಒಪ್ಪಿಗೆ.

••ಮೈಸೂರಿನಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಶಾಖೆಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಹೆಚ್ಚುವರಿಯಾಗಿ ಉಂಟಾಗಿರುವ ಮಾರ್ಪಾಡು ಕಾಮಗಾರಿಗಳಿಗೆ ಸೇರಿದಂತೆ 168.59 ಕೋಟಿ ರೂ.ಗಳ ಪರಿಷ್ಕೃತ ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ.

••ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ನೋಟಾ ಅಳವಡಿಸಲು ತೀರ್ಮಾನ.

• ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ವಸತಿ ಶಿಕ್ಷಣ ಸಂಸ್ಥೆಗಳ 15 ಪರಿಶಿಷ್ಟ ಜಾತಿ ಮತ್ತು ಪಂಗಡದ ವಿವಿಧ ವಸತಿ ಶಾಲೆಗಳ ಕಟ್ಟಡದ ನಿರ್ಮಾಣಕ್ಕೆ 377.15 ಕೋಟಿ ರೂ.ಗಳಿಗೆ ಕಾಮಗಾರಿ ಕೈಗೊಳ್ಳಲು ಒಪ್ಪಿಗೆ.

••ಮದ್ದೂರು ಪಟ್ಟಣಕ್ಕೆ 2ನೇ ಹಂತದ ಒಳಚರಂಡಿ ಕಲ್ಪಿಸಲು 50.15 ಕೋಟಿ ರೂ.ಗಳ ಯೋಜನೆಗೆ ಆಡಳಿತಾತ್ಮಕ ಅನುಮೋದನೆ.

••ಹೇಮಾವತಿ ನದಿ ಮೂಲದಿಂದ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿಗೆ ಸಮಗ್ರ ಕುಡಿಯುವ ನೀರು ಒದಗಿಸುವ ಯೋಜನೆಗಾಗಿ 62.45 ಕೋಟಿ ರೂ.ಗಳ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ.

••ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ 358 ಗ್ರಾಮ ಪಂಚಾಯತ್‌ ಕಾರ್ಯದರ್ಶಿ, ಗ್ರೇಡ್‌ 2 ಹುದ್ದೆಗಳನ್ನು ತುಂಬಲು ಹಾಗೂ 95 ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳನ್ನು ತುಂಬಲು ಅನುಮೋದನೆ.

••ಬರದ ಛಾಯೆ ಇರುವ ಪ್ರದೇಶಗಳಲ್ಲಿ 2019 ಮತ್ತು 2020ರಲ್ಲಿ ಮೋಡಬಿತ್ತನೆ ಕಾರ್ಯಾಚರಣೆ ಕೈಗೊಳ್ಳಲು 2 ವಿಮಾನ ಹಾಗೂ 3 ರೇಡಾರ್‌ಗಳನ್ನು ಬಳಸಲು 93 ಕೋಟಿ. ರೂಗಳನ್ನು ವೆಚ್ಚ ಮಾಡಲು ಅನುಮೋದನೆ.

••ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ 1,000 ಹಾಸಿಗೆ ಸಾಮರ್ಥ್ಯದ ಹೆಚ್ಚುವರಿ ವಾರ್ಡ್‌ ನಿರ್ಮಾಣಕ್ಕಾಗಿ 59 ಕೋಟಿ ರೂ.ಗಳ ಕಾಮಗಾರಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ.

••ಹೊಳೆನರಸೀಪುರ ತಾಲೂಕಿನ ಚಾಕೇನಹಳ್ಳಿ ಕೆರೆಗೆ ಹೇಮಾವತಿ ಯಿಂದ 140 ಎಂ.ಸಿ.ಎಫ್.ಟಿ ನೀರನ್ನು ಎತ್ತಿ ಕುಡಿಯುವ ನೀರಿಗಾಗಿ ಏತ ನೀರಾವರಿ ನಾಲೆ ನಿರ್ಮಾಣ ಕಾಮಗಾರಿಗೆ 54 ಕೋಟಿ ರೂ.ಗಳನ್ನು ಒದಗಿಸಲು ತೀರ್ಮಾನ

••ವಿಜಯಪುರದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ವಿ.ವಿ.ಎಸ್‌ ಆಯುರ್ವೇದ ಮಹಾವಿದ್ಯಾಲಯಕ್ಕೆ ಗುತ್ತಿಗೆ ನೀಡಿರುವ ಜಮೀನನ್ನು ಖಾಯಂ ಮಂಜೂರು ಮಾಡಲು ಒಪ್ಪಿಗೆ.

••ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿ ತೇರಗಾಂವ, ಕಾವಲವಾಡ ಮತ್ತು 91 ಗ್ರಾಮಗಳಿಗೆ ಕುಡಿಯುವ ನೀರಿನ ಯೋಜನೆಯನ್ನು ಕೈಗೊಳ್ಳಲು 119 ಕೋಟಿ ರೂ.ಗಳಿಗೆ ಆಡಳಿತಾತ್ಮಕ ಅನುಮೋದನೆ.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.