ಈಶ್ವರಮಂಗಲ: ಅಂತಾರಾಜ್ಯ ರಸ್ತೆಯಲ್ಲಿ ಸಂಚಾರಕ್ಕೆ ಆತಂಕ

 ರಸ್ತೆ ಅಭಿವೃದ್ಧಿ ಆಗದೆ ಸಮಸ್ಯೆ

Team Udayavani, May 29, 2019, 6:00 AM IST

e-14

ಈಶ್ವರಮಂಗಲ: ಕೇರಳ-ಕರ್ನಾಟಕ ಗಡಿಭಾಗದಲ್ಲಿರುವ ಕೇರಳ ರಾಜ್ಯವನ್ನು ಸಂಪರ್ಕಿಸುವ ಈಶ್ವರಮಂಗಲ – ಸುಳ್ಯಪದವು ರಸ್ತೆಯನ್ನು ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿ ಗೊಳಿಸಲು ಇನ್ನೂ ಕಾಲ ಕೂಡಿ ಬಂದಿಲ್ಲ. ಚುನಾವಣೆ ಸಂದರ್ಭ ಭರವಸೆ ನೀಡುವ ನಾಯಕರು ಅನಂತರ ಗಡಿನಾಡ ರಸ್ತೆ ಅಭಿವೃದ್ಧಿಗೆ ಕುಂಟು ನೆಪ ಹೇಳುತ್ತಿದ್ದಾರೆ.

ಈಶ್ವರಮಂಗಲ-ಸುಳ್ಯಪದವು ಜಿ.ಪಂ. ರಸ್ತೆ ಕೇರಳ ರಾಜ್ಯವನ್ನು ಸಂಪರ್ಕಿಸುತ್ತದೆ. ಮೂರು ದಶಕಗಳಿಂದ ಈ ರಸ್ತೆ ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿಗೊಂಡಿಲ್ಲ. ಕಾಂಗ್ರೆಸ್‌, ಬಿಜೆಪಿ ಶಾಸಕರು ಆಯ್ಕೆಯಾ ದರೂ ಈ ರಸ್ತೆ ಹೊಂಡಗಳಿಂದ ಮುಕ್ತಿ ಗೊಂಡಿಲ್ಲ. ವರ್ಷ ವರ್ಷ ಈ ರಸ್ತೆ ಅಭಿ ವೃದ್ಧಿಗೆ ಲಕ್ಷಾಂತರ ರೂಪಾಯಿ ವ್ಯಯಿಸಿ ಕೊಟ್ಟ ಅನುದಾನ ಕೋಟ್ಯಂತರ ರೂಪಾಯಿ ಆಗಿ ಹೋಗಿದೆ. ರಸ್ತೆ ಮಾತ್ರ ನಾದುರಸ್ತಿಯಲ್ಲಿದೆ.

ರಸ್ತೆ ಅಭಿವೃದ್ಧಿ ಅನಿವಾರ್ಯ
ಕೇರಳ – ಕರ್ನಾಟಕ ಗಡಿಭಾಗದ ಜನರಿಗೆ ಈ ರಸ್ತೆ ಅನಿವಾರ್ಯವಾಗಿದೆ. ಈಶ್ವರಮಂಗಲ ಅಭಿವೃದ್ಧಿ ಹೊಂದುತ್ತಿರುವ ಪ್ರದೇಶವಾಗಿದೆ. ಗಡಿಭಾಗದ ಜನರು ಈಶ್ವರಮಂಗಲ ಪೇಟೆಯನ್ನು ಅವಲಂಬಿಸಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರ, ಪಶು ಆಸ್ಪತ್ರೆ, ಗ್ರಾಮ ಕರಣಿಕರ ಕಚೇರಿ, ಶಿಕ್ಷಣ ಸಂಸ್ಥೆ, ಬ್ಯಾಂಕ್‌, ವಾಣಿಜ್ಯ ಮಳಿಗೆಗಳು, ದೂರವಾಣಿ ವಿನಿಮಯ ಕೇಂದ್ರ ಹೀಗೆ ಗ್ರಾಮಸ್ಥರು ಈ ಪ್ರದೇಶವನ್ನು ಅವಲಂಬಿಸಿದ್ದಾರೆ.

ರಸ್ತೆ ಮೇಲೆ ನೀರು
ಚರಂಡಿಯ ಸಮರ್ಪಕ ವ್ಯವಸ್ಥೆ ಇಲ್ಲದೇ ಇರುವುದರಿಂದ ಮಳೆಗಾಲದಲ್ಲಿ ನೀರು ರಸ್ತೆ ಮೇಲೆ ಹರಿಯುತ್ತಿರುವ ಕಾರಣ ಇದ್ದ ಅಲ್ಪಸ್ವಲ್ಪ ಡಾಮರು ಕೂಡ ಕೊಚ್ಚಿ ಹೋಗುತ್ತಿದೆ. ಬೇಸಗೆಯಲ್ಲಿ ರಸ್ತೆಯು ಧೂಳಿನಿಂದ ಕೂಡಿರುತ್ತದೆ. ಇದರಿಂದ ಸವಾರರಿಗೆ ತೊಂದರೆಯಾಗುತ್ತಿದೆ. ಚರಂಡಿ ಗಳಲ್ಲಿ ಮೆಸ್ಕಾಂ ವಿದ್ಯುತ್‌ ಕಂಬಗಳು, ಬಡಗನ್ನೂರು ಗ್ರಾ.ಪಂ. ಸಂಬಂಧಪಟ್ಟ ಕುಡಿಯುವ ನೀರಿನ ಕೊಳವೆ ಬಾವಿಗಳು, ಅದರ ಶೆಡ್ಡಗಳು ಇವೆ. ಅಲ್ಲಲ್ಲಿ ರಸ್ತೆಯಲ್ಲಿ ಹೊಂಡಗಳು ಇದ್ದು ಮಳೆಯ ನೀರು ತುಂಬಿ ವಾಹನ ಸಂಚಾರ ದುಸ್ತರವಾಗಿದೆ.

ನೆಟ್ಟಣಿಗೆಮುಟ್ನೂರು ಮತ್ತು ಪಡುವನ್ನೂರು ಗ್ರಾಮಗಳಲ್ಲಿ ಹಾದು ಹೋಗುವ ಈಶ್ವರಮಂಗಲ ಸುಳ್ಯಪದವು ಜಿ.ಪಂ. ರಸ್ತೆಯು ಕನ್ನಡ್ಕ ರಕ್ಷಿತಾರಣ್ಯದಲ್ಲಿ ಹಾದು ಹೋಗುತ್ತದೆ. ರಕ್ಷಿತಾರಣ್ಯದ ಕೆಲ ಮರಗಳು ರಸ್ತೆಗೆ ವಾಲಿಕೊಂಡಿದ್ದು, ಬೇರುಗಳು ಮಣ್ಣಿನಿಂದ ಬೇರ್ಪಟ್ಟಿವೆ.

ಬಲವಾದ ಗಾಳಿ ಬೀಸಿದರೆ ಮರಗಳು ರಸ್ತೆಗೆ ಬೀಳಲಿವೆ. ಇದರಿಂದ ಅನಾಹುತಗಳು ನಡೆಯುವ ಸಾಧ್ಯತೆಗಳು ಹೆಚ್ಚಿವೆ. ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಶೀಘ್ರವಾಗಿ ಸ್ಪಂದಿಸಬೇಕಾಗಿದೆ.

ಈ ರಸ್ತೆ ಬಗ್ಗೆ ಸ್ಥಳೀಯರೊಬ್ಬರು ಪ್ರಧಾನಮಂತ್ರಿ ಕಾರ್ಯಾಲಯಕ್ಕೆ ಮನವಿ ಮಾಡಿ ರಸ್ತೆ ಅಭಿವೃದ್ಧಿಪಡಿಸುವಂತೆ ಮನವಿ ಮಾಡಿ ಎರಡು ವರ್ಷ ಕಳೆದಿದೆ. ಜಿ.ಪಂ. ಎಂಜಿನಿಯರಿಂಗ್‌ ವಿಭಾಗದಿಂದ ವರದಿ ಕಾರ್ಯಾಲಯಕ್ಕೆ ತಲುಪಿದರೂ ಪ್ರಯೋಜನವಾಗಿಲ್ಲ.

 ಪೂರ್ಣಪ್ರಮಾಣದ ಅನುದಾನ ಬಂದಿಲ್ಲ
ಮಳೆಹಾನಿಯ ಅನುದಾನ ಇದೆ. ನೀರಿನ ಸಮಸ್ಯೆಯಿಂದಾಗಿ ರಸ್ತೆ ಕಾಮಗಾರಿ ನಡೆದಿಲ್ಲ. ಆಯ್ದ ಸ್ಥಳವನ್ನು ಗುರುತಿಸಿ ಕಾಮಗಾರಿ ನಡೆಸುತ್ತೇವೆ. ಪೂರ್ಣ ಪ್ರಮಾಣದಲ್ಲಿ ರಸ್ತೆ ಅಭಿವೃದ್ಧಿಗೆ ಯಾವುದೇ ಅನುದಾನ ಬಂದಿಲ್ಲ.
– ಗೋವರ್ಧನ, ಜಿ.ಪಂ. ಎಂಜಿನಿಯರ್‌

– ಮಾಧವ ನಾಯಕ್‌ ಕೆ.

ಟಾಪ್ ನ್ಯೂಸ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.