ಪಿಎಂ ಮೋದಿ-ಇಮ್ರಾನ್ ಖಾನ್ ಭೇಟಿ: ಅಂತಿಮ ನಿರ್ಧಾರ ಆಗಿಲ್ಲ
Team Udayavani, May 29, 2019, 6:10 AM IST
ಹೊಸದಿಲ್ಲಿ: ಮುಂದಿನ ತಿಂಗಳು ಬಿಷೆRàಕ್ನಲ್ಲಿ ನಡೆಯಲಿರುವ ಶಾಂಘೈ ಸಹಕಾರ ಶೃಂಗದ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಭೇಟಿಯಾಗಿ ಮಾತು ಕತೆ ನಡೆಸಲಿದ್ದಾರೆ ಎಂಬ ಸುದ್ದಿ ಹರ ಡಿದ್ದು, ಇದನ್ನು ಸರಕಾರದ ಅಧಿಕೃತ ಮೂಲಗಳು ಅಲ್ಲಗಳೆದಿವೆ.
ಕಿರ್ಗಿಸ್ತಾನದ ರಾಜಧಾನಿ ಬಿಷೆRàಕ್ನಲ್ಲಿ ನಡೆಯುವ ಶೃಂಗದಲ್ಲಿ ಮೋದಿ ಪಾಲ್ಗೊಳ್ಳುತ್ತಾರೆ ಎಂಬ ಸುದ್ದಿ ಬಂದ ಬೆನ್ನಲ್ಲೇ ಇಮ್ರಾನ್ ಜತೆ ಮಾತುಕತೆ ಸಾಧ್ಯತೆಯ ಸುದ್ದಿಯೂ ಹರಿದಾಡಿತ್ತು. ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಿರುವ ಅಧಿಕಾರಿಗಳು, “ಭಯೋತ್ಪಾದನೆ ನಿರ್ಮೂಲನೆ ಆಗುವವರೆಗೂ ಪಾಕ್ ಜತೆ ಮಾತುಕತೆ ಇಲ್ಲ ಎಂಬ ನಿಲುವಿಗೆ ಭಾರತ ಬದ್ಧವಾಗಿದೆ. ಮೋದಿ ಮತ್ತು ಖಾನ್ ಮಾತುಕತೆ ಕುರಿತು ಯಾವುದೇ ನಿರ್ಧಾರ ಆಗಿಲ್ಲ’ ಎಂದು ತಿಳಿಸಿದ್ದಾರೆ.
ಮಾತುಕತೆ ಮುಖ್ಯ: ಪ್ರಧಾನಿ ಮೋದಿ ಅವರು ಪ್ರಮಾಣ ಸ್ವೀಕಾರ ಸಮಾರಂಭಕ್ಕೆ ಇಮ್ರಾನ್ ಖಾನ್ಗೆ ಆಹ್ವಾನ ನೀಡದ್ದರ ಕುರಿತು ಪಾಕ್ ವಿದೇಶಾಂಗ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ. ಮೋದಿಯವರ ಆಂತರಿಕ ರಾಜಕೀಯವು ಇಮ್ರಾನ್ ಖಾನ್ಗೆ ಆಹ್ವಾನ ನೀಡಲು ಅವಕಾಶ ಕಲ್ಪಿಸಿರಲಿಕ್ಕಿಲ್ಲ. ಆದರೆ, ಸಮಾರಂಭದಲ್ಲಿ ಭಾಗಿ ಆಗುವುದಕ್ಕಿಂತ ಹೆಚ್ಚಾಗಿ ವಿವಾದಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸುವುದು ಮುಖ್ಯ ಎಂದು ಸಚಿವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು