ನೀರಿನ ಕೊರತೆ ನಡುವೆ ಇಂದು ಶಾಲಾರಂಭ

Team Udayavani, May 29, 2019, 6:20 AM IST

school

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಮೇ 29ರಂದು ಪ್ರಾರಂಭವಾಗಲಿವೆ. ಶೈಕ್ಷಣಿಕ ವರ್ಷಾರಂಭದ ಹಿನ್ನೆಲೆಯಲ್ಲಿ ಮಕ್ಕಳನ್ನು ವಿಶೇಷವಾಗಿ ಸ್ವಾಗತಿಸಲು ಶಾಲೆಯಲ್ಲಿ ಪ್ರಾರಂಭೋತ್ಸವವನ್ನೂ ಬುಧವಾರ ಹಮ್ಮಿಕೊಳ್ಳಲಾಗುತ್ತಿದೆ.

ಜಿಲ್ಲೆಯಲ್ಲಿ ಹೆಚ್ಚಿರುವ ನೀರಿನ ಸಮಸ್ಯೆ ಹಿನ್ನೆಲೆಯಲ್ಲಿ ಮಧ್ಯಾಹ್ನದ ಬಳಿಕ ಶಾಲೆಗಳಿಗೆ ರಜೆ ನೀಡಬೇಕು ಎಂಬ ಯಾವುದೇ ನಿರ್ದೇಶಗಳು ಸರಕಾರದಿಂದ ಬಂದಿಲ್ಲ. ಆದರೆ ಈಗಾಗಲೇ ಕೆಲವು ಶಾಲೆಗಳ ಮುಖ್ಯಸ್ಥರು ನೀರಿನ ಸಮಸ್ಯೆ ಬಗ್ಗೆ ಹೇಳಿಕೊಂಡಿದ್ದು, ಅಂತಹ ಶಾಲೆಗಳಿಗೆ ಅಗತ್ಯಕ್ಕನುಸಾರವಾಗಿ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲು ತಿಳಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್ ಅವರು ತಿಳಿಸಿದ್ದಾರೆ.

ಮೂಲಸೌಕರ್ಯ ಪರಿಶೀಲನೆ

ಉಡುಪಿ: ಜಿಲ್ಲೆಯಲ್ಲಿ ಸರಕಾರಿ, ಅನುದಾನಿತ ಮತ್ತು ಖಾಸಗಿ ಸೇರಿದಂತೆ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಮೇ 29ರಂದು ಆರಂಭ ಗೊಳ್ಳಲಿವೆ. ಜಿಲ್ಲೆಯಲ್ಲಿ ಸುಮಾರು 1.52 ಲಕ್ಷ ವಿದ್ಯಾರ್ಥಿಗಳಿದ್ದಾರೆ. 1,248 ಶಾಲೆಗಳಿವೆ. ಡಿಡಿಪಿಐ ಸೂಚನೆಯಂತೆ ಮಂಗಳವಾರ ಶಿಕ್ಷಕರು ಶಾಲೆಗೆ ಆಗಮಿಸಿ ಶಾಲೆಯ ಶುಚಿತ್ವ ಹಾಗೂ ಇತರ ಮೂಲಸೌಕರ್ಯಗಳ ಪರಿಶೀಲನೆ ನಡೆಸಿದರು. ಬುಧವಾರ ಶಾಲೆಗಳಲ್ಲಿ ಆರಂಭೋತ್ಸವ ನಡೆಯ ಲಿದೆ. ಲಭ್ಯ ಇರುವಲ್ಲಿ ಪಠ್ಯ ಪುಸ್ತಕಗಳ ವಿತರಣೆ ಕೂಡ ನಡೆಯಲಿದೆ.

ಜಿಲ್ಲೆಯಲ್ಲಿ ಸುಮಾರು ಶೇ. 10ರಿಂದ 20ರಷ್ಟು ಶಾಲೆಗಳಿಗೆ ನೀರಿನ ಸಮಸ್ಯೆ ಎದುರಾಗುವ ಬಗ್ಗೆ ಅಂದಾಜಿಸಲಾಗಿದೆ. ಕುಡಿಯುವ ನೀರಿಗೆ ಸಮಸ್ಯೆಯಾಗದಿದ್ದರೂ ಅಂಥಶಾಲೆಗಳಲ್ಲಿ ಅಕ್ಷರ ದಾಸೋಹಕ್ಕೆ ಸಮಸ್ಯೆಯಾಗಬಹುದು. ಈ ಶಾಲೆಗಳ ಬಗ್ಗೆ ನಿಗಾ ಇಡಲು ಮತ್ತು ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಆಯಾ ವಲಯದ ಬಿಇಒಗಳಿಗೆ ಸೂಚಿಸಲಾಗಿದೆ ಎಂದು ಉಡುಪಿ ಡಿಡಿಪಿಐ ಶೇಷಶಯನ ಕಾರಿಂಜ ಅವರು ತಿಳಿಸಿದ್ದಾರೆ.

ಮಿಂಚಿನ ಸಂಚಾರ

ಅಧಿಕಾರಿಗಳು ಶಾಲಾ ಆರಂಭೋತ್ಸವ ದಿನ ಶಾಲೆಗಳಿಗೆ ದಿಢೀರ್‌ ಭೇಟಿ ನೀಡಿ ಮೂಲಸೌಕರ್ಯ, ಶಿಕ್ಷಕರು, ವಿದ್ಯಾರ್ಥಿಗಳ ಹಾಜರಾತಿ ಮೊದಲಾದವುಗಳ ಪರಿಶೀಲನೆ ನಡೆಸಲಿದ್ದಾರೆ. ನಾನು ಕೂಡ ಕೆಲವು ಶಾಲೆಗಳಿಗೆ ಖುದ್ದಾಗಿ ಭೇಟಿ ನೀಡುತ್ತೇನೆ. ಜಿಲ್ಲೆಯಾದ್ಯಂತ ಅಧಿಕಾರಿಗಳ ‘ಮಿಂಚಿನ ಸಂಚಾರ’ ನಡೆಯಲಿದೆ ಎಂದು ಉಡುಪಿ ಡಿಡಿಪಿಐ ತಿಳಿಸಿದ್ದಾರೆ.

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.